• Home
  • »
  • News
  • »
  • state
  • »
  • High Court ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದವರು ಅರೆಸ್ಟ್! ಬಂಧಿತರು ಯಾರು? ಎಲ್ಲಿಯವರು ಗೊತ್ತಾ?

High Court ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದವರು ಅರೆಸ್ಟ್! ಬಂಧಿತರು ಯಾರು? ಎಲ್ಲಿಯವರು ಗೊತ್ತಾ?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಹಿಜಾಬ್ ಕೇಸ್‌ನಲ್ಲಿ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಅಪರಿಚಿತರಿಬ್ಬರು ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಕೇಸ್ ಕೂಡ ದಾಖಲಾಗಿತ್ತು. ಇದೀಗ ಇದೇ ಕೇಸ್‌ನಲ್ಲಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಹಾಗಿದ್ರೆ ಬಂಧಿತ ಆ ಇಬ್ಬರು ಯಾರು? ಎಲ್ಲಿಯವರು? ಅವರು ಸಿಕ್ಕಿ ಬಿದ್ದಿದ್ದು ಹೇಗೆ? ಅವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ...

ಮುಂದೆ ಓದಿ ...
  • Share this:

ಹಿಜಾಬ್ ವಿವಾದದ (Hijab Controversy) ಕೇಸ್‌ನ (Case) ತೀರ್ಪು (Judgment) ನೀಡಿದ್ದ ಕರ್ನಾಟಕ ಹೈಕೋರ್ಟ್‌ನ (Karnataka High Court) ನ್ಯಾಯಮೂರ್ತಿಗಳಿಗೆ (Judges) ಅಪರಿಚಿತರು (Strangers) ಜೀವ ಬೆದರಿಕೆ (Life threatening) ಹಾಕಿದ್ದರು. ಇದೇ ದೇಶದೆಲ್ಲೆಡೆ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಅಪರಿಚಿತ ವ್ಯಕ್ತಿಗಳು ವಾಟ್ಸಾಫ್ ವೀಡಿಯೋದಲ್ಲಿ (WhatsApp Video) ನ್ಯಾಯಮೂರ್ತಿಗಳನ್ನ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು. ಈ ಕುರಿತು ವಕೀಲೆ ಸುಧಾಕಾಟ್ವ ಎಂಬವರು ಬೆಂಗಳೂರಿನ (Bengaluru) ವಿಧಾನಸೌಧ ಪೊಲೀಸ್ ಠಾಣೆಗೆ (Vidhana soudha Police Station) ದೂರು ನೀಡಿದ್ದರು. ಇತ್ತ ಇದನ್ನು ರಾಜ್ಯ ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿತ್ತು. ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಎದುರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ʼವೈʼ ಭದ್ರತೆಯನ್ನು ಶ್ರೇಣಿಯ (Y Category Security) ರಾಜ್ಯ ಸರ್ಕಾರ ನೀಡಿತ್ತು. ಇದೀಗ ಬೆದರಿಕೆ ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾಗಿದ್ರೆ ಬಂಧಿತ ಆ ಇಬ್ಬರು ಯಾರು? ಎಲ್ಲಿಯವರು? ಅವರು ಸಿಕ್ಕಿ ಬಿದ್ದಿದ್ದು ಹೇಗೆ? ಅವರ ಹಿನ್ನೆಲೆ ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ...


 ಹೈಕೋರ್ಟ್‌ ತೀರ್ಪಿನಲ್ಲಿ ಏನು ಹೇಳಲಾಗಿತ್ತು?


ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್‌ ಕುರಿತಂತೆ ಹೈಕೋರ್ಟ್ ತೀರ್ಪು ಪ್ರಕಟಿಸಿತ್ತು. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ  ಮಹತ್ವದ ತೀರ್ಪು ನೀಡಿತ್ತು. ಕುರಾನ್​​ನಲ್ಲಿ ಹಿಜಾಬ್ ಧರಿಸುವುದು ಕಡ್ಡಾಯಪಡಿಸಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠದ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿತ್ತು. ಹಿಜಾಬ್ ಬಗ್ಗೆ ಕುರಾನ್​​ನಲ್ಲಿ ಯಾವುದೇ ಪ್ರಸ್ತಾಪವಿಲ್ಲ ಅಂತ ಹೈಕೋರ್ಟ್ ಹೇಳಿತ್ತು. ಹಿಜಾಬ್ ಧರಿಸುವುದು ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಹೇಳಿ ತೀರ್ಪು ಪ್ರಕಟಿಸಿತ್ತು.


 ಯಾರಿಗೆ ಬಂದಿತ್ತು ಜೀವ ಬೆದರಿಕೆ?


 ಕಳೆದ ವಾರವಷ್ಟೇ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಖಾಜಿ ಜೈಬುನ್ನೆಸಾ ಮೊಹಿಯುದ್ದೀನ್ ಅವರನ್ನೊಳಗೊಂಡ ವಿಶೇಷ ಪೀಠ ಹಿಜಾಬ್ ವಿವಾದ ಕುರಿತಂತೆ ತೀರ್ಪು ನೀಡಿದ್ದರು. ಇದೇ ಕಾರಣಕ್ಕೆ ಅಪರಿಚಿತರು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದರು.


ಇದನ್ನೂ ಓದಿ: Hijab Row: ಹಿಜಾಬ್ ವಿವಾದದ ಬಗ್ಗೆ ಇಂದು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ/ ಮೆನ್ಷನಿಂಗ್ ಸಾಧ್ಯತೆ


 ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಅಪರಿಚಿತರು


 ಅಪರಿಚಿತರು ವಾಟ್ಸಾಪ್ ವಿಡಿಯೋದಲ್ಲಿ ತಮಿಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದರು. ಸುಮಾರು 4 ನಿಮಿಷ ಇರೋ ಒಂದು ವಿಡಿಯೋವನ್ನು ವಾಟ್ಸಪ್ ಗೆ ಕಳುಹಿಸಿದ್ದು, ಅದು ತಮಿಳು ಭಾಷೆಯಲ್ಲಿತ್ತು. ಆ ವಿಡಿಯೋದಲ್ಲಿ ಹಿಜಾಬ್  ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದರು.


 ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು


ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಕುರಿತಂತೆ ವಕೀಲೆ ಸುಧಾಕಾಟ್ವ ಎಂಬವರು ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್‌ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್‌ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‌ಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು.


ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್


ಈ ಬಗ್ಗೆ ದೂರು ಪಡೆದ ಪೊಲೀಸರು, ತಮಿಳುನಾಡಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂದಿತರನ್ನು ಕೋವೈ ರಹಮತುಲ್ಲಾ ಹಾಗೂ ಎಸ್. ದಮಾಲ್ ಮೊಹಮ್ಮದ್ ಉಸ್ಮಾನಿ ಎಂಬುವರನ್ನು ಬಂಧಿಸಲಾಗಿದೆ. ಕೋವೈ ರಹಮತುಲ್ಲಾನನ್ನು ತಿರುನಲ್ವೇಲಿಯಿಂದ ಬಂಧಿಸಿದರೆ, ಎಸ್. ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ತಂಜಾವೂರಿನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: Hijab ವಿವಾದದ ನಡುವೆ ಹೀಗೊಂದು Friendship Story, ಹಿಂದೂ ಗೆಳೆಯನಿಗೆ ಕಿಡ್ನಿ ಕೊಡಲು ಮುಂದಾದ ಮುಸ್ಲಿಂ ವ್ಯಕ್ತಿ!


ಬಂಧಿತ ಆರೋಪಿಗಳ ಹಿನ್ನೆಲೆ ಏನು?


ಇಬ್ಬರೂ ಆರೋಪಿಗಳು ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ) ಸದಸ್ಯರಾಗಿದ್ದಾರೆ. ಇದೀಗ ಬಂಧಿತರ ವಿಚಾರಣೆ ನಡೆಯುತ್ತಿದೆ.

Published by:Annappa Achari
First published: