Karnataka Weather Today:ರಾಜ್ಯದಲ್ಲಿ ಇಂದು,ನಾಳೆ ಹೆಚ್ಚಾಗಲಿದೆ ಮಳೆಯ ಅಬ್ಬರ-ಯಾವೆಲ್ಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ?

Rainfall: ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.05):ರಾಜ್ಯದಲ್ಲಿ ಬಂಗಾಳಕೊಲ್ಲಿಯಲ್ಲಿಯ  ವಾಯುಭಾರ ಕುಸಿತ ಹಾಗೂ ಚಂಡಮಾರುತದ(Cyclone) ಪ್ರಭಾವದಿಂದಾಗಿ ಕೊಂಚ ಬಿಡುವ ಪಡೆದಿದ್ದ ಮಳೆಯ ಅಬ್ಬರ(Heavy Rainfall) ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕರಾವಳಿ(Coastal), ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಕಡಿಮೆ ಒತ್ತಡದ ಪ್ರದೇಶದಿಂದ ಪೂರ್ವ ಜಾರ್ಖಂಡ್‌ನಾದ್ಯಂತ ಉತ್ತರ ಒರಿಸ್ಸಾದವರೆಗೆ ವಿಸ್ತರಿಸಿದ್ದು, ಅಕ್ಟೋಬರ್ 6 ರಿಂದ ಮುಂಗಾರು  ಕೊನೆಯಾಗಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಆದರೆ ಇಂದು ಮತ್ತು ನಾಳೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.  

ಎಲ್ಲೆಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್​

ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವ ಇದ್ದು ಆ ಕಾರಣದಿಂದ  ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 ಇಂದು, ನಾಳೆ ಎಲ್ಲೆಲ್ಲಿ ಮಳೆ ಸಾಧ್ಯತೆ

ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮುಂದಿನ 24 ಗಂಟೆ ಯಾವ್ಯಾವ ರಾಜ್ಯದಲ್ಲಿ ಮಳೆ  

ಮುಂದಿನ 24 ಗಂಟೆಗಳಲ್ಲಿ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.  ಕರಾವಳಿ ಕರ್ನಾಟಕ,  ಈಶಾನ್ಯ ಭಾರತ, ಗಂಗಾ ಪಶ್ಚಿಮ ಬಂಗಾಳ, ಜಾರ್ಖಂಡ್, ದಕ್ಷಿಣ ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಅಲ್ಲದೇ, ಉತ್ತರ ಪ್ರದೇಶ, ಉತ್ತರಾಖಂಡ, ಬಿಹಾರ, ದಕ್ಷಿಣ ಗುಜರಾತ್, ರಾಯಲಸೀಮಾ ಮತ್ತು ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಭಾರೀ ಮಳೆ ಅಥವಾ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸಹ ಕಳೆದ ಎರೆಡು ದಿನಗಳಿಂದ ಭಾರೀ ಮಳೆಯಾಗಿದ್ದು, ಭಾನುವಾರ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. 5ಕ್ಕೂ ಹೆಚ್ಚು ಮರಗಳು ಮತ್ತು ಮರದ ಕೊಂಬೆಗಳು ರಸ್ತೆಗೆ ಉರುಳಿವೆ. ಕಾರು, ದ್ವಿಚಕ್ರ ವಾಹನ, ಆಟೋರಿಕ್ಷಾಗಳು, ಟೆಂಪೊ ಟ್ರಾವೆಲರ್‌ಗಳು ಸೇರಿ ನೂರಕ್ಕೂ ಹೆಚ್ಚು ವಾಹನಗಳು ನೀರಿನಲ್ಲಿ ಮುಳುಗಿ ಹೋಗಿದ್ದವು.

ಇವೆಲ್ಲದರ ನಡುವೆ ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ  ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ 8% ಮಳೆ ಕೊರತೆಯೊಂದಿಗೆ ಮುಂಗಾರು ಅವಧಿ ಅಂತ್ಯವಾಗುತ್ತಿದೆ ಎಂಬ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.  ಆಗಸ್ಟ್‌ ತಿಂಗಳಿನಲ್ಲಿ 47% ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 8% ಮಳೆ ಕೊರತೆಯಾಗಿದೆ ಎಂದು ಹೇಳಲಾಗುತ್ತಿದೆ.

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರ ತಿಳಿಸಿದ್ದಾರೆ.

ಇದನ್ನೂ ಓದಿ: ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು; ರಾತ್ರಿ ಸುರಿದ ಭೀಕರ ಮಳೆಗೆ ಹೈರಾಣಾದ ಸಿಲಿಕಾನ್ ಸಿಟಿ ಜನ

ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್​ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿತ್ತು, ಇದೀಗ ಎರಡು ದಿನಗಳ ಭಾರೀ ಮಲೆಯ ನಿರೀಕ್ಷೆ ಇದ್ದು ನಂತರ ಮುಂಗಾರು ಅಂತ್ಯವಾಗಲಿದೆ ಎಂದು ಹೇಳಲಾಗುತ್ತಿದೆ.
Published by:Sandhya M
First published: