Twitter Campaign: ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್​ನಲ್ಲಿ ಅಭಿಯಾನ; ಉತ್ತರ ಕನ್ನಡ ಜನರಿಗೆ ಅನೇಕರ ಬೆಂಬಲ

ಸುಸಜ್ಜಿತ ಆಸ್ಪತ್ರೆಗಾಗಿ ವಿಭಿನ್ನ ಅಭಿಯಾನದ ಮೂಲಕ ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ. WeNeedEmergencyHospitalInUttarakannada ಎನ್ನುವ ಹ್ಯಾಷ್‌ಟ್ಯಾಗ್‌ನೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಪ್ರಮುಖರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕಾರವಾರ (ಜು.24): ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಸುಸಜ್ಜಿತ ಆಸ್ಪತ್ರೆಗಾಗಿ (Hospital) ಬೇಡಿಕೆ ಹೆಚ್ಚಾಗಿದೆ. ಶಿರೂರು ಟೋಲ್ ಗೇಟ್‌ನಲ್ಲಿ (Shirooru Toll Gate) ನಡೆದ ಭೀಕರ ಆಂಬುಲೆನ್ಸ್‌ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆಯ ಬಳಿಕ ಉತ್ತರ ಕನ್ನಡಿಗರು ಆಸ್ಪತ್ರೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರು ಮಾಡಿದ್ದಾರೆ. ವೀ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಉತ್ತರಕನ್ನಡ ಹ್ಯಾಶ್ ಟ್ಯಾಗ್ (Hash Tag) ಎಂದು ಹಾಕಿ ಅಭಿಯಾನ ಶುರು ಮಾಡಿದ್ದಾರೆ.  ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಪ್ರಮುಖರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಲು ನಿರ್ಧರಿಸಿದ್ದಾರೆ. ಜೊತೆಗೆ NoHospitalNoVote ಎನ್ನುವ ಹ್ಯಾಷ್‌ಟ್ಯಾಗ್ ಸಹ ಬಳಸಲಿದ್ದು, ಆಸ್ಪತ್ರೆ ನಿರ್ಮಿಸದಿದ್ರೆ ಮತದಾನ (Election) ಬಹಿಷ್ಕರಿಸುವ ಎಚ್ಚರಿಕೆಯನ್ನು ಜನಪ್ರತಿನಿಧಿಗಳಿಗೆ ರವಾನಿಸಿದ್ದಾರೆ. 

ಸುಸಜ್ಜಿತ ಆಸ್ಪತ್ರೆಗಾಗಿ ವಿಭಿನ್ನ ಅಭಿಯಾನ

ಅನೇಕ ಪ್ರವಾಸಿ ತಾಣವಿರೋ ಇಲ್ಲಿ ಸಾವಿರಾರು ವಾಹನಗಳು ಓಡಾಡುತ್ತದೆ. ಜೊತೆಗೆ ಅಪಘಾತಗಳು ಸಂಭವಿಸುತ್ತದೆ.  ಆದರೆ ಇಲ್ಲಿ ತುರ್ತು ಚಿಕಿತ್ಸಾ ಆಸ್ಪತ್ರೆ ಇಲ್ಲ. ಈ ನಿಟ್ಟಿನಲ್ಲಿ ಇದೀಗ ಮತ್ತೆ ಜಿಲ್ಲೆಯ ಜನತೆ ಒಟ್ಟಾಗಿ ಸುಸಜ್ಜಿತ ಆಸ್ಪತ್ರೆಗಾಗಿ ವಿಭಿನ್ನ ಅಭಿಯಾನದ ಮೂಲಕ ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ. ಜಿಲ್ಲೆಗೆ ಬರುವ ಪ್ರವಾಸಿಗರಿಗೆ, ಜಿಲ್ಲೆಯ ಜನತೆ 'ದಯವಿಟ್ಟು ಯಾವುದೇ ಅಪಘಾತಗಳನ್ನು ಮಾಡಿಕೊಳ್ಳಬೇಡಿ, ಚಿಕಿತ್ಸೆ ಪಡೆದುಕೊಳ್ಳಲು ನಮ್ಮಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ' ಎಂದು ಮನವಿ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸಂದೇಶ ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತ

ಇಷ್ಟು ದೊಡ್ಡ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ತುರ್ತು ಚಿಕಿತ್ಸೆ ನೀಡುವ ಒಂದೇ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ತುರ್ತು ಅನಾರೋಗ್ಯದ ಪರಿಸ್ಥಿತಿಯಲ್ಲಿ ದೇವರ ಮೇಲೆ ಭಾರ ಹಾಕಿ ನೆರೆಯ ಜಿಲ್ಲೆಯ ಆಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಏರಿ ಹೋಗಬೇಕಾದ ಅನಿವಾರ್ಯತೆಯನ್ನು ಜಿಲ್ಲೆಯ ಜನತೆ ಎದುರಿಸುತ್ತಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಜನರು ಎಮರ್ಜೆನ್ಸಿ/ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Chikkamagaluru: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ, ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಹೊಡೆದಾಟ

NoHospitalNoVote

ಇಷ್ಟು ದಿನ ಜನ ಪ್ರತಿನಿಧಿಗಳಿಗೆ ಮನವಿ ಮಾಡಿ ಬೇಸತ್ತಿರುವ ಜನರು ಇದೀಗ ಹೋರಾಟದ ಹಾದಿ ತುಳಿಯಲು ಮುಂದಾಗಿದ್ದಾರೆ. ಇಂದು ಟ್ವಿಟರ್ ಅಭಿಯಾನದ ಮೂಲಕ ಹೋರಾಟಕ್ಕೆ ಮುನ್ನುಡಿಯಿಡುತ್ತಿದ್ದಾರೆ. ಜಿಲ್ಲೆಯ ಜನರು ಸಂಜೆ 5 ಗಂಟೆಗೆ ಏಕಕಾಲಕ್ಕೆ ಒಟ್ಟಾಗಿ WeNeedEmergencyHospitalInUttarakannada ಎನ್ನುವ ಹ್ಯಾಷ್‌ಟ್ಯಾಗ್‌ನೊಂದಿಗೆ ಪ್ರಧಾನಿ ನರೇಂದ್ರಮೋದಿ, ಅಮಿತ್ ಶಾ, ಸಿಎಂ ಬೊಮ್ಮಾಯಿ ಸೇರಿದಂತೆ ಪ್ರಮುಖರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಜೊತೆಗೆ NoHospitalNoVote ಎನ್ನುವ ಹ್ಯಾಷ್‌ಟ್ಯಾಗ್ ಸಹ ಬಳಸಲಿದ್ದು, ಆಸ್ಪತ್ರೆ ನಿರ್ಮಿಸದಿದ್ರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆಯನ್ನು ಜನಪ್ರತಿನಿಧಿಗಳಿಗೆ ರವಾನಿಸಿದ್ದಾರೆ.





ಇದನ್ನೂ ಓದಿ: Basavaraj Bommai: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಅಗಸ್ಟ್ 15ರೊಳಗೆ ಆಸ್ಪತ್ರೆ ಘೋಷಣೆಗೆ ಆಗ್ರಹ

ಕಾರವಾರದ ಕೆಲವರು ಒಟ್ಟಾಗಿ ಸುಸಜ್ಜಿತ ಆಸ್ಪತ್ರೆಗಾಗಿ ರಕ್ತದ ಮೂಲಕ ಪ್ರಧಾನಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಅಗಸ್ಟ್ 15ರೊಳಗೆ ಉತ್ತರ ಕನ್ನಡಕ್ಕೆ ತುರ್ತು ಚಿಕಿತ್ಸಾ ಆಸ್ಪತ್ರೆಯನ್ನು ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಿದ್ದಾರೆ. ಒಟ್ಟಾರೆ ಆಸ್ಪತ್ರೆಗಾಗಿ ಜಿಲ್ಲೆಯಾದ್ಯಂತ ಹೋರಾಟ ರೂಪುಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಅನ್ನೋದನ್ನು ಕಾದುನೋಡಬೇಕು.
Published by:Pavana HS
First published: