ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ನಿನ್ನೆ ಮದನೂರು ಗ್ರಾಮದಲ್ಲಿ ದುಷ್ಕರ್ಮಿಗಳು ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿದ್ದಾರೆ. ಪರಿಣಾಮ ಸುಮಾರು 5 ಮಂದಿ ಅಸ್ವಸ್ಥರಾಗಿದ್ದರು, ಈ ಪೈಕಿ ಹೊನ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದರು

G Hareeshkumar | news18
Updated:January 10, 2019, 12:47 PM IST
ನೀರಿಗೆ ಕೀಟನಾಶಕ ಬೆರೆಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ
ಸಿಎಂ ಕುಮಾರಸ್ವಾಮಿ
G Hareeshkumar | news18
Updated: January 10, 2019, 12:47 PM IST
- ಕೃಷ್ಣ ಜಿ.ವಿ

ಬೆಂಗಳೂರು ( ಜ.10) : ಕುಡಿಯುವ ನೀರಿಗೆದುಷ್ಕರ್ಮಿಗಳು ಕೀಟನಾಶಕ ಬೆರೆಸಿದ್ದರಿಂದ ಹಲವ ಮಂದಿ ಅಸ್ವಸ್ಥರಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದರು ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. 

ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಈಗಾಗಲೇ ವಿವಿರ ಪಡೆದಿದ್ದು, ಕೂಡಲೇ ಸ್ಥಳ ಪರಿಶೀಲನೆ ವರದಿ ಸಲ್ಲಿಸಿ, ಪ್ರಕರಣದ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಅಸ್ವಸ್ಥರಾಗಿರುವ ಸಂತ್ರಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ತಪ್ಪಿದ ಮತ್ತೊಂದು ದುರಂತ: ಕುಡಿಯುವ ನೀರಿಗೆ ವಿಷ ಬೆರೆಸಿದ ಕಿಡಿಗೇಡಿಗಳು!

ನಿನ್ನೆ ಮದನೂರು ಗ್ರಾಮದಲ್ಲಿ ದುಷ್ಕರ್ಮಿಗಳು ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿದ್ದಾರೆ. ಪರಿಣಾಮ ಸುಮಾರು 5 ಮಂದಿ ಅಸ್ವಸ್ಥರಾಗಿದ್ದರು, ಈ ಪೈಕಿ ಹೊನ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದರು.

ಈ ಹಿಂದೆ ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದಲ್ಲಿಯೂ ಇಂತಹುದೇ ಘಟನೆಯೊಂದು ನಡೆದಿತ್ತು. ಮಾರಮ್ಮ ದೇವಿಯ ಪ್ರಸಾದದಲ್ಲಿ ವಿಷ ಬೆರಿಸಲಾಗಿತ್ತು. ವಿಷ ಪ್ರಸಾದವನ್ನು ಸೇವಿಸಿದ್ದ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಭಕ್ತರು ಸಾವನ್ನಪ್ಪಿದ್ದರು.

ಇದನ್ನೂ ಓದಿ :  1992ರಲ್ಲಿ ಪಿವಿಎನ್ ರಾವ್​ಗೆ ಅಡ್ಡಗಾಲಾಗಿದ್ದ ಇಂದ್ರಾ ಸಾಹನಿಯಿಂದ ಈಗ ಮೋದಿಗೆ ತಡೆ?
Loading...

First published:January 10, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ