Rain Effect: ಮಳೆ ಹಾನಿ ಬಗ್ಗೆ ಇಂದು ಸಭೆ, ಚರ್ಚೆ ಬಳಿಕ ಪರಿಹಾರ ಘೋಷಣೆ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನ ಮೇಲೆ ವಿಶೇಷ ಕಾಳಜಿ ಇದೆ. ನಾನೂ ಕೂಡಾ ಹಲವು ಕಡೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಮುಂದೆಯೂ ಹೋಗ್ತೇನೆ. ಮಳೆ ಮುಗಿದ ಮೇಲೆ ದುರಸ್ತಿ ಕಾಮಗಾರಿಗಳನ್ನು ನಡೆಸ್ತೇವೆ ಎಂದು ವಿಪಕ್ಷಗಳ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು.

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

 • Share this:
  ಬೆಂಗಳೂರು: ಕಳೆದ ಹತ್ತು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಅಕಾಲಿಕ ಮಳೆ (Heavy Rain In Karnataka) ಸುರಿಯುತ್ತಿದ್ದು, ಎಲ್ಲೆಡೆ ಭಾರೀ ಹಾನಿ ಸೃಷ್ಟಿಸಿದೆ. ಈವರೆಗೂ ಅಕಾಲಿಕ ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಮಳೆ ಹಾನಿ (Rain Effect) ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆ ನಡೆಸಿ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಒಂದು ಅಂದಾಜಿನ ಪ್ರಕಾರ ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಎಲ್ಲ ಕೆರೆ- ಕಟ್ಟೆಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ. ಇನ್ನು ಎಲ್ಲ ಬಹುತೇಕ ಎಲ್ಲ ಜಲಾಶಯಗಳು ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಪ್ರವಾಹ ಆತಂಕ ಎದುರಾಗಿದೆ.

  ಇದೇ ವಿಷಯವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ದಕ್ಷಿಣ, ಉತ್ತರ ಒಳನಾಡು, ಕರಾವಳಿಗಳಲ್ಲಿ ವ್ಯಾಪಕ ಮಳೆ ಆಗಿದೆ. ಕಳೆದ ಮೂರು ದಿನಗಳಲ್ಲಿ ಬೆಳೆ ಹಾನಿ, ರಸ್ತೆ ಹಾನಿ, ಕೆಲವು ಸಾವು ಆಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ನಲ್ಲಿ 3 ಲಕ್ಷ ರೈತರ ಕೃಷಿ ಬೆಳೆ ಹಾನಿಯಾಗಿತ್ತು. 130 ಕೋಟಿ ಬೆಳೆ ಪರಿಹಾರ ಬಾಕಿ ಇತ್ತು. ಮೊನ್ನೆ ಅದನ್ನು ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇವತ್ತು ಸಂಜೆ ಅಧಿಕಾರಿಗಳು ಕೊಟ್ಟಿರುವ ವರದಿ ಬಗ್ಗೆ ಚರ್ಚೆ ಮಾಡಿ, ಪರಿಹಾರದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

  ಕೆಲವು ಸಚಿವರು ಜಿಲ್ಲೆಗಳಲ್ಲಿದ್ದಾರೆ. ಜಿಲ್ಲೆಗಳಿಗೆ ಹೋಗಲು ಚುನಾವಣಾ ಆಯೋಗದ ಅನುಮತಿ ಬೇಕು. ನಿನ್ನೆ ಸಿ.ಎಸ್ ಮೂಲಕ ಆಯೋಗಕ್ಕೆ ಅನುಮತಿ ಕೇಳಿದ್ದೇವೆ. ಆಯೋಗ ಅನುಮತಿ ಕೊಟ್ಟರೆ ಎಲ್ಲ ಸಚಿವರೂ ಜಿಲ್ಲೆಗಳಿಗೆ ಹೋಗ್ತಾರೆ ಎಂದು ಸಿಎಂ ಬೊಮ್ಮಾಯಿ ಅವರು ಮಾಹಿತಿ ನೀಡಿದರು. ಇನ್ನು ಇದೇ ವಿಷಯವಾಗಿ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು, ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದರು.

  ಬಿಡಿಎ ಮೇಲೆ ಎಸಿಬಿ ದಾಳಿ ವಿಚಾರ

  ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡಲ್ಲ ಅಂತ ಹಿಂದೆಯೇ ಹೇಳಿದ್ದೇವೆ. ಎಸಿಬಿ ದಾಳಿ ಬಳಿಕ ಅವರು ಕೊಡುವ ವರದಿ, ಶಿಫಾರಸು ಮೇರೆಗೆ ಕ್ರಮ ಆಗಲಿದೆ. ಬಿಡಿಎನಲ್ಲಿ ಯಾರನ್ನೂ ರಕ್ಷಿಸುವ ಕೆಲಸ ಮಾಡಲ್ಲ. ಬಿಡಿಎ ಭ್ರಷ್ಟಾಚಾರಗಳ ಬಗ್ಗೆ ವಿಶ್ವನಾಥ್ ಅವರೂ ನನಗೆ ಹೇಳಿದ್ದರು. ಯಾವುದೇ ಅಧಿಕಾರಿ ತಪ್ಪಿತಸ್ಥ ಇದ್ರೂ ಕ್ರಮ ಖಚಿತ. ಅಕ್ರಮ ಎಸಗಿದ ಹಿಂದಿನ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು. ಬಿಡಿಎ ಅನ್ನು ಒಂದು ಸಲ ಸ್ವಚ್ಛ ಮಾಡಬೇಕು. ಬಿಡಿಎ ಮುಖ್ಯವಾಹಿನಿಗೆ ತರುವ ವ್ಯವಸ್ಥೆ ಮಾಡಬೇಕು. ಬಿಡಿಎ ಮೂಲಕ‌ ನಾಗರೀಕ ಸೇವೆ ಸಮರ್ಪಕವಾಗಿ ಸಿಗುವ ಕೆಲ ಮಾಡ್ತೇವೆ ಎಂದು ಹೇಳಿದರು.‘

  ಇದನ್ನು ಓದಿ: Rain Effect: ಮಳೆಯಿಂದ 7.31 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆ ನಾಶ; ಪ್ರಚಾರ ಬಿಟ್ಟು ರೈತರ ನೆರವಿಗೆ ಧಾವಿಸಲು ಸರ್ಕಾರಕ್ಕೆ HDK ಆಗ್ರಹ

  ಬೆಂಗಳೂರಿನ ಮೇಲೆ ವಿಶೇಷ ಕಾಳಜಿ ಇದೆ. ನಾನೂ ಕೂಡಾ ಹಲವು ಕಡೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಮುಂದೆಯೂ ಹೋಗ್ತೇನೆ. ಮಳೆ ಮುಗಿದ ಮೇಲೆ ದುರಸ್ತಿ ಕಾಮಗಾರಿಗಳನ್ನು ನಡೆಸ್ತೇವೆ ಎಂದು ವಿಪಕ್ಷಗಳ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದರು.
  Published by:HR Ramesh
  First published: