HOME » NEWS » State » THOSE WHO RUN THE GOVERNMENT MUST KNOW THE CONSTITUTION NOT THE RSS SAYS SIDDARAMAIAH MAK

ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್​ಎಸ್​ಎಸ್​ ಅಲ್ಲ; ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಟಾಂಗ್

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

news18-kannada
Updated:November 21, 2020, 5:22 PM IST
ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್​ಎಸ್​ಎಸ್​ ಅಲ್ಲ; ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಟಾಂಗ್
ಸಿದ್ದರಾಮಯ್ಯ
  • Share this:
ಬೆಂಗಳೂರು (ನವೆಂಬರ್​ 21); ಸರ್ಕಾರದ ಆಡಳಿತ ನೋಡಿಕೊಳ್ಳುವವರಿಗೆ ಸಂವಿಧಾನದ ಆಶಯಗಳು ತಿಳಿದಿರಬೇಕೆ ಹೊರತು ಆರ್​ಎಸ್​ಎಸ್​ ಅಲ್ಲ. ಆದರೆ, ರಾಜ್ಯ ಬಿಜೆಪಿ ಸರ್ಕಾರ ಆಡಳಿತದ ವೈಫಲ್ಯಗಳನ್ನು ಮರೆಮಾಚಲು, ಜನರ ಗಮನವನ್ನು ಬೇರೆಡೆ ಸೆಳೆಯಲು ಲವ್​ ಜಿಹಾದ್​, ಗೋಹತ್ಯೆ ನಿಷೇಧ ಕಾನೂನು ಎಂದು ಬಡಬಡಿಸುತ್ತಿದೆ. ಇದು ಬಿಜೆಪಿ ನಾಯಕರ ಹತಾಶ ಪ್ರಯತ್ನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಲವ್ ಜಿಹಾದ್​ ಎಂಬ ಪದ ಇತ್ತೀಚೆಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿಟಿ ರವಿ ಸೇರಿದಂತೆ ಅನೇಕ ಸಚಿವರು ಸಹ ಲವ್​ ಜಿಹಾದ್​ ಹಾಗೂ ಗೋಹತ್ಯೆ ವಿರುದ್ಧ ಕಾನೂನು ತರಬೇಕು ಎಂಬ ಕೂಗೆತ್ತುತ್ತಿದ್ದಾರೆ. ಆದರೆ, ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಲವ್ ಜೆಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ಸರ್ಕಾರದ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ನಡೆಸುತ್ತಿದ್ದಾರೆ.


ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಹೀಗಾಗಿ ಸಚಿವ ಸಿಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ.ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ" ಎಂದು ಕಿಡಿಕಾರಿದ್ದಾರೆ.ಇನ್ನೂ ಆರ್​ಎಸ್​ಎಸ್​ ಸಂಘಟನೆಯ ವಿರುದ್ಧವೂ ಹರಿಹಾಯ್ದಿರುವ ಸಿದ್ದರಾಮಯ್ಯ, " ಆರ್ ಎಸ್ ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್ ಎಸ್ ಎಸ್ ಅಲ್ಲ. ಕರ್ನಾಟಕದ ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡುತ್ತೇನೆ.ಮತ್ತು ಆರ್ ಎಸ್ ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿ ವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗೋಹತ್ಯೆ ನಿಷೇಧ ಕಾನೂನಿನ ಕುರಿತು ಮಾತನಾಡಿರುವ ಸಿದ್ದರಾಮಯ್ಯ, "ಗೋಹತ್ಯೆಯ ಬಗ್ಗೆ ಕರ್ನಾಟಕದ ಬಿಜೆಪಿ ನಾಯಕರದ್ದು ದಂದ್ವನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರುಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ" ಎಂದಿದ್ದಾರೆ.ಅಲ್ಲದೆ, "ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ್ ನಾಳೆ ಕಾಂಗ್ರೆಸ್ ಸೇರಲಿದ್ದಾರೆ. ಉಪಚುನಾವಣೆಯಲ್ಲಿ ಅವರೇ ನಮ್ಮ ಅಭ್ಯರ್ಥಿಯಾಗಬಹುದು. ನಾವು ನಾಳೆ ಮಸ್ಕಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು- ಕಾರ್ಯಕರ್ತರ‌ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಿಸುತ್ತೇವೆ.ಪ್ರಕಾಶ್ ಹುಕ್ಕೇರಿಯವರ ಅಸಮಾಧಾನದ ಬಗ್ಗೆ ನನಗೆ ತಿಳಿದಿಲ್ಲ, ಅವರು ನನ್ನ ಜೊತೆಯಲ್ಲಿ ಏನನ್ನೂ ಹೇಳಿಲ್ಲ. ಈ ಅಸಮಾಧಾನದ ಸುದ್ದಿಗಳೆಲ್ಲ ಹುಕ್ಕೇರಿಯವರ ಹೆಸರಿನಲ್ಲಿ ಬಿಜೆಪಿ ನಾಯಕರು ನಡೆಸುತ್ತಿರುವ ಸುಳ್ಳು ಪ್ರಚಾರ ಇದ್ದಿರಲೂ ಬಹುದು. ಅದನ್ನು ತಿಳಿದುಕೊಳ್ತೇವೆ.ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿ ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ.ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗಗತನದ ಹೇಳಿಕೆ ಖಂಡನೀಯ" ಎಂದು ತಿಳಿಸಿದ್ದಾರೆ.
Published by: MAshok Kumar
First published: November 21, 2020, 5:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories