ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಪ್ರಕರಣ; ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ

ನಿನ್ನೆ ರಾತ್ರಿ ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆಂದು ಭಜರಂಗದಳ ಕಾರ್ಯಕರ್ತರು ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಆರ್​.ದಿಲೀಪ್​ ಸ್ಥಳಕ್ಕೆ ಭೇಡಿ ನೀಡಿ, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು

 • Share this:
  ಹುಬ್ಬಳ್ಳಿ,(ಫೆ.17): ಹುಬ್ಬಳ್ಳಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಮೂವರು ಆರೋಪಿಗಳನ್ನು ಪೊಲೀಸರು ಇಂದುಹುಬ್ಬಳ್ಳಿ ಕೋರ್ಟ್​ ಮುಂದೆ​​ ಹಾಜರುಪಡಿಸಲಾಗಿತ್ತು.  ಮಾರ್ಚ್​ 2ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಕೋರ್ಟ್​​ ಆದೇಶ ನೀಡಿದೆ. ತಾಲಿಬ್ ಮಾಜಿದ್, ಆಮಿರ್ ವಾನಿ, ಮತ್ತು ಬಾಷಿತ್ ಸೋಫಿ- ಈ ಮೂವರು ಆರೋಪಿಗಳನ್ನು ಬಂಧಿಸಿ ಹುಬ್ಬಳ್ಳಿಯ ಜೈಲಿಗೆ ರವಾನೆ ಮಾಡಲಾಗಿದೆ. 

  ಗೋಕುಲ ಠಾಣೆ ಪೊಲೀಸರು ಈ ಮೂವರು ಆರೋಪಿಗಳನ್ನು ಬಂಧಿಸಿ, ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಸಾರ್ವಜನಿಕ ವಲಯದಲ್ಲಿ ಒತ್ತಡ ಹೆಚ್ಚಾದ ಹಿನ್ನೆಲೆ, ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ. ಪ್ರಕರಣವನ್ನು ಹುಬ್ಬಳ್ಳಿ ಗೋಕುಲ ಠಾಣೆಯಿಂದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

  ಆರೋಪಿಗಳನ್ನು ಸದ್ಯ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ. ನಿನ್ನೆ ತಡರಾತ್ರಿ‌ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಬಳಿಕ ಆರೋಪಿಗಳನ್ನು ಉಪ ಕಾರಾಗೃಹದಲ್ಲಿ ಇರಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರು ಪಡಿಸುವ ಹಿನ್ನೆಲೆ, ಕೋರ್ಟ್ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್​ ವಹಿಸಲಾಗಿದೆ.

  ಸತತ ಸೋಲಿನ ಬಳಿಕ ಮೇಜರ್​ ಸರ್ಜರಿಗೆ ಮುಂದಾದ ಕಾಂಗ್ರೆಸ್​; ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ನಾಮ ನಿರ್ದೇಶನ?

  ನಿನ್ನೆ ರಾತ್ರಿ ಪೊಲೀಸರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಿಟ್ಟು ಕಳುಹಿಸಿದ್ದಾರೆಂದು ಭಜರಂಗದಳ ಕಾರ್ಯಕರ್ತರು ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಆರ್​.ದಿಲೀಪ್​ ಸ್ಥಳಕ್ಕೆ ಭೇಡಿ ನೀಡಿ, ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದೇವೆ. ತನಿಖಾ ಹಂತದಲ್ಲಿ ಯಾವುದೇ ವಿಷಯವನ್ನು ಬಹಿರಂಗಪಡಿಸಲ್ಲ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು  ಹೇಳಿ, ಆರೋಪಿಗಳ ಬಂಧನ, ಬಿಡುಗಡೆ ಕುರಿತು ಸೂಕ್ತ ಮಾಹಿತಿ ನೀಡಿರಲಿಲ್ಲ. ಪೊಲೀಸರ ಈ ನಡೆಗೆ ಭಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

  ಪ್ರಕರಣ ಕುರಿತು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಿನ್ನೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ್ದರು. "ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹದ ಕೆಲಸ. ಯಾವ ಯುವಕರೇ ಆಗಲಿ ಇಂತಹ ಹೇಳಿಕೆಗಳನ್ನು ಕೊಡಬಾರದು. ಯಾವುದೋ ಚಿತಾವಣೆಗೆ ನಿಮ್ಮ ಭಾವನೆಗಳಲ್ಲಿ ವಿಕೃತಿ ಮೆರೆಯಬೇಡಿ. ನಾವೆಲ್ಲರು ಭಾರತೀಯರು, ನೀವು ನಮ್ಮೊಳಗೆ ಇದ್ದು ಪಾಕಿಸ್ತಾನಕ್ಕೆ ಜಯಘೋಷ ಕೂಗಿದರೆ ನಿಮಗೆ ಯಾವ ಬೆಂಬಲವೂ ಸಿಗಲ್ಲ," ಎಂದು ಕಿಡಿಕಾರಿದ್ದರು.

  ಅಧಿವೇಶನದಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಲು ತೆಲಂಗಾಣ ಸರ್ಕಾರ ನಿರ್ಧಾರ
  First published: