ಕಲಬುರಗಿ(ಮಾ.03): ಕ್ರೂಸರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಲಮಾಮಡಿ ಬಳಿ ನಡೆದಿದೆ.
ಶಾಮ್ರಾವ್(65) ಮತ್ತು ಮೋತಿಬಾಯಿ ಸ್ಥಳದಲ್ಲೇ ಮೃತಪಟ್ಟವರು. ಘಟನೆಯಲ್ಲಿ 10 ಮಂದಿಗೆ ಗಾಯವಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇನ್ನು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ