• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Forest Fire: ಬಾಳೆಹೊನ್ನೂರಿನಲ್ಲಿ ಅರಣ್ಯಕ್ಕೆ ಬೆಂಕಿ ಹೆಚ್ಚಿದ ಕಿಡಿಗೇಡಿ ಪೊಲೀಸ್‌ ಬಲೆಗೆ; ಇಬ್ಬರು ಪರಾರಿ

Forest Fire: ಬಾಳೆಹೊನ್ನೂರಿನಲ್ಲಿ ಅರಣ್ಯಕ್ಕೆ ಬೆಂಕಿ ಹೆಚ್ಚಿದ ಕಿಡಿಗೇಡಿ ಪೊಲೀಸ್‌ ಬಲೆಗೆ; ಇಬ್ಬರು ಪರಾರಿ

ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿ ಬಂಧನ

ಅರಣ್ಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿ ಬಂಧನ

ಬಾಳೆಹೊನ್ನೂರು ಸಮೀಪದ ಖಾಂಡ್ಯದ ಕಸ್ಕೆಮನೆಯಲ್ಲಿರುವ ಮೀಸಲು ಅರಣ್ಯ ಸೇರಿ ಅಕ್ಕಪಕ್ಕದ ತೋಟಗಳಿಗೂ ಬೆಂಕಿಯ ಕೆನ್ನಾಲಿಗೆ ಚಾಚಿದ್ದ ಪರಿಣಾಮ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿದ್ದ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದರು. ಬಳಿಕ ಬೆಂಕಿಯ ಕಾವು ತಣ್ಣಗಾಗುವ ವೇಳೆ ಮಧ್ಯರಾತ್ರಿ ಕಳೆದಿತ್ತು.

ಮುಂದೆ ಓದಿ ...
 • Share this:

  ಚಿಕ್ಕಮಗಳೂರು: ಇಲ್ಲಿನ ಬಸವನಕೋಟೆ (Basavanakote) ಮೀಸಲು ಅರಣ್ಯಕ್ಕೆ (Reserved Forest) ಬೆಂಕಿ ಹಚ್ಚಿದ ಇಬ್ಬರು ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಆ ಪೈಕಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಸವನಕೋಟೆ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದು ನೂರಾರು ಎಕರೆ ಅರಣ್ಯ ನಾಶ ಆಗಿತ್ತು.


  ಕಳೆದ ಭಾನುವಾರ ರಾತ್ರಿ ಬೆಂಕಿ ತಗುಲಿ ಹತ್ತಾರು ಎಕರೆ ಮೀಸಲು ಅರಣ್ಯ ನಾಶ ಮಾಡಲಾಗಿತ್ತು, ಬೆಂಕಿ ಬಿದ್ದ ಸುದ್ದಿ ತಲುಪಿದ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದರು. ಮೀಸಲು ಅರಣ್ಯ ಸೇರಿದಂತೆ ಅಕ್ಕಪಕ್ಕದ ತೋಟಗಳಿಗೂ ವ್ಯಾಪಿಸಿದ್ದ ಬೆಂಕಿ ನೂರಾರು ಎಕರೆ ಅರಣ್ಯ ಮತ್ತು ತೋಟಗಾರಿಕಾ ಬೆಳೆಯನ್ನು ನಾಶಪಡಿಸಿತ್ತು.


  ಇದನ್ನೂ ಓದಿ: Untouchability: ದೇವಸ್ಥಾನ ಪ್ರವೇಶಿಸಿದ್ದ ದಲಿತ ಕುಟುಂಬದ ಮೇಲೆ ಹಲ್ಲೆ, ಮನೆಗೆ ಬೆಂಕಿ ಹಚ್ಚಲು ಮುಂದಾದ ಸವರ್ಣಿಯರು


  ಅಕ್ಕಪಕ್ಕದ ತೋಟಗಳಿಗೂ ಚಾಚಿದ ಬೆಂಕಿಯ ಕೆನ್ನಾಲಿಗೆ!


  ಬಾಳೆಹೊನ್ನೂರು ಸಮೀಪದ ಖಾಂಡ್ಯದ ಕಸ್ಕೆಮನೆಯಲ್ಲಿರುವ ಮೀಸಲು ಅರಣ್ಯ ಸೇರಿ ಅಕ್ಕಪಕ್ಕದ ತೋಟಗಳಿಗೂ ಬೆಂಕಿಯ ಕೆನ್ನಾಲಿಗೆ ಚಾಚಿದ್ದ ಪರಿಣಾಮ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿದ್ದ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದರು. ಬಳಿಕ ಬೆಂಕಿಯ ಕಾವು ತಣ್ಣಗಾಗುವ ವೇಳೆ ಮಧ್ಯರಾತ್ರಿ ಕಳೆದಿತ್ತು.


  ಘಟನೆ ಸಂಬಂಧ ಕೂಡಲೇ ಪ್ರಕರಣ ದಾಖಲಿಸಿಕೊಂಡ ಬಾಳೆಹೊನ್ನೂರು ಅರಣ್ಯಾಧಿಕಾರಿಗಳು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಅದರನ್ವಯ ಮೀಸಲು ಅರಣ್ಯಕ್ಕೆ ಬೆಂಕಿ ಓರ್ವನನ್ನು ಬಂಧನ ಮಾಡಿದ್ದು, ಇಬ್ಬರು ತಲೆ ಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ರಘು ಎಂದು ಗುರುತಿಸಲಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳಾದ ಕುಮಾರ್ ಹಾಗೂ ವೆಂಕಟೇಶ್ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.


  ಕಾಡ್ಗಿಚ್ಚಿಗೆ ಮೂರು ಬೈಕ್‌ಗಳು ಭಸ್ಮ!


  ಇನ್ನು ಮತ್ತೊಂದು ಪ್ರಕರಣದಲ್ಲಿ ಕಾಡ್ಗಿಚ್ಚು ಉಂಟಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾಡ್ಗಿಚ್ಚು ಉಂಟಾಗಿ ಗಾಳಿಯಲ್ಲಿ ಬಂದ ಬೆಂಕಿಯ ಕಿಡಿಯಿಂದ ಮೂರು ಬೈಕ್‌ಗಳು ಬೆಂಕಿಗಾಹುತಿಯಾಗಿದ್ದು, ಏಕಾಏಕಿ ಧಗ-ಧಗ ಹೊತ್ತಿ ಉರಿದು ಭಸ್ಮವಾಗಿದೆ.


  ಪೊಲೀಸರು ರಸ್ತೆ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಿದ್ದರು. ಗಾಳಿಯ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್‌ ಮೇಲೆ ಬೆಂಕಿಯ ಕಿಡಿ ತಗುಲಿದ್ದು, ಪರಿಣಾಮ ಮೂರು ಬೈಕ್‌ಗಳು ಸುಟ್ಟು ಕರಕಲಾಗಿವೆ. ಅರಣ್ಯಕ್ಕೆ ಬಿದ್ದ ಬೆಂಕಿಯನ್ನ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಆದರೆ ಅವರು ಬರೋವಷ್ಟರಲ್ಲಿ ಬೈಕ್‌ಗಳು ಸುಟ್ಟು ಕರಕಲಾಗಿದೆ.


  ಇದನ್ನೂ ಓದಿ: Temperature: ಬೆಂಕಿಯುಂಡೆ ಉಗುಳಲು ಆರಂಭಿಸಿದ ಸೂರ್ಯ, ಫೆಬ್ರವರಿ ತಾಪಮಾನದಿಂದ ಅಧಿಕಾರಿಗಳಿಗೇ ಶಾಕ್!


  ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ!


  ಶಿವಮೊಗ್ಗ: ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದಲ್ಲಿ ನಡೆದಿದೆ.


  ಕಿಡಿಗೇಡಿಗಳು ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯದಿಂದ ದೇವಸ್ಥಾನದ ರಥಕ್ಕೆ ಬಹುಪಾಲು ಹಾನಿ ಉಂಟಾಗಿದೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ಅವರು ದೂರಿನಲ್ಲಿ ತಿಳಿಸಿದ್ದಾರೆ.

  Published by:Avinash K
  First published: