Breaking News: ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ನಲ್ಲಿ ಇಬ್ಬರು ಅರೆಸ್ಟ್! ನಾಲ್ಕೇ ಗಂಟೆಗಳಲ್ಲಿ ಕೋಳ ತೊಡಿಸಿದ ಪೊಲೀಸರು

ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಮಾಡಿ ಕಾರ್‌ನಲ್ಲಿ ಎಸ್ಕೇಪ್ ಆಗಿದ್ದ ಹಂತಕರು, ಕೇವಲ ನಾಲ್ಕೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಂದ್ರಶೇಖರ್ ಗುರೂಜಿ

ಚಂದ್ರಶೇಖರ್ ಗುರೂಜಿ

  • Share this:
ಹುಬ್ಬಳ್ಳಿ: ಖ್ಯಾತ ವಾಸ್ತು ತಜ್ಞ (Vastu Expert) ಚಂದ್ರಶೇಖರ್ ಗುರೂಜಿ (Chandrashekhar Guruji) ಹತ್ಯೆ ಪ್ರಕರಣದಲ್ಲಿ (Murder Case) ಇಬ್ಬರು ಆರೋಪಿಗಳನ್ನು (Accused) ಬಂಧಿಸಲಾಗಿದೆ. ಹತ್ಯೆ (Murder) ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು (Police) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಮಾಡಿ ಕಾರ್‌ನಲ್ಲಿ (Car) ಎಸ್ಕೇಪ್ (Escape) ಆಗಿದ್ದ ಹಂತಕರು, ಕೇವಲ ನಾಲ್ಕೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸರಳ ವಾಸ್ತು ಮೂಲಕ ಜನಪ್ರಿಯರಾಗಿದ್ದ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಧಾರುಣವಾಗಿ ಹತ್ಯೆ ಮಾಡಲಾಗಿದೆ. ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಆಗಮಿಸಿದ ಇಬ್ಬರು ಹಂತಕರು, ಚಾಕುವಿನಿಂದ ಮತ್ತೆ ಮತ್ತೆ ಇರಿದು ಗುರೂಜಿಯನ್ನು ಕೊಲೆ ಮಾಡಿ, ಬಳಿಕ ಕಾರ್‌ನಲ್ಲಿ ಎಸ್ಕೇಪ್ ಆಗಿದ್ದರು.

ಬಂಧಿತ ಆರೋಪಿಗಳು ಯಾರು?

ಬಂಧಿತರನ್ನು ಮಹಾಂತೇಶ್ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಗುರೂಜಿ ಆಪ್ತ ವಲಯದಲ್ಲೇ ಗುರುತಿಸಿಕೊಂಡವರು ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ, ಸದ್ಯ ಧಾರವಾಡದ ಗೋಕುಲ ರಸ್ತೆ ಠಾಣೆಯ ಪೊಲೀಸರು ರಾಮದುರ್ಗದ ಬಸವೇಶ್ವರ ಸರ್ಕಲ್‌ನಲ್ಲಿ ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಹಂತಕರನ್ನು ಹಿಡಿಯಲು ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚನೆ ಮಾಡಲಾಗಿತ್ತು. ಹುಬ್ಬಳ್ಳಿಯ ಎಂಟೂ ದಿಕ್ಕಿನಲ್ಲಿ ನಾಕಾಬಂಧಿ ಹಾಕಲಾಗಿತ್ತು. ಅಕ್ಕ-ಪಕ್ಕದ ಜಿಲ್ಲೆಗಳ ಪೊಲೀಸರಿಗೂ ಮಾಹಿತಿ ರವಾನೆ ಮಾಡಲಾಗಿತ್ತು ಎಂದು ಹುಬ್ಬಳ್ಳಿಯ ಪೊಲೀಸ್ ಕಮಿಷನರ್ ಲಾಬೂರಾಮ್ ಮಾಹಿತಿ ನೀಡಿದ್ದಾರೆ.ಆರೋಪಿಗಳ ಹಿನ್ನೆಲೆ ಏನು?

ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಎಂಬುವವರೇ ಹಂತಕರು ಎಂದು ತಿಳಿದು ಬಂದಿದೆ. ಇಬ್ಬರೂ ಆರೋಪಿಗಳು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡ ನಿವಾಸಿಗಳು ಎಂದು ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಗುರೂಜಿ ಆಪ್ತ ವಲಯದಲ್ಲೇ ಗುರುತಿಸಿಕೊಂಡವರು ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

ಆಸ್ತಿ ವಿಚಾರಕ್ಕೆ ನಡೆಯಿತಾ ಗುರೂಜಿ ಕೊಲೆ?

ಚಂದ್ರಶೇಖರ್ ಗುರೂಜಿ ಶಿಷ್ಯರ ಹೆಸರಿನಲ್ಲಿ ಆಸ್ತಿ ಮಾಡಿ ಇಟ್ಟಿದ್ದರು ಎನ್ನಲಾಗಿದೆ. ಆದರೆ ಆಸ್ತಿ ವಾಪಸ್ ಕೇಳಿದ್ದಕ್ಕೆ ಹತ್ಯೆ ನಡೆದಿರಬಹುದು ಅಂತ ಶಂಕಿಸಲಾಗಿದೆ.

ಗುರೂಜಿ ಆಪ್ತ ವಲಯದಲ್ಲಿದ್ದ ಹಂತಕರು

ಮೂಲಗಳ ಮಾಹಿತಿ ಪ್ರಕಾರ ಮಹಾಂತೇಶ ಶಿರೋಳ ಗುರೂಜಿ ಜತೆ ಬಹಳ ವರ್ಷದಿಂದ ಜತೆಗಿದ್ದ. ಗೋಕುಲ್ ರೋಡ್​​ನ ಗೂರೂಜಿ ಅಪಾರ್ಟ್​ಮೆಂಟ್​ನಲ್ಲೇ ಹಂತಕ ವಾಸ ಮಾಡುತ್ತಿದ್ದ. ಗೋಕುಲ್ ರಸ್ತೆ​ ಹಿಂಭಾಗದ ಅಪಾರ್ಟ್​ಮೆಂಟ್​ನಲ್ಲಿ ಗುರೂಜಿ ವಾಸವಿದ್ದರು. 2016ರವರೆಗೂ ಗುರೂಜಿ ಜತೆಗೇ ಮಹಾಂತೇಶ್ ಇದ್ದರೆ,  2019ರವರೆಗೂ ಗುರೂಜಿ ಜತೆಗೆ ಹಂತಕನ ಪತ್ನಿ ಕೆಲಸಕ್ಕಿದ್ದಳು. ಇವರಿಬ್ಬರಿಗೂ ಮದುವೆ ಮಾಡಿಸಿದ್ದೇ ಚಂದ್ರಶೇಖರ್ ಗುರೂಜಿ ಎಂದೂ ಹೇಳಲಾಗುತ್ತಿದೆ.

ಭಕ್ತರ ಸೋಗಿನಲ್ಲಿ ಬಂದು ಕೊಲೆ

ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ಚಾಕುವಿನಿಂದ ಇರಿದು ಚಂದ್ರಶೇಖರ್ ಗುರೂಜಿಯನ್ನು  ಹತ್ಯೆ ಮಾಡಿದ್ದರು. ಚಂದ್ರಶೇಖರ್‌ ಗುರೂಜಿ ಇಂದು ಹೋಟೆಲಿನಲ್ಲಿ ತಂಗಿದ್ದರು. ಹೋಟೆಲಿನಲ್ಲಿ ತಂಗಿದ್ದ ಇವರನ್ನು ಕರೆ ಮಾಡಿದ ಇಬ್ಬರು ರಿಸೆಪ್ಶನಿಸ್ಟ್‌ ಜಾಗಕ್ಕೆ ಬರಲು ಹೇಳಿದ್ದಾರೆ.

ಇದನ್ನೂ ಓದಿ: Chandrashekhar Guruji Profile: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ವಾಸ್ತುಶಾಸ್ತ್ರ ಕಲಿತದ್ದು ಎಲ್ಲಿ? ಹೀಗಿತ್ತು ಅವರ ಜೀವನ

60 ಬಾರಿ ಚುಚ್ಚಿ ಗುರೂಜಿ ಹತ್ಯೆ

ಗುರೂಜಿ ಇವರ ಬಳಿ ಬರುತ್ತಿದ್ದಂತೆ ಇಬ್ಬರು ಎದ್ದು ನಿಂತಿದ್ದಾರೆ. ಗುರೂಜಿ ಕುಳಿತ ಬಳಿಕ ಒಬ್ಬ ಆಶೀರ್ವಾದ ಪಡೆಯುವ ನಾಟಕ ಮಾಡುತ್ತಿದ್ದರೆ, ಮತ್ತೊಬ್ಬ ನಿಂತಿದ್ದ. ಕೆಲ ಕ್ಷಣದಲ್ಲೇ ಮುಂದುಗಡೆ ನಿಂತಿದ್ದ ಯುವಕ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಮತ್ತೊಬ್ಬ ಚಾಕುವಿನಿಂದ ಇರಿದಿದ್ದಾನೆ. ನಂತರ ಇಬ್ಬರು ಮನ ಬಂದಂತೆ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಒಟ್ಟು 20 ಸೆಕೆಂಡ್‌ನಲ್ಲಿ 60 ಬಾರಿ ಚಾಕುವಿನಿಂದ ಇರಿಯಲಾಗಿತ್ತು.
Published by:Annappa Achari
First published: