ಚಿಕ್ಕಬಳ್ಳಾಪುರ: ಜಲಾಶಯದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ (Srinivasa Sagara Dam) ನಡೆದಿದೆ. ಬೆಂಗಳೂರು (Bengaluru) ಮೂಲದ ಇಬ್ಬರು ಯುವತಿಯರು ಹಾಗೂ ಓರ್ವ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಧಿಕಾ (21) ಹಾಗೂ ಇಮ್ರಾನ್ (21), ಪೂಜಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಆರು ಜನರ ತಂಡ ಆಗಮಿಸಿತ್ತು. ಈಜಾಡಲು ಜಲಾಶಯಕ್ಕಿಳಿದಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನೊಂದಿಗೆ ಶೋಧಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತ ಮೂವರು ಬಿ.ಫಾರ್ಮ್ ವಿದ್ಯಾರ್ಥಿಗಳಾಗಿದ್ದು, ಬೆಂಗಳೂರಿನ ಸಾರಾಯಿಪಾಳ್ಯಾ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ.
HDCC ಬ್ಯಾಂಕ್ ಮೇಲೆ ಐಟಿ ರೇಡ್!
ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರಾಬಲ್ಯವಿರುವ ಸಹಕಾರಿ ಬ್ಯಾಂಕ್ ಮೇಲೆ ದಾಳಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಮೂಲಕ ರೇವಣ್ಣ ತಳ ಮಟ್ಟದ ಕಾರ್ಯಕರ್ತರನ್ನು ನಿಯಂತ್ರಿಸುತ್ತಿದ್ದರು.
ಜೆಡಿಎಸ್ ಹಿಡಿತದಲ್ಲಿರುವ ಬ್ಯಾಂಕ್‌ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಶಾಕ್ ಕೊಟ್ಟಿದ್ದಾರೆ. ಐವರು ಅಧಿಕಾರಿಗಳಿಂದ ಬ್ಯಾಂಕ್‌ನ ಎಲ್ಲಾ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಚುನಾವಣೆ ಹೊಸ್ತಿನಲ್ಲಿ ಐಟಿ ಅಧಿಕಾರಿಗಳು ತೀವ್ರ ಕುತೂಹಲವನ್ನು ಕೆರಳಿಸಿದೆ.
‘ಕೈ’ ಮುಖಂಡನಿಗೆ IT ಶಾಕ್!
ಬೈಲಹೊಂಗಲ, ಬೆಳಗಾವಿಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ್ ಒಡೆತನದ ಬೈಲಹೊಂಗಲದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಗಳು ಶೋಧ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ: Karnataka Election 2023: ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ಗುಡ್ನ್ಯೂಸ್ ಕೊಟ್ಟ ಚುನಾವಣಾ ಆಯೋಗ!
ಬ್ಯಾಂಕ್ ಲಾಕರ್‌ಗಳಲ್ಲಿ ಯಾರೆಲ್ಲ ಬಂಗಾರ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹಿಸಿದ್ದರು. 2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್ ಸಾಧುನವರ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ