Gold Price Today: ಏರಿಕೆ ಕಂಡ ಚಿನ್ನ ಬೆಳ್ಳಿ-ಬೆಲೆ- ಬೆಂಗಳೂರಿನಲ್ಲಿ ಚಿನ್ನದ ರೇಟ್ ಹೀಗಿದೆ..

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Gold Rate on September 28 2021: ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ನಿನ್ನೆ ಸಹ ಚಿನ್ನದ(Gold) ಬೆಲೆ  ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇಂದು ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 80 ರೂಪಾಯಿ ಏರಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,240 ರೂ. ಇತ್ತು. ಇಂದು 10 ಗ್ರಾಂ ಚಿನ್ನದ ಬೆಲೆ 45,280 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯೂ  ಹೆಚ್ಚಾಗಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,240 ರೂ. ಇತ್ತು. ಇಂದು 46,280 ರೂಪಾಯಿ ಆಗಿದೆ.

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47, 290 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,350 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ವಿವಿಧ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್​ ಚಿನ್ನದ ಬೆಲೆ

ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ, ವಿಶಾಖಪಟ್ಟಣಂ, ವಿಜಯವಾಡದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 43, 350 , 24 ಕ್ಯಾರೆಟ್ ಬೆಲೆ 47, 290, ಮುಂಬೈ 45, 280 ಹಾಗೂ  46, 280 ಇದೆ. , ಹೈದರಾಬಾದ್ 43,350, ಭುವನೇಶ್ವರ 43, 570, ಅಹಮದಾಬಾದ್ 44, 480, ಕೇರಳ 43, 350, ಪುಣೆ ₹44,480, ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಇದನ್ನೂ ಓದಿ: ಇಂದು ಸ್ಥಿರತೆ ಕಾಯ್ದುಕೊಂಡ ಚಿನ್ನ-ಬೆಳ್ಳಿ; ಬೆಂಗಳೂರಿನಲ್ಲಿ ಇಂದಿನ ರೇಟ್ ನೋಡಿ..!

ಇಂದಿನ ಬೆಳ್ಳಿ ದರ.

ನಿನ್ನೆಯಿಂದ ಬೆಳ್ಳಿ ಬೆಲೆಯಲ್ಲಿ(Silver Rate)  ಸ್ವಲ್ಪ ಏರಿಕೆ ಕಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 59,900 ರೂ. ಇತ್ತು. ಇಂದೂ 60, 250 ರೂ ಆಗಿದ್ದು 3500 ರೂ ಏರಿಕೆಯಾಗಿದೆ. . ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 60,2500 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 64,400 ರೂ. ಆಸುಪಾಸಿನಲ್ಲಿದೆ.

ಬೆಳ್ಳಿ ದರಗಳಿಗೆ ಸಂಬಂಧಿಸಿದಂತೆ ಅರ್ಥಮಾಡಿಕೊಳ್ಳಬೇಕಾದ ಪ್ರಮುಖ ವಿಷಯವೆಂದರೆ ಅವುಗಳು ಹೇಗೆ ಬದಲಾಗುತ್ತದೆ ಎಂದು ಖಚಿತವಾಗಿ ತಿಳಿದಿಲ್ಲ. ಬೆಳ್ಳಿಯನ್ನು ಕಡಿಮೆ ಮಟ್ಟದಲ್ಲಿ ಹೂಡಿಕೆ ಮಾಡುವುದು ಮತ್ತು ಉನ್ನತ ಮಟ್ಟದಲ್ಲಿ ಮಾರಾಟ ಮಾಡುವುದು ಅತ್ಯಂತ ಕಷ್ಟಕರವಾಗಿದೆ.  ಬೆಂಗಳೂರಿನಲ್ಲಿ ಬೆಳ್ಳಿ ದರಗಳು ಕೆಲವು ಹಂತಗಳಲ್ಲಿ ಹೆಚ್ಚಾಗುತ್ತದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇ ರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

ಇದನ್ನೂ ಓದಿ: ಇಂದು ಕೂಡ CWMA ಸಭೆಯಲ್ಲಿ ಚರ್ಚೆಗೆ ಬಾರದ ಮೇಕೆದಾಟು ಡಿಪಿಆರ್ ವಿಚಾರ

ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by:Sandhya M
First published: