ವಾರಾಂತ್ಯದಲ್ಲಿ ರಾಜ್ಯದ ವಿವಿಧೆಡೆ ಭಾರೀ ಮಳೆ; ಬೆಂಗಳೂರಿನಲ್ಲಿ ಹೀಗಿರಲಿದೆ ಹವಾಮಾನ

ಭಾನುವಾರದವರೆಗೆ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಮಳೆಯಾಗಲಿದೆ. 24 ಗಂಟೆಗಳಲ್ಲಿ 115 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Latha CG | news18-kannada
Updated:October 12, 2019, 8:01 AM IST
ವಾರಾಂತ್ಯದಲ್ಲಿ ರಾಜ್ಯದ ವಿವಿಧೆಡೆ ಭಾರೀ ಮಳೆ; ಬೆಂಗಳೂರಿನಲ್ಲಿ ಹೀಗಿರಲಿದೆ ಹವಾಮಾನ
ಮಳೆ (ಫೈಲ್​ ಫೋಟೋ)
  • Share this:
ಬೆಂಗಳೂರು(ಅ.12): ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯ ಆರ್ಭಟ ಹೆಚ್ಚಾಗಿರಲಿದೆ. ವಾರಾಂತ್ಯದಲ್ಲಿ ಸಿಲಿಕಾನ್​ ಸಿಟಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿರಲಿದೆ.

ಮುಂದಿನ ಎರಡು ವಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಈ ತಿಂಗಳ ಕೊನೆಯವರೆಗೆ ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗಲಿದೆ. ಅಕ್ಟೋಬರ್ 23ರವರೆಗೆ ಬೆಂಗಳೂರಿಗರಿಗೆ ಮಳೆಯ ಹಾವಳಿ ತಪ್ಪಿದ್ದಲ್ಲ. ಶೇ.80-90ರಷ್ಟು ಮಳೆಯಾಗಲಿದೆ. ಹೀಗಾಗಿ ಬೆಂಗಳೂರಿಗರು ಈ ತಿಂಗಳು ಜಾಗರೂಕತೆಯಿಂದ ಇರಬೇಕಿದೆ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೇಂದ್ರದ ಮೇಲೆ ಒತ್ತಡ ಹಾಕುವುದಕ್ಕೂ ಸರ್ಕಾರ ಒಪ್ಪುತ್ತಿಲ್ಲ; ಸಿದ್ದರಾಮಯ್ಯ

ಭಾನುವಾರದವರೆಗೆ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಮಳೆಯಾಗಲಿದೆ. 24 ಗಂಟೆಗಳಲ್ಲಿ 115 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್​ ತಿಂಗಳ ಆರಂಭದಿಂದಲೂ ರಾಜ್ಯದಲ್ಲಿ ಅಧಿಕ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ ಬೆಂಗಳೂರು ಸೇರಿ ದಕ್ಷಿಣ ಭಾಗದಲ್ಲಿ ಭಾರೀ 77 ಮಿಮೀ ಮಳೆಯಾಗಿದೆ. ಇದು ಸಾಮಾನ್ಯಕ್ಕಿಂತ ಶೇ.63 ರಷ್ಟು ಹೆಚ್ಚಾಗಿದೆ. ಬೆಳಗಾವಿ ಧಾರವಾಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ 61 ಮಿ.ಮೀ ಮಳೆಯಾಗಿದ್ದು, ಶೇ.39ರಷ್ಟು ಮಳೆ ಹೆಚ್ಚಾಗಿದೆ.

First published:October 12, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading