HOME » NEWS » State » TODAY ELECTIONS TO GRAMA PANCHAYATH SEATS IN 9 DISTRICTS RH

ವಿವಿಧ ಕಾರಣಗಳಿಂದ ತೆರವಾಗಿರುವ 9 ಜಿಲ್ಲೆಗಳ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಇಂದು ಚುನಾವಣೆ

ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಫೆಬ್ರವರಿ 11ರ ಮಂಗಳವಾರದಂದು ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಸಂಜೆ 5 ಗಂಟೆಯ ಒಳಗೆ ಫಲಿತಾಂಶ ಪ್ರಕಟವಾಗಲಿದೆ.

HR Ramesh | news18-kannada
Updated:February 9, 2020, 7:10 AM IST
ವಿವಿಧ ಕಾರಣಗಳಿಂದ ತೆರವಾಗಿರುವ 9 ಜಿಲ್ಲೆಗಳ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಇಂದು ಚುನಾವಣೆ
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಬೆಳಗಾವಿ, ಉತ್ತರ ಕನ್ನಡ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಂದು ಚುನಾವಣೆ ನಡೆಯಲಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನವರಿ 25ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು,ಫೆ. 11ರವರೆಗೆ ಮುಂದುವರೆಯಲಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಫೆಬ್ರವರಿ 11ರ ಮಂಗಳವಾರದಂದು ಆಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಸಂಜೆ 5 ಗಂಟೆಯ ಒಳಗೆ ಫಲಿತಾಂಶ ಪ್ರಕಟವಾಗಲಿದೆ.

ಒಟ್ಟು 9 ಜಿಲ್ಲೆಗಳ 141 ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ  173 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಒಟ್ಟು 8 ಗ್ರಾಮ ಪಂಚಾಯಿತಿಗಳ 9 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ಗ್ರಾಮ ಪಂಚಾಯಿತಿಗಳ 6 ಸದಸ್ಯ ಸ್ಥಾನಗಳಿಗೆ, ಚಿಕ್ಕಬಳ್ಳಾಪುರದ 9 ಗ್ರಾಮ ಪಂಚಾಯಿತಿಯ 9 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಾಗೆಯೇ ಮೈಸೂರಿನಲ್ಲಿ ಒಟ್ಟು 24 ಗ್ರಾಮ ಪಂಚಾಯಿತಿಗಳ 25 ಸ್ಥಾನಗಳಿಗೆ, ಮಂಡ್ಯದ 8 ಗ್ರಾಮ ಪಂಚಾಯಿತಿಗಳ 8 ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ. ಹಾಗೆಯೇ ಬೆಳಗಾವಿಯ 31 ಗ್ರಾಮ ಪಂಚಾಯಿತಿಗಳ 43 ಸ್ಥಾನಗಳಿಗೆ, ಹಾವೇರಿಯ 7 ಗ್ರಾಮ ಪಂಚಾಯಿತಿಯ 7 ಸ್ಥಾನಗಳಿಗೆ ಮತ್ತು ಉತ್ತರ ಕನ್ನಡದ 33 ಗ್ರಾಮ ಪಂಚಾಯಿತಿಗಳ 43 ಸದಸ್ಯ ಸ್ಥಾನಗಳಿಗೆ ಹಾಗೂ ಬಳ್ಳಾರಿಯ 16 ಗ್ರಾಮ ಪಂಚಾಯಿತಿಗಳ 23 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಇದನ್ನು ಓದಿ: Exit Poll Result 2020: ದೆಹಲಿ ಮತಗಟ್ಟೆ ಸಮೀಕ್ಷೆ; ಮತ್ತೊಮ್ಮೆ ಮುಖ್ಯಮಂತ್ರಿ ಗದ್ದುಗೆಯತ್ತ ಅರವಿಂದ ಕೇಜ್ರಿವಾಲ್?
First published: February 9, 2020, 7:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading