HOME » NEWS » State » TODAY IS HEARING ABOUT GRAMA PANCHAYATH ELECTION IN HIGH COURT SHTV LG

ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಬಗ್ಗೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ

ರಾಜ್ಯದ 6,021 ಗ್ರಾಮ ಪಂಚಾಯಿತಿಗಳ 94 ಸಾವಿರ ಸ್ಥಾನಗಳಿಗೆ ಚುನಾವಣೆಗೆ ನಡೆಯಬೇಕಿದೆ. ಚುನಾವಣೆಗೆ ಸೂಕ್ತ ವ್ಯವಸ್ಥೆ ಮಾಡಲು ಕಷ್ಟ ಎಂಬ ಸಮಜಾಯಿಷಿಯನ್ನ ರಾಜ್ಯ ಸರ್ಕಾರ ನೀಡಿದೆ.

news18-kannada
Updated:October 16, 2020, 10:55 AM IST
ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಬಗ್ಗೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ
ಪ್ರಾತಿನಿಧಿಕ ಚಿತ್ರ.
  • Share this:
ಬೆಂಗಳೂರು(ಅ.16): ಗ್ರಾಮ ಪಂಚಾಯತ್  ಚುನಾವಣೆ ನಡೆಸುವ ಸಂಬಂಧ ಇಂದು ಅಂತಿಮ‌‌ ತೀರ್ಮಾನ ಸಾಧ್ಯತೆ ಹೊರ ಬೀಳುವ ಸಾಧ್ಯತೆ ಇದೆ. ಈಗಾಗಲೇ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ ಕೊರೋನಾ ಹಿನ್ನೆಲೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಈ ಸಂಬಂಧ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಈಗಾಗಲೇ ಚುನಾವಣೆ ಮಾಡಲೇಬೇಕಾದ ಅನಿವಾರ್ಯತೆ ಇದೆ ಅಂತ ಹೈ ಕೋರ್ಟ್ ಗೆ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಕೋರೋನಾ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದು ಕಷ್ಟವಾದ್ದರಿಂದ, ಸದ್ಯ ಚುನಾವಣೆ ಬೇಡ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ.  ಸರ್ಕಾರದ ವಾದಕ್ಕೆ ಹೈಕೋರ್ಟ್ ಇವತ್ತು ಸಮ್ಮತಿ ನೀಡಿಲಿದೆಯಾ ಎನ್ನುವ ಕುತೂಹಲ‌ ಮನೆ ಮಾಡಿದೆ.

ರಾಜ್ಯದ 6,021 ಗ್ರಾಮ ಪಂಚಾಯಿತಿಗಳ 94 ಸಾವಿರ ಸ್ಥಾನಗಳಿಗೆ ಚುನಾವಣೆಗೆ ನಡೆಯಬೇಕಿದೆ. ಚುನಾವಣೆಗೆ ಸೂಕ್ತ ವ್ಯವಸ್ಥೆ ಮಾಡಲು ಕಷ್ಟ ಎಂಬ ಸಮಜಾಯಿಷಿಯನ್ನ ರಾಜ್ಯ ಸರ್ಕಾರ ನೀಡಿದೆ. ಈ ಮಧ್ಯೆ ಚುನಾವಣಾ ಆಯೋಗದಿಂದ ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಹತ್ರಾಸ್ ಪ್ರಕರಣದ ವಿಚಾರಣೆಯನ್ನು ದೆಹಲಿ ಕೋರ್ಟ್​ಗೆ ವರ್ಗಾಯಿಸಲು ಸಾಧ್ಯವಿಲ್ಲ; ಸುಪ್ರೀಂ ತೀರ್ಪು

ಸದ್ಯ ರಾಜ್ಯದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಆಗಿದೆ. ಇದರ ಜೊತೆಗೆ ವಿಧಾನ ಪರಿಷತ್ತಿನ ಶಿಕ್ಷಕರ ಮತ್ತು ಪದವೀಧರರ 4 ನಾಲ್ಕು ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ.

ಸುಮಾರು 18 ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದೆ. ಆಡಳಿತ ಯಂತ್ರ ಕೂಡ ಚುನಾವಣಾ ಕಾರ್ಯದಲ್ಲಿ ತೊಡಗಿದೆ. ಈ ಚುನಾವಣೆಗಳು ನವೆಂಬರ್​​ 12ಕ್ಕೆ ಮುಕ್ತಾಯಗೊಳ್ಳಲಿವೆ.  ಅದಕ್ಕೂ ಮುನ್ನವೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸ್ಥಿತಿಯಲ್ಲಿ ರಾಜ್ಯ ಚುನಾವಣಾ ಆಯೋಗ ಇಲ್ಲ.
Youtube Video

ಆದರೆ ನವೆಂಬರ್ 12 ರ ನಂತರ ವೇಳಾಪಟ್ಟಿ ಪ್ರಕಟಿಸಲು ಸಿದ್ಧ ಇರುವುದಾಗಿ ಆಯೋಗ ಹೇಳಿದೆ. ಆಯೋಗ ಮತ್ತು ಸರ್ಕಾರದ ಅಭಿಪ್ರಾಯ ಕುರಿತು ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಸೂಚನೆ ಬಳಿಕ ಮುಂದಿನ ತಿರ್ಮಾನ ಕೈಗೊಳ್ಳುವುದಾಗಿ ರಾಜ್ಯ ಚುನಾವಣಾ ಆಯೋಗ ಹೇಳಿದೆ.
Published by: Latha CG
First published: October 16, 2020, 10:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories