ಬೆಂಗಳೂರು: ಐದು ರಾಜ್ಯಗಳಿಗೆ ಇದೇ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಜೊತೆಗೆ ರಾಜ್ಯದಲ್ಲಿಯೂ ಸಹ ಮೂರು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಮಾಡಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು, ಮತದಾನಕ್ಕೆ ಆಯೋಗ ದಿನಾಂಕ ನಿಗದಿ ಮಾಡಿದೆ. ಏಪ್ರಿಲ್ 17ರಂದು ಈ ಮೂರು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ, ಇದರ ಜೊತೆಗೆ ಜೆಡಿಎಸ್ನ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಆದರೆ, ಸಿಂದಗಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಆಯೋಗ ದಿನಾಂಕ ನಿಗದಿ ಮಾಡಿಲ್ಲ. ಹೀಗಾಗಿ ಸಿಂದಗಿ ಹೊರತುಪಡಿಸಿ, ಈ ಮೂರು ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದೆ.
ಬಿಜೆಪಿ ಸಂಸದರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿದೆ. ಇದೀಗ ಆ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.
2008 ರಿಂದ ನೂತನ ವಿಧಾನಸಭಾ ಕ್ಷೇತ್ರವಾಗಿರುವ ಮಸ್ಕಿ ವಿಧಾನಸಭಾ ಕ್ಷೇತ್ರವು ಈಗಾಗಲೇ 3 ಬಾರಿ ಚುನಾವಣೆ ಎದುರಿಸಿದೆ, ಇದೇ ಮೊದಲು ಬಾರಿ ಉಪಚುನಾವಣೆ ಎದುರಿಸಲು ಸಿದ್ದವಾಗಿದೆ. 2018 ರಲ್ಲಿ ಕಾಂಗ್ರೆಸ್ಸಿನಿಂದ ಆಯ್ಕೆಯಾಗಿದ್ದ ಪ್ರತಾಪಗೌಡ ಪಾಟೀಲ, ಈ ಮೊದಲು ಎರಡು ಚುನಾವಣೆಯಲ್ಲೂ ಅವರೇ ಶಾಸಕರಾಗಿದ್ದರು. 2018 ರ ಚುನಾವಣೆ ಫಲಿತಾಂಶ ಬಂದ ನಂತರದಿಂದಲೂ ಭಿನ್ನಮತಕ್ಕೆ ನಾಂದಿ ಹಾಡಿದ್ದರು. ಕುಮಾರಸ್ವಾಮಿ ಸರಕಾರ ರಚನೆಯಾಗುವಾಗ ಬಹುಮತ ಸಾಬೀತು ಮಾಡುವಾಗಲೂ ಮೊದಲು ತಪ್ಪಿಸಿಕೊಂಡಿದ್ದು ಕೊನೆಯ ಘಳಿಗೆಯಲ್ಲಿ ಬಂದು ಸರಕಾರದ ಪರ ಚಲಾಯಿಸಿದ್ದರು. ನಂತರದಲ್ಲಿ ಸಮ್ಮಿಶ್ರ ಸರಕಾರ ಕೆಡುವಲ್ಲಿಯೂ ಸಹ ಪ್ರಮುಖ ಪಾತ್ರ ವಹಿಸಿ ಕುಮಾರಸ್ವಾಮಿ ಸರಕಾರ ಪತನವಾಗಿ ಬಿಜೆಪಿ ಸರಕಾರ ಬಂದಿದೆ. ಯಡಿಯೂರಪ್ಪ ಸರಕಾರ ಬಂದ ನಂತರ 20 ಕ್ಷೇತ್ರಗಳಿಗೆ ಚುನಾವಣೆ ನಡೆದು 17 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈಗ ಮತ್ತೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ, ಅದರಲ್ಲಿ ಮಸ್ಕಿ ವಿಧಾನ ಸಭಾ ಕ್ಷೇತ್ರವು ಒಂದು.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ತೆರವಾಗಿದೆ. ಇದೀಗ ಆ ಸ್ಥಾನಕ್ಕೆ ಏಪ್ರಿಲ್ 17ರಂದು ಉಪಚುನಾವಣೆ ನಡೆಯಲಿದೆ.
ಇದನ್ನು ಓದಿ: ಹನಿಟ್ರ್ಯಾಪ್ ಮೂಲಕ ಆಪರೇಷನ್ ಕಮಲ; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ
ಮಾರ್ಚ್ 23ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 31ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ