ಹಾಸನದಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಅಪಘಾತ ನಡೆದ ನಂತರ ಸ್ಥಳದಲ್ಲಿ ಕೆಲ ಕಾಲ ಸಂಚಾತರ ದಟ್ಟಣೆ ಉಂಟಾಗಿತ್ತು. ನಂತರ ಲಾರಿಯನ್ನು ಸ್ಥಳದಿಂದ ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಅಪಘಾತಕ್ಕೆ ಒಳಗಾದ ಲಾರಿ

ಅಪಘಾತಕ್ಕೆ ಒಳಗಾದ ಲಾರಿ

  • Share this:
ಹಾಸನ (ಫೆ.25): ಸರಕು ಸಾಗಣೆ ಮಾಡುತ್ತಿದ್ದ ಎರಡು ಲಾರಿಗಳ ನಡುವೆ ಇಂದು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಿಂಗಾಪುರ ಗ್ರಾಮದ ಬಳಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ‌ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳದಲ್ಲಿ ಯಾವುದೆ ತಿರುವು ಇರಲಿಲ್ಲ. ಆದಾಗ್ಯೂ ಡಿಕ್ಕಿ ಸಂಭವಿಸಿದೆ.

ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹ ಹೊರ ತೆಗೆಯಲು ಸ್ಥಳೀಯರು, ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ನಡೆದ ನಂತರ ಸ್ಥಳದಲ್ಲಿ ಕೆಲ ಕಾಲ ಸಂಚಾತರ ದಟ್ಟಣೆ ಉಂಟಾಗಿತ್ತು. ನಂತರ ಲಾರಿಯನ್ನು ಸ್ಥಳದಿಂದ ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸದ್ಯ, ಪೊಲೀಸರು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಭಾರತ- ಅಮೆರಿಕ ನಡುವೆ ಮಹತ್ವದ ಒಪ್ಪಂದ; 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕ್ತಾರಾ ಟ್ರಂಪ್?
First published: