ಬೆಂಗಳೂರು: ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರ. ಮಹಾಮಾರಿ ಕೊರೋನಾಗೆ ಲಸಿಕೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈಗ ಅದನ್ನು ಹೇಗೆ ಜನರಿಗೆ ಮುಟ್ಟಿಸಬೇಕು ಅನ್ನೋದರ ಬಗ್ಗೆ ಗಂಭೀರ ಚಿಂತನೆಗಳು ನಡೆದು ಡ್ರೈ ರನ್ ಕೂಡ ನಡೆಯುತ್ತಿದೆ. ಇಂದು ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್ ರಾಜ್ಯದಲ್ಲಿ ನಡೆಯಲಿದೆ. ಜನವರಿ 2ರಂದು ಬೆಂಗಳೂರು ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಈಗ ಇಡೀ ರಾಜ್ಯದಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸೋಕೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 263 ಕಡೆ ಇಂದು ಅಂದ್ರೆ ಜನವರಿ 8ರಂದು ಡ್ರೈ ರನ್ ನಡೆಯಲಿದೆ. ಎಲ್ಲಾ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಡ್ರೈ ರನ್ ನಡೆಯಲಿದೆ. ಮೊದಲಿನಂತೆ, ಪ್ರತೀ ಕೇಂದ್ರದಲ್ಲೂ 25 ಸ್ವಯಂಸೇವಕರ ಮೇಲೆ ಪ್ರಯೋಗದ ಡ್ರೈರನ್ ಆಗಲಿದೆ.
ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವ ಸುಧಾಕರ್, ಜನವರಿ 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜುಗಳನ್ನು ಕಳುಹಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್ - ಇನ್ ಕೂಲರ್, 4 ವಾಕ್ -ಇನ್ ಫ್ರೀಜರ್, 3,201 ಐಎಲ್ ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರವು 225 ಲೀಟರ್ ಸಾಮರ್ಥ್ಯ ದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್ - ಇನ್ ಕೂಲರ್, 1 ವಾಕ್ - ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಮಾಹಿತಿ ನೀಡಿದರು.
ಇದನ್ನು ಓದಿ: ಅತ್ತೆ ಜೊತೆ ಅಳಿಯ ಲವ್ವಿಡವ್ವಿ, ಅಳಿಯನಿಗೆ ಮಾವ ಸ್ಕೆಚ್, ಹೊಳೆಯ ದಡದಲ್ಲಿ ಕೊಲೆಯಾದ ಪ್ರಿಯತಮ
ಬೆಂಗಳೂರಿನ 8 ಕಡೆ ವ್ಯಾಕ್ಸಿನೇಷನ್ ಡ್ರೈ ರನ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 8 ವಲಯಗಳ ಸಾರ್ವಜನಿಕ ಆರೋಗ್ಯ ಕೇಂದ್ರ, ರೆಫೆರಲ್ ಆಸ್ಪತ್ರೆ, ಮೆಡಿಕಲ್ ಕಾಲೇಜು, ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇಂದು ಲಸಿಕೆ ತಾಲೀಮು ನಡೆಯಲಿದೆ.
ವಲಯ ಕೇಂದ್ರ
ವರದಿ - ಆಶಿಕ್ ಮುಲ್ಕಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ