Congressನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಿನ್ನೆಲೆ ಪೊಲೀಸರಿಂದ ಬಿಗಿ ಭದ್ರತೆ - ಈಶ್ವರಪ್ಪ ರಾಜೀನಾಮೆಗೆ ಒತ್ತಡ

Congress Protest: ಮುಂದಿನ 5 ದಿನಗಳ ಕಾಲ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದು, ಪ್ರಮುಖವಾಗಿ ಈಶ್ವರಪ್ಪ ಅವರನ್ನು ಬಂಧಿಸಬೇಕು, ಸಂಪುಣದಿಂದ ಅವರನ್ನು ವಜಾ ಮಾಡಬೇಕು. ಅಲ್ಲದೇ,  ಈಶ್ವರಪ್ಪ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ಧಾರೆ.

ಸಚಿವ  ಈಶ್ವರಪ್ಪ

ಸಚಿವ  ಈಶ್ವರಪ್ಪ

  • Share this:
ಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಹಿನ್ನೆಲೆ    ಕಾಂಗ್ರೆಸ್ ನಾಯಕರು (Congress Leaders) ಇಂದು ಮುಖ್ಯಮಂತ್ರಿಗಳ (CM) ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಈ ಹಿನ್ನೆಲೆ ಸಿಎಂ ಮನೆಗೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪನ (K.S. Eshwarappa) ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ಮನೆ ಮುತ್ತಿಗೆ ಹಾಕಲು ಯೋಜನೆ ಮಾಡಿಕೊಂಡಿದ್ದು, ಆರ್ ಟಿ‌ ನಗರದ ಸಿಎಂ ಮನೆಗೆ ಪೊಲೀಸರು ಹೆಚ್ಚು ಭದ್ರತೆ ಒದಗಿಸಿದ್ದಾರೆ.   ಬೆಳಿಗ್ಗೆ 10ಕ್ಕೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಗೃಹ ಕಚೇರಿ ಕೃಷ್ಣಾಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಬಳಿಕ ಗೃಹ ಕಚೇರಿ ಕೃಷ್ಣಾಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕಲಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷರರು ಸೇರಿದಂತೆ ಕಾಂಗ್ರೆಸ್ ನಾಯಕರು ಈ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದು, ರಾಜ್ಯಾದ್ಯಂತ 8 ತಂಡಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಲು ಕಾಂಗ್ರೆಸ್​ ನಾಯಕರು ತಯಾರಿ ನಡೆಸಿದ್ದಾರೆ.

5 ದಿನ ಕಾಂಗ್ರೆಸ್ ಪ್ರತಿಭಟನೆ

ಮುಂದಿನ 5 ದಿನಗಳ ಕಾಲ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದು, ಪ್ರಮುಖವಾಗಿ ಈಶ್ವರಪ್ಪ ಅವರನ್ನು ಬಂಧಿಸಬೇಕು, ಸಂಪುಣದಿಂದ ಅವರನ್ನು ವಜಾ ಮಾಡಬೇಕು. ಅಲ್ಲದೇ,  ಈಶ್ವರಪ್ಪ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ಧಾರೆ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ, ಅಮಿತ್ ಶಾ ಮನೆಗೆ ಮುತ್ತಿಗೆ ಯತ್ನ

ಮೊದಲ ತಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಏ. 15 ರಂದು ಹಾವೇರಿ, ಏ. 16 ರಂದು ಗದಗ ಜಿಲ್ಲೆ, ಏ. 17, ಬಾಗಲಕೋಟೆ, 18ರಂದು ಹುಬ್ಬಳ್ಳಿ ಧಾರವಾಡ. ಏ. 19 ರಂದು ಧಾರವಾಡದಲ್ಲಿ ಹಾಗೂ ಎರಡನೇ ತಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಏ. 15 ರಂದು ಚಾಮರಾಜನಗ ಜಿಲ್ಲೆಯಲ್ಲಿ ಪ್ರತಿಭಟನೆ, 16ರಂದು ಮೈಸೂರು ನಗರ ಹಾಗೂ ಗ್ರಾಮೀಣ ಜಿಲ್ಲೆ, 17ರಂದು ಮಂಡ್ಯ ಜಿಲ್ಲೆಯಲ್ಲಿ, 18ರಂದು ಕೊಡಗು ಜಿಲ್ಲೆ, 19ರಂದು ಹಾಸನ ಜಿಲ್ಲೆ, 20ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದೇ ರೀತಿ ಇನ್ನೂ 6 ತಂಡಗಳಲ್ಲಿ ಪ್ರತಿಭಟನೆ ಮಾಡಲು ಕಾಂಗ್ರೆಸ್​ ಸಜ್ಜಾಗಿದೆ.

ಅಮಿತ್ ಶಾ ಮನೆ ಮುತ್ತಿಗೆಗೆ ಯತ್ನ

ಇನ್ನು ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ ಕಳಿಸಿ ಗುತ್ತಿಗೆದಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಸಂತೋಷ್​ ಪಾಟೀಲ್ ಆತ್ಮಹತ್ಯೆಗೆ ಶರಣಾಗಿರುವ ವಿಷಯ ಈಗ ದೆಹಲಿ ಮಟ್ಟದಲ್ಲೂ ಭಾರೀ ಸದ್ದು ಮೂಡಿಸಿದೆ.

ಸಿವಿಲ್ ಕಾಮಗಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ 40% ಕಮಿಷನ್ ಕೇಳಿದ್ದಾರೆ. ಅದೇ ಕಾರಣಕ್ಕೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಂತೋಷ್ ಪಾಟೀಲ್ ಅವರು ದೆಹಲಿಗೆ ಬಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಈಶ್ವರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ತಿಳಿಸಲು ಪ್ರಯತ್ನಿಸಿದ್ದಾರೆ‌.

ಇದನ್ನೂ ಓದಿ: KS Eshwarappa ಬಂಧನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ 5 ದಿನ Congress ಪ್ರತಿಭಟನೆ; ಎಲ್ಲಿ, ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಖುದ್ದಾಗಿ ಭೇಟಿ ಮಾಡಿ ಈಶ್ವರಪ್ಪ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ಇಷ್ಟೆಲ್ಲಾ ಆದರೂ ಬಿಜೆಪಿ ಹೈಕಮಾಂಡ್ ನಾಯಕರು ಮತ್ತು ಕೇಂದ್ರ ಸರ್ಕಾರ ಕರ್ನಾಟಕದ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಬಗ್ಗೆ ನಿರ್ಲಕ್ಷ್ಯ ಮಾಡಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಅಮಿತ್ ಶಾ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
Published by:Sandhya M
First published: