BJP ಕೆಣಕಲು RSS ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್​! ಸಂಸದ ತೇಜಸ್ವಿ ಸೂರ್ಯ ಕೆಂಡಾಮಂಡಲ

ಬಿಜೆಪಿ ಕೆಣಕಲು ಕಾಂಗ್ರೆಸ್​ ಮತ್ತೆ RSS ಖಾಕಿ ಚಡ್ಡಿಯನ್ನೇ ಅಸ್ತ್ರವನ್ನಾಗಿ ಬಳಸಿಕೊಂಡಿದೆ. RSS​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಹಂಚಿಕೊಂಡು ಬಿಜೆಪಿ ಮತ್ತು ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಭಾರತ್ ಜೋಡೋ ಯಾತ್ರೆ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್​ ಹೇಳಿದೆ.

ಸಂಸದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ

  • Share this:
ಟ್ವಿಟರ್​ನಲ್ಲಿ ಕಾಂಗ್ರೆಸ್ (Congress)​ ಹಾಗೂ ಬಿಜೆಪಿ (BJP) ನಡುವೆ ವಾರ್​ ಶುರುವಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಆರ್​ಎಸ್​ಎಸ್​ ಚಡ್ಡಿ ಸುಡುವ ಅಭಿಯಾನವನ್ನು ಕೈಗೊಂಡಿದ್ದು ಗೊತ್ತೇ ಇದೆ. ಇದೀಗ ಮತ್ತೆ ಕಾಂಗ್ರೆಸ್​ ಆರ್​ಎಸ್ಎಸ್​ ಚಡ್ಡಿಗೆ (RSS Chaddi) ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ (Twitter) ಹಂಚಿಕೊಳ್ಳುವ ಮೂಲಕ ಮತ್ತೆ ಕೇಸರಿ ಕಲಿಗಳ ಕೆಂಗಣ್ಣಿಗೆ ಗುರಿಯಾಗಿದೆ.  ಕಾಂಗ್ರೆಸ್​ ಟ್ವೀಟ್​ಗೆ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಸಂಸದ ತೇಜಸ್ವಿ ಸೂರ್ಯ (MP Tejasvi Surya) ಕಿಡಿಕಾರಿದ್ದಾರೆ. 

ಬಿಜೆಪಿ ಕೆಣಕಲು RSS ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್​

ಕಾಂಗ್ರೆಸ್​ ಪಕ್ಷ ಭಾರತ್ ಜೋಡೋ ಯಾತ್ರೆ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಬಿಜೆಪಿ ಕೆಣಕಲು ಕಾಂಗ್ರೆಸ್​ ಮತ್ತೆ RSS ಖಾಕಿ ಚಡ್ಡಿಯನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ. RSS​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಹಂಚಿಕೊಂಡು ಬಿಜೆಪಿ ಮತ್ತು ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಭಾರತ್ ಜೋಡೋ ಯಾತ್ರೆ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್​ ಹೇಳಿದೆ.

ಆರ್​ಎಸ್​ಎಸ್​ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್​ಎಸ್​ಎಸ್​ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ.



ಇದನ್ನೂ ಓದಿ: H D Kumaraswamy: ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ಅತಿದೊಡ್ಡ ಹಗರಣ ಬಯಲಿಗೆಳೆಯುವೆ; ಎಚ್​ಡಿಕೆ ಹೊಸ ಬಾಂಬ್​

ಕಾಂಗ್ರೆಸ್ ನಾಶಕ್ಕೆ ಹೋಲಿಕೆ ಮಾಡಿದ ತೇಜಸ್ವಿ ಸೂರ್ಯ

ಕಾಂಗ್ರೆಸ್​ ಟ್ವೀಟ್​ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಸಂಸದ ತೇಜಸ್ವಿ ಸೂರ್ಯ, ಚಡ್ಡಿ ಸುಡುವುದನ್ನು ಕಾಂಗ್ರೆಸ್ ನಾಶಕ್ಕೆ ಹೋಲಿಕೆ ಮಾಡಿದ್ದಾರೆ.





ಕಾಂಗ್ರೆಸ್​ನಗೆ ತಿರುಗೇಟು ಕೊಟ್ಟ ತೇಜಸ್ವಿ, ಈ ಚಿತ್ರವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ ಹಿಂದೆ ಅವರು ಹಚ್ಚಿದ ಬೆಂಕಿ ಭಾರತದ ಬಹುತೇಕ ಭಾಗಗಳಲ್ಲಿ ಅವರನ್ನು ಸುಟ್ಟುಹಾಕಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲೂ ಶೀಘ್ರದಲ್ಲೇ ಬೂದಿಯಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  Rajakaluve: ರಾಜಕಾಲುವೆ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ; ದಿಢೀರ್ ಹೇಳಿಕೆ ಬದಲಿಸಿದ ಆಯುಕ್ತರು

ಮತ್ತೊಂದು ಟ್ವೀಟ್‌ ಮಾಡಿದ ಸಂಸದರು, 1984ರ ಸಿಖ್ ವಿರೋಧಿ ದಂಗೆ ಮತ್ತು 2002ರ ಗೋಧ್ರಾ ರೈಲು ದಂಗೆ ಪ್ರಕರಣಕ್ಕೆ ಕಾಂಗ್ರೆಸ್ ಪಕ್ಷವನ್ನು ದೂಷಿಸಿದ್ದಾರೆ. “1984 ರಲ್ಲಿ ಕಾಂಗ್ರೆಸ್ ಬೆಂಕಿ ದೆಹಲಿಯನ್ನು ಸುಟ್ಟಿತು. ಅದರ ಪರಿಸರ ವ್ಯವಸ್ಥೆಯು 2002ರಲ್ಲಿ ಗೋಧ್ರಾದಲ್ಲಿ 59 ಕರಸೇವಕರನ್ನು ಜೀವಂತವಾಗಿ ಸುಟ್ಟುಹಾಕಿತು. ಇದೀಗ ಮತ್ತೆ ಅದಕ್ಕೆ ಕರೆ ನೀಡಿದ್ದಾರೆ. ರಾಹುಲ್ ಗಾಂಧಿ ಭಾರತದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.
Published by:ಪಾವನ ಎಚ್ ಎಸ್
First published: