• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಭದ್ರಾವತಿ, ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿ

ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಭದ್ರಾವತಿ, ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿ

ಕೇಂದ್ರ ಸಚಿವ ಅಮಿತ್​ ಶಾ

ಕೇಂದ್ರ ಸಚಿವ ಅಮಿತ್​ ಶಾ

ಅಮಿತ್ ಶಾ ಅವರ ಭೇಟಿ ವೇಳೆಯೇ ಇದೀಗ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವವರಿಗೆ ಖಾತೆ ಹಂಚಿಕೆ ಬಗ್ಗೆ ಚರ್ಚೆ ನಡೆಸಿ, ಅಂತಿಮಗೊಳಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ, ಸಚಿವ ಸ್ಥಾನ ಅವಕಾಶ ವಂಚಿತ ಅಸಮಾಧಾನಿತ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಮಿತ್ ಶಾ ಅವರಿಗೆ ಇದೇ ವೇಳೆ ದೂರು ನೀಡಲು ಸಹ ಮುಂದಾಗಿದ್ದಾರೆ. 

ಮುಂದೆ ಓದಿ ...
  • Share this:

ಬೆಂಗಳೂರು; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಎರಡು ದಿನ ತಂಗಲಿರುವ ಅಮಿತ್ ಶಾ ಅವರು ಭದ್ರಾವತಿ ಮತ್ತು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳ್ಳಗೆ 11 ಗಂಟೆಗೆ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಬರಲಿದ್ದಾರೆ. ಅಲ್ಲಿ ಅವರನ್ನು ರಾಜ್ಯ ಬಿಜೆಪಿ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ.

ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಅರವಿಂದ ಲಿಂಬಾವಳಿ ಹಾಗೂ ಸ್ಥಳೀಯ ಶಾಸಕರ ಜೊತೆಗೆ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಅಮಿತ್ ಶಾ ಅವರನ್ನು ಬರಮಾಡಿಕೊಳ್ಳಲಿದ್ದಾರೆ.

ಇದನ್ನು ಓದಿ: Covid Vaccine: ನಾಳೆಯಿಂದ ಆರಂಭವಾಗಲಿದೆ ಲಸಿಕೆ ಹಂಚಿಕೆ ಅಭಿಯಾನ: ಬೆಂಗಳೂರಿನಲ್ಲಿ ಎಲ್ಲೆಲ್ಲಿ‌ ಸಿಗಲಿದೆ ವ್ಯಾಕ್ಸಿನ್?

ನಂತರ ಅಮಿತ್ ಶಾ ಭದ್ರಾವತಿಗೆ ಹೋಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಮತ್ತೆ ಭದ್ರಾವತಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ನಾಳೆ ಸಂಜೆ 4 ಕ್ಕೆ ಅಮಿತ್ ಶಾ ರಿಗೆ ಎಚ್​ಎಎಲ್​ನಲ್ಲಿ ನಾಲ್ಕು ಮಂಡಲಗಳ ಶಾಸಕರು, ಕಾರ್ಯಕರ್ತರು ಸ್ವಾಗತಿಸುತ್ತಾರೆ. ಬಳಿಕ ಜ.17ರಂದು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.

ಅಮಿತ್ ಶಾ ಅವರ ಭೇಟಿ ವೇಳೆಯೇ ಇದೀಗ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವವರಿಗೆ ಖಾತೆ ಹಂಚಿಕೆ ಬಗ್ಗೆ ಚರ್ಚೆ ನಡೆಸಿ, ಅಂತಿಮಗೊಳಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ, ಸಚಿವ ಸ್ಥಾನ ಅವಕಾಶ ವಂಚಿತ ಅಸಮಾಧಾನಿತ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಮಿತ್ ಶಾ ಅವರಿಗೆ ಇದೇ ವೇಳೆ ದೂರು ನೀಡಲು ಸಹ ಮುಂದಾಗಿದ್ದಾರೆ.

top videos
    First published: