• Home
 • »
 • News
 • »
 • state
 • »
 • CLP Meeting: ಅಧಿವೇಶನ ಹಿನ್ನೆಲೆ; ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

CLP Meeting: ಅಧಿವೇಶನ ಹಿನ್ನೆಲೆ; ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಶಾಸಕಾಂಗ ಪಕ್ಷದ ಎಲ್ಲ ಶಾಸಕರು ಸಭೆಗೆ ತಪ್ಪದೆ ಹಾಜರಾಗಿ ಅಧಿವೇಶನದಲ್ಲಿ ಚರ್ಚಿಸಲಾಗುವ ವಿಷಯಗಳ ಬಗ್ಗೆ ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡಬೇಕು ಎಂದು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾದ ಈ ತುಕಾರಾಮ್ ಅವರು ಪ್ರಕಟಣೆ ನೀಡಿದ್ದಾರೆ.

ಮುಂದೆ ಓದಿ ...
 • Share this:

  ಬೆಂಗಳೂರು: ಇದೇ ಸೆ. 13 ನೇ ತಾರೀಖಿನಿಂದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ (CLP Leader Siddaramaiah) ಅವರು ನಾಳೆ ಸಿಎಲ್​ಪಿ ಸಭೆ (CLP Meeting) ಕರೆದಿದ್ದಾರೆ. ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ನಾಳಿನ ಸಭೆಗೆ ಕಡ್ಡಾಯವಾಗಿ ಹಾಜರಿರುವಂತೆ ಶಾಸಕರಿಗೆ ಸೂಚನೆ ನೀಡಲಾಗಿದೆ. ಉಭಯ ಸದನದಲ್ಲಿ ಚರ್ಚೆ ಮಾಡಬೇಕಾದ ವಿಚಾರಗಳ ಬಗ್ಗೆ ಸಲಹೆ ನೀಡಲು ಆಗಮಿಸುವಂತೆ ಸೂಚನೆ ನೀಡಲಾಗಿದೆ.


  ಕಾಂಗ್ರೆಸ್ ನ ಉಭಯ ಸದನದ ಸದಸ್ಯರು ನಾಳಿನ ಸಭೆಯಲ್ಲಿ ಭಾಗಿವಹಿಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ , ಪರಿಷತ್ತಿನ ವಿಪಕ್ಷ ನಾಯಕ ಎಸ್ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು ನಾಳಿನ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.


  ಸೆ.13ರ ಸೋಮವಾರದಿಂದ ಸೆ 24ರವರೆಗೆ 15ನೇ ವಿಧಾನಸಭೆಯ 10ನೇ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಪೂರ್ವಭಾವಿ ಸಭೆಯನ್ನು ನಾಳೆ ಸಂಜೆ 6 ಗಂಟೆಗೆ ಬೆಂಗಳೂರಿನ ಹೋಟೆಲ್ ರ್ಯಾಡಿಸನ್ ಬ್ಲೂ (ಏಟ್ರಿಯಾ) ದಲ್ಲಿ ಏರ್ಪಡಿಸಲಾಗಿದೆ. ಸದರಿ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಎಸ್. ಆರ್. ಪಾಟೀಲ್, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಹಾಗೂ ಸಲೀಂ ಅಹಮದ್ ಅವರು ಭಾಗವಹಿಸಲಿದ್ದಾರೆ.


  ಇದನ್ನು ಓದಿ: Flood: ನೆರೆ ಅಧ್ಯಯನಕ್ಕೆ ಬಂದ ಕೇಂದ್ರ ತಂಡಕ್ಕೆ ಪ್ರತಿಭಟನೆ ಬಿಸಿ: ಅಧಿಕಾರಿಗಳ ಎದುರು ಕುಡುಗೋಲು ಹಿಡಿದು ಧರಣಿ ಕುಳಿತ ರೈತ!


  ಈ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಎಲ್ಲ ಶಾಸಕರು ಸಭೆಗೆ ತಪ್ಪದೆ ಹಾಜರಾಗಿ ಅಧಿವೇಶನದಲ್ಲಿ ಚರ್ಚಿಸಲಾಗುವ ವಿಷಯಗಳ ಬಗ್ಗೆ ತಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡಬೇಕು ಎಂದು ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯಾದ ಈ ತುಕಾರಾಮ್ ಅವರು ಪ್ರಕಟಣೆ ನೀಡಿದ್ದಾರೆ.

  Published by:HR Ramesh
  First published: