ಬಿಡಿಎ ಸಿಬ್ಬಂದಿಗೆ ವರ್ಗಾವಣೆ ಬಿಸಿ; ಬಿಡಿಎ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಧಾರ

ಮೂರು ವರ್ಷಗಳ ನಂತರ ಮತ್ತೆ ಬಿಡಿಎಗೆ ವರ್ಗಾವಣೆ ಆಗಬೇಕಾದರೆ ಆ ಬಗ್ಗೆ ಪ್ರಾಧಿಕಾರದ ಮಂಡಳಿ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಈ ಮಹತ್ವದ ನಿರ್ಧಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಲ್ಲದೇ, ಸೋಮಾರಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಬಿಡಿಎ

ಬಿಡಿಎ

  • Share this:
ಬೆಂಗಳೂರು(ಫೆ.02): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ವರ್ಷಗಳಿಂದ ಜಡ್ಡುಗಟ್ಟಿ ಕುಳಿತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮಹತ್ವದ ನಿರ್ಧಾರವನ್ನು ಪ್ರಾಧಿಕಾರದ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಸ್.ಆರ್.ವಿಶ್ವನಾಥ್, ನೌಕರರು ಮತ್ತು ಕೆಲವು ಅಧಿಕಾರಿಗಳು ಬಿಡಿಎದಲ್ಲಿ ನೇಮಕಾತಿ ಆಗಿ ಇಲ್ಲಿಯೇ ನಿವೃತ್ತಿ ಹೊಂದುತ್ತಿದ್ದಾರೆ. ಇವರಲ್ಲಿ ಕೆಲವರು ಜಡ್ಡುಗಟ್ಟಿದಂತಾಗಿದ್ದು, ಹಲವಾರು ಅಕ್ರಮಗಳನ್ನು ಎಸಗುವ ಮೂಲಕ ಸಂಸ್ಥೆಗೆ ಕಪ್ಪು ಚುಕ್ಕೆ ತರುತ್ತಿದ್ದಾರೆ. ಇದರಿಂದ ಸಂಸ್ಥೆಗೆ ನಷ್ಟವಾಗುತ್ತಿದೆ. ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ ಎಂದು ಪ್ರತಿಪಾದಿಸಿದರು.

ಇಂತಹ ನೌಕರರು ಮತ್ತು ಅಧಿಕಾರಿಗಳನ್ನು ಬೇರೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಲು ಬಿಡಿಎ ಕಾಯ್ದೆಯಲ್ಲಿ ಇದುವರೆಗೆ ಅವಕಾಶವಿರಲಿಲ್ಲ. ಆದ್ದರಿಂದ ವರ್ಗಾವಣೆಗೆ ಅನುವು ಆಗುವ ರೀತಿಯಲ್ಲಿ ಬಿಡಿಎ ಕಾಯ್ದೆ 1976 ರ ಕಲಂ 50 ಕ್ಕೆ ಉಪ ಕಲಂ 3 ಅನ್ನು ಹೊಸದಾಗಿ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ಈ ಕಾಯ್ದೆಗೆ ವಿಧಾನಮಂಡಲದ ಅನುಮತಿ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಅಂಗೀಕಾರ ಪಡೆಯುವುದಾಗಿ ವಿಶ್ವನಾಥ್ ತಿಳಿಸಿದರು.

ಗರಿಷ್ಠ ಮೂರು ವರ್ಷ ಬಿಡಿಎ ಹೊರಕ್ಕೆ ಕಾಯ್ದೆಗೆ ತಿದ್ದುಪಡಿ ತಂದ ನಂತರ ಜಡ್ಡುಗಟ್ಟಿದ ಅಧಿಕಾರಿಗಳು ಮತ್ತು ನೌಕರರನ್ನು ಕನಿಷ್ಠ ಒಂದು ವರ್ಷ ಮತ್ತು ಗರಿಷ್ಠ ಮೂರು ವರ್ಷಗಳವರೆಗೆ ರಾಜ್ಯದ ಇತರೆ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಅನಾಥ ಶವವನ್ನು 2 ಕಿ.ಮೀ. ಹೊತ್ತು ನಡೆದು ಅಂತ್ಯಸಂಸ್ಕಾರ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿ

ಮೂರು ವರ್ಷಗಳ ನಂತರ ಮತ್ತೆ ಬಿಡಿಎಗೆ ವರ್ಗಾವಣೆ ಆಗಬೇಕಾದರೆ ಆ ಬಗ್ಗೆ ಪ್ರಾಧಿಕಾರದ ಮಂಡಳಿ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಈ ಮಹತ್ವದ ನಿರ್ಧಾರದಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಲ್ಲದೇ, ಸೋಮಾರಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕೆಂಪೇಗೌಡ ಬಡಾವಣೆ ಮೂಲಸೌಕರ್ಯಕ್ಕೆ 650 ಕೋಟಿ ರೂಪಾಯಿಉದ್ದೇಶಿತ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು  ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 650 ಕೋಟಿ ರೂಪಾಯಿಗಳನ್ನು ಸಭೆಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಇದುವರೆಗೆ ಬಡಾವಣೆಯಲ್ಲಿ ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳ ವಿಸ್ತೃತ ವರದಿಯನ್ನು ಒಂದು ತಿಂಗಳೊಳಗೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಡಿಸೆಂಬರ್ ಒಳಗೆ ಮೂಲಸೌಕರ್ಯರೆರಾ ಒಪ್ಪಂದದ ಪ್ರಕಾರ ಈ ವರ್ಷದ ಡಿಸೆಂಬರ್ ವೇಳೆಗೆ ಕೆಂಪೇಗೌಡ ಬಡಾವಣೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಬಿಡಿಎ ಬದ್ಧವಾಗಿದ್ದು, ಇದಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದರು.ಬನಶಂಕರಿಗೆ ಕುಡಿಯುವ ನೀರುಹಳೆಯ ಬಡಾವಣೆಗಳಲ್ಲಿ ಒಂದಾಗಿರುವ ಬನಶಂಕರಿ  6 ನೇ ಹಂತ ಬಡಾವಣೆಗೆ ಕಾವೇರಿ ನೀರು ಪೂರೈಸುವುದು ವಿಳಂಬವಾಗಿತ್ತು. ಈ ಬಗ್ಗೆ ಅಲ್ಲಿನ ನಾಗರಿಕರು ಹಲವು ಬಾರಿ ಮನವಿಗಳನ್ನೂ ಸಲ್ಲಿಸಿದ್ದರು.

ಈ ಭಾಗಕ್ಕೆ ಕುಡಿಯುವ ನೀರು ಪೂರೈಸಲು 168 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಪೈಕಿ ಬಿಡಿಎ ಮೂರನೇ ಒಂದು ಭಾಗದಷ್ಟು ಹಣವನ್ನು ಬೆಂಗಳೂರು ಜಲಮಂಡಳಿಗೆ ನೀಡಲಿದ್ದು, ತಕ್ಷಣವೇ ನೀರು ಪೂರೈಕೆ ಕಾಮಗಾರಿಯನ್ನು ಕೈಗೊಳ್ಳುವಂತೆ ಜಲಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಶಿವರಾಮ ಕಾರಂತ ಬಡಾವಣೆಗೆ ಡಿಪಿಆರ್ ಗೆ ನಿರ್ಧಾರಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ಬಡಾವಣೆಯ ಸಾಧಕ ಭಾದಕಗಳನ್ನು ಪರಿಶೀಲಿಸಿ ವರದಿ ನೀಡಲು ಮೂವರು ನಿವೃತ್ತ ಉನ್ನತಾಧಿಕಾರಿಗಳ ಸಮಿತಿಯನ್ನು ರಚಿಸಿದ್ದು, ಅದರಂತೆ ಸಮಿತಿಯು ಕಾರ್ಯಪ್ರವೃತ್ತವಾಗಿದೆ.

ಮತ್ತೊಂದೆಡೆ ಬಿಡಿಎ ಬಡಾವಣೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದೆ. ಇದಕ್ಕೆ ಪೂರಕವಾಗಿ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಕನ್ಸಲ್ಟೆನ್ಸಿಯನ್ನು ನೇಮಕ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ವಿಶ್ವನಾಥ್ ತಿಳಿಸಿದರು.
Published by:Latha CG
First published: