ಆನೇಕಲ್(ಏ.12): ಬೆಂಗಳೂರು ನಗರದಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ . ಅದರ ಎಫೆಕ್ಟ್ ಬೆಂಗಳೂರು ನಗರಕ್ಕೆ ತೀರ ಹತ್ತಿರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ತಟ್ಟಿದ್ದು, ಪ್ರವಾಸಿಗರಿಲ್ಲದೆ ಬಣಗುಡುತ್ತಿದೆ .ಹೌದು, ಕೊರೋನಾ ಎರಡನೇ ಅಲೆ ಎಫೆಕ್ಟ್ನಿಂದಾಗಿ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರು ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಉದ್ಯಾನವನದ ಪ್ರಮುಖ ಸ್ಥಳಗಳಲ್ಲಿ ಸ್ಯಾನಿಟರೈಸ್ ವ್ಯವಸ್ಥೆ, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ . ಸಾಮಾಜಿಕ ಅಂತರ ಕಾಪಾಡುವ ಸಲುವಾಗಿ ಒಂದು ಕುಟುಂಬವನ್ನು ಗುಂಪಾಗಿ ಪರಿಗಣಿಸಿ ಮತ್ತೊಂದು ಗುಂಪಿನ ಜೊತೆ ಸೇರದಂತೆ ಅರಿವು ಮೂಡಿಸುವುದು. ಸಫಾರಿಗೆ ತೆರಳುವ ನಾನ್ ಎಸಿ ಬಸ್ಸುಗಳಲ್ಲಿ ಶೇ. 50 ರಷ್ಟು ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಆದರೂ ಫೆಬ್ರವರಿ ತಿಂಗಳ ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ . ಸದ್ಯ ಶೇ. 25 ರಷ್ಟು ಮಂದಿ ಪ್ರವಾಸಿಗರು ವಿಕೇಂಡ್ ದಿನಗಳಲ್ಲಿ ಭೇಟಿ ನೀಡುತ್ತಿದ್ದಾರೆ. ಉಳಿದ ದಿನಗಳಲ್ಲಿ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ತೀರ ಇಳಿಕೆಯಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ತಿಳಿಸಿದ್ದಾರೆ.
ರಸಗೊಬ್ಬರ ಬೆಲೆ ಏರಿಕೆಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶ
ಇನ್ನೂ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಅಪರೂಪದ ವನ್ಯಜೀವಿಗಳನ್ನು ಕಂಡು ಖುಷಿಯಾಯ್ತು . ಬನ್ನೇರುಘಟ್ಟ ಜೈವಿಕ ವಿಸ್ತಾರವಾಗಿದ್ದು, ವಿವಿಧ ಪ್ರಭೇದದ ವನ್ಯಜೀವಿಗಳು ಇಲ್ಲಿದ್ದಾವೆ . ಆದರೂ ಇಂದು ಬೆರಳೆಣಿಕೆಯಷ್ಟು ಮಂದಿ ಪ್ರವಾಸಿಗರು ಮಾತ್ರ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿದ್ದಾರೆ . ಕೊರೋನಾ ಹರಡುವಿಕೆ ಭಯದಿಂದ ಪ್ರವಾಸಿಗರ ಕೊರೊನಾ ಸೋಂಕು ವೇಗವಾಗಿ ವ್ಯಾಪಿಸುತ್ತಿರುವುದರಿಂದ ಪ್ರವಾಸಿಗರು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಉದ್ಯಾನವನದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ . ಕೆಲವು ಕಡೆ ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಉಳಿದಂತೆ ಕೊರೊನಾ ಹರಡದಂತೆ ತಡೆಯಲು ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿದೆ ಎಂದು ಮಂಗಳೂರಿನಿಂದ ಬನ್ನೇರುಘಟ್ಟ ಉದ್ಯಾನವನಕ್ಕೆ ಕುಟುಂಬದೊಂದಿಗೆ ಭೇಟಿ ನೀಡಿದ್ದ ಗ್ರೇಸಿ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ