ನವದೆಹಲಿ; ಸಚಿವ ಸಂಪುಟ ವಿಸ್ತರಣೆ ಸಂಬಂಧ ಇಂದು ದೆಹಲಿಗೆ ಆಗಮಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಚರ್ಚೆಯ ವೇಳೆ ಸಿಎಂ ಬಿಎಸ್ವೈ ಅವರು ನಡ್ಡಾ ಅವರಿಗೆ ಸಂಪುಟ ವಿಸ್ತರಣೆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಜೊತೆಗೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಕೊಟ್ಟು ಬಂದಿದ್ದಾರೆ. ಹೈಕಮಾಂಡ್ ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತಿಳಿಸಿಲ್ಲ.
ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ವೈ ಅವರು, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ. ಈಗ ನೇರವಾಗಿ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.
ಇದನ್ನು ಓದಿ: ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ; ಹೈಕಮಾಂಡ್ ನಾಯಕರ ಭೇಟಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ