ಮೈಸೂರು (ಅ.07): ಬದಲಾಯ್ತು ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು, ಟಿಪ್ಪು ಎಕ್ಸ್ಪ್ರೆಸ್ (Tippu Express) ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲು, ಇದೀಗ ಈ ರೈಲಿನ ಹೆಸರನ್ನು (Train Name) ಬದಲಾಯಿಸಲಾಗಿದೆ. ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ (Wodeyar Express) ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ. ಇದರ ಜೊತೆಗೆ ತಾಳಗುಪ್ಪ-ಮೈಸೂರು ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ಪ್ರೆಸ್ (Talaguppa Express) ರೈಲಿನ ಹೆಸರನ್ನು ಸಹ ಬದಲಾಯಿಸಿ ಕುವೆಂಪು ಎಕ್ಸ್ಪ್ರೆಸ್ (Kuvempu) ಎಂದು ಮರುನಾಮಕರಣ ಮಾಡಲಾಗಿದೆ.
ಹೆಸರು ಬದಲಾವಣೆಗೆ ಕಾರಣ ಏನು?
ಟಿಪ್ಪು ಎಕ್ಸ್ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್ಪ್ರೆಸ್ ರೈಲು ಎಂದು ಹೆಸರಿಡಲು ಸಂಸದ ಪ್ರತಾಪ್ ಸಿಂಹ ಅವರ ಮನವಿಯೇ ಕಾರಣವಾಗಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ಈ ಸಂಬಂಧ ಫೆಬ್ರವರಿ ತಿಂಗಳಲ್ಲಿ ದೆಹಲಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ಗೆ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿದ್ದರು. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್ಪ್ರೆಸ್ ಎಂದು ಹೆಸರಿಡಲು ಒತ್ತಾಯ ಮಾಡಿದ್ದಾರೆ. ಸಂಸದರ ಮನವಿ ಮೇರೆ ಹೆಸರು ಬದಲಾಯಿಸಲಾಗಿದೆ.
ರೈಲ್ವೆ ಸಚಿವಾಲಯ ಆದೇಶ ಪ್ರತಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪಸಿಂಹ, ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ. ಜತೆಗೆ, ಮೈಸೂರು-ತಾಳಗುಪ್ಪ ಬದಲು ಕುವೆಂಪು ಎಕ್ಸ್ಪ್ರೆಸ್ ಆಗಿ ಬದಲಾಗಲಿದೆ. ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಲ್ಹಾದ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ.ಸತೀಶ್ ಅವರಿಗೆ ಧನ್ಯವಾದ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಶುಕ್ರವಾರದ ಶುಭ ಸುದ್ದಿ!
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
— Pratap Simha (@mepratap) October 7, 2022
ಬಳಿಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಗೆ ತಿಲಾಂಜಲಿ ಹಾಡಿತು. ಅಂದಿನ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ 2ನೇ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. 7 ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ 6 ಹಾಗೂ 10 ನೇ ತರಗತಿಯಲ್ಲಿ ಟಿಪ್ಪು ಪಠ್ಯವನ್ನ ಮುಂದುವರಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ