ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು (KSRTC And BMTC Employees) ರಾಜ್ಯ ಸರ್ಕಾರದ (Karnataka Government) ವಿರುದ್ಧ ಸಿಡಿದೆದ್ದಿದ್ದು, ಮತ್ತೆ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. 6 ವರ್ಷ ಕಳೆದರೂ ಸಾರಿಗೆ ನೌಕರನಿಗೆ ವೇತನ ಹೆಚ್ಚಳ ಮಾಡದ ಸರ್ಕಾರ ನಿರ್ಲಕ್ಷ್ಯ ಧೋರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೀದಿಗಿಳಿಯಲು (Employees Strike) ನಿರ್ಧರಿಸಿದ್ದಾರೆ. ಇದೇ ತಿಂಗಳ ಜನವರಿ 24ರಿಂದ ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ಏರ್ಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ (Bus Bandh) ಸಾಧ್ಯತೆ ಇದೆ.
ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ
ಸಾರಿಗೆ ನೌಕರರು ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಸಲಿದ್ದು, ಇದೇ ವೇಳೆ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಧರಣಿ ಸತ್ಯಾಗ್ರಹದಲ್ಲಿ ಹೆಚ್ಚಿನ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ಸಂಚಾರ ವ್ಯತ್ಯಯ ಸಾಧ್ಯತೆ ಇದೆ.
ಇದನ್ನೂ ಓದಿ: Bengaluru: ಮೇಲಿನ ಮನೆ ಅಂಕಲ್, ಕೆಳಗಿನ ಮನೆ ಆಂಟಿ ಲವ್ ಸ್ಟೋರಿ! ಹೇಳದೆ ಕೇಳದೆ ಜೂಟ್; ಮಿಸ್ ಆದವರ ಅಸಲಿ ಕಹಾನಿ ಏನು?
ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್ ನಲ್ಲಿ 15 ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೂ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ಮಾಡಲಾಗಿದೆ.
ನಿಗಮಗಳ ನಿರ್ಧಾರಕ್ಕೆ 1 ಲಕ್ಷ 30 ನೌಕರರು ಅಸಮಾಧಾನ
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಸಾರಿಗೆ ನಿಗಮಗಳು ವೇತನ ಪರಿಷ್ಕರಣೆ ಮಾಡುತ್ತಿದ್ದವು. 2016 ರಲ್ಲಿ ಶೇ 12.5 ರಷ್ಟು ವೇತನ ಪರಿಷ್ಕರಣೆ ಆಗಿತ್ತು, ಬಳಿಕ ನಿಯಮಬದ್ಧವಾಗಿ 2020 ಮಾರ್ಚ್ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ ಕಳೆದ ಆರು ವರ್ಷಗಳಿಂದ ವೇತನ ಪರಿಷ್ಕರಣೆ ಬಗ್ಗೆ ಸರ್ಕಾರ ಪ್ರಸ್ತಾಪವೇ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1 ಲಕ್ಷ 30 ನೌಕರರು ಅಸಮಾಧಾನಗೊಂಡಿದ್ದಾರೆ.
ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಸರ್ಕಾರಕ್ಕೆ ಟೆನ್ಷನ್
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಬೇಡಿಕೆ ಸರ್ಕಾರ ಕೂಡ ನೌಕರರ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ನಿರ್ಲಕ್ಷ್ಯ ನಡೆಯಿಂದ ಬೇಸತ್ತು ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮತ್ತೆ ಮಂಗಳವಾರ ಧರಣಿ ನಡೆಸಲು ನೌಕರರು ಮುಂದಾಗಿದ್ದಾರೆ. ಇದರೊಂದಿತೆ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ಸರ್ಕಾರಕ್ಕೆ ಸಾರಿಗೆ ನೌಕರರು ಹೋರಾಟದ ಟೆನ್ಷನ್ ಶುರುವಾಗಿದೆ.
ಇದನ್ನೂ ಓದಿ: VV Puram Food Street: ಬೆಂಗಳೂರಿನ ವಿ ವಿ ಪುರಂ ಫುಡ್ ಸ್ಟ್ರೀಟ್ಗೆ ಹೊಸ ಲುಕ್! ಹೈಟೆಕ್ ಟಚ್ ಕೊಡಲು ಬಿಬಿಎಂಪಿ ಪ್ಲಾನ್
ಸಾರಿಗೆ ನೌಕರರ ಬೇಡಿಕೆಗಳೇನು?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ