ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಟಿಪ್ಪರ್​​ಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರು ಸ್ಥಳದಲ್ಲೇ ಸಾವು

ಮೃತರನ್ನ  ಮೋಹನ್ (35 ವರ್ಷ) ಹಾಗೂ ಕುಮಾರ್ (25 ವರ್ಷ) ಎಂದು ಗುರುತಿಸಲಾಗಿದ್ದು, ಇಬ್ಬರೂ ಕೂಡ ಶಿವಮೊಗ್ಗದ ನವಿಲೆ ಗ್ರಾಮದವರಾಗಿದ್ದಾರೆ. ಶಿವಮೊಗ್ಗದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಸಂಬಂಧಿಕರನ್ನು ಆಹ್ವಾನಿಸಲು ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

news18-kannada
Updated:February 24, 2020, 11:16 PM IST
ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಟಿಪ್ಪರ್​​ಗೆ ಡಿಕ್ಕಿ ಹೊಡೆದ ಬೈಕ್ : ಸವಾರರಿಬ್ಬರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
  • Share this:
ಚಿಕ್ಕಮಗಳೂರು(ಫೆ.24) : ಪೊಲೀಸರ ಲಾಠಿಯಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಎದುರಿಗೆ ಬರುತ್ತಿದ್ದ ಟಿಪ್ಪರ್​​ಗೆಬೈಕ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಬಳಿ ನಡೆದಿದೆ.

ಮೃತರನ್ನ  ಮೋಹನ್ (35 ವರ್ಷ) ಹಾಗೂ ಕುಮಾರ್ (25 ವರ್ಷ) ಎಂದು ಗುರುತಿಸಲಾಗಿದ್ದು, ಇಬ್ಬರೂ ಕೂಡ ಶಿವಮೊಗ್ಗದ ನವಿಲೆ ಗ್ರಾಮದವರಾಗಿದ್ದಾರೆ. ಶಿವಮೊಗ್ಗದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಸಂಬಂಧಿಕರನ್ನು ಆಹ್ವಾನಿಸಲು ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಬೈಕ್​​ನಲ್ಲಿ ಲಕ್ಕವಳ್ಳಿಗೆ ಬರುತ್ತಿದ್ದ ಯುವಕರು ತಲೆಗೆ ಹೆಲ್ಮೆಟ್ ಹಾಕಿರಲಿಲ್ಲ. ಲಕ್ಕವಳ್ಳಿಯ ಭದ್ರಾ ಜಲಾಶಯದ ಬಳಿ ಪೊಲೀಸರು ಗಾಡಿಗಳನ್ನ ತಪಾಸಣೆ ಮಾಡುತ್ತಿದರು. ಆಗ, ಪೊಲೀಸರ ಜೊತೆ ಇದ್ದ ಹೋಮ್ ಗಾರ್ಡ್ ಬೈಕ್ ನಿಲ್ಲಿಸುವಂತೆ ಇವರ ಮೇಲೆ ಲಾಠಿ ಬೀಸಿದ್ದಾರೆ. ಲಾಠಿಯಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಮುನ್ನುಗ್ಗಿದಾಗ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಅಲ್ಲದೆ ಈ ಘಟನೆಗೆ ಸಾಕ್ಷಿಯಾದ ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೃತದೇಹ ತೆಗೆಯದಂತೆ ಘಟನೆ ನಡೆದ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಿಂದ ನೂರಕ್ಕೂ ಹೆಚ್ಚು ಜನರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲದೆ, ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಬರುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸರ್ಕಾರದ ಭರವಸೆ ಹಿನ್ನೆಲೆ ಷರತ್ತಿನ ಮೇಲೆ ಧರಣಿ ಕೈಬಿಟ್ಟ ಕೊಪ್ಪ ಸಹಕಾರ ಸಾರಿಗೆ ನೌಕರರು

ಸುಮಾರು ಒಂದು ಗಂಟೆಗಳ ಕಾಲ ಮೃತದೇಹವನ್ನು ಮಹಜರ್​ ಮಾಡಲು ಬಿಡದೇ ಆಕ್ರೋಶ ಹೊರಹಾಕಿದ್ದಾರೆ. ಜನ ಜಾಸ್ತಿಯಾಗಿ ಟ್ರಾಫಿಕ್ ಜಾಮ್ ಆದ ಪರಿಣಾಮ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಪ್ರತಿಭಟನಾನಿರತರನ್ನು ಚದುರಿಸಿದ್ದಾರೆ. ಲಕ್ಕವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
First published: February 24, 2020, 11:15 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading