ಹಾವೇರಿ: ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಶೇ.61 ಬಂದ್ರೂ ಕಡಿಮೆ ಅಂಕ ಎಂದು ಆತ್ಮಹತ್ಯೆ

ಕೊರೋನಾ ಮಹಾಮಾರಿಯಿಂದಾಗಿ ಹಲವಾರು ಸವಾಲುಗಳನ್ನು ಎದುರಿಸಿ ಸರ್ಕಾರ ಯಶಸ್ವಿಯಾಗಿ ಈ ಬಾರಿ ಎಸ್​​ಎಸ್​ಎಲ್​​ಸಿ ಪರೀಕ್ಷೆಯನ್ನು ನಡೆಸಿತ್ತು. ಅಂತೆಯೇ ನಿನ್ನೆ ಪರೀಕ್ಷೆ ಫಲಿತಾಂಶ ಸಹ ಪ್ರಕಟಿಸಿತು. ಈಗ ಫಲಿತಾಂಶ ಬಂದ ಬೆನ್ನಲ್ಲೇ ಕಡಿಮೆ ಬಂತು, ಫೇಲ್​ ಆಗಿದ್ದೇವೆ ಎಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹಾವೇರಿ(ಆ.11): ಎಸ್​​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಅಣುತ್ತೀರ್ಣರಾದ ಮತ್ತು ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಕೊರೋನಾ ಮಹಾಮಾರಿಯಿಂದಾಗಿ ಹಲವಾರು ಸವಾಲುಗಳನ್ನು ಎದುರಿಸಿ ಸರ್ಕಾರ ಯಶಸ್ವಿಯಾಗಿ ಈ ಬಾರಿ ಎಸ್​​ಎಸ್​ಎಲ್​​ಸಿ ಪರೀಕ್ಷೆಯನ್ನು ನಡೆಸಿತ್ತು. ಅಂತೆಯೇ ನಿನ್ನೆ ಪರೀಕ್ಷೆ ಫಲಿತಾಂಶ ಸಹ ಪ್ರಕಟಿಸಿತು. ಈಗ ಫಲಿತಾಂಶ ಬಂದ ಬೆನ್ನಲ್ಲೇ ಕಡಿಮೆ ಬಂತು, ಫೇಲ್​ ಆಗಿದ್ದೇವೆ ಎಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಸ್​​ಎಸ್​​ಎಲ್​​ಸಿ ಪರೀಕ್ಷೆ ಫಲಿತಾಂಶ ಏನೇ ಬಂದರು ಅದನ್ನು ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಹೆಚ್ಚಿಸಲು ಶಿಕ್ಷಕರು, ಪೋಷಕರು, ಸ್ನೇಹಿತರು ಸಾಕಷ್ಟು ಕೆಲಸ ಮಾಡಿದ್ದರು. ಹಲವಾರು ಜನ ಸಾಮಾಜಿಕ ಜಾಲತಾಣಗಳ ಮೂಲಕ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಪ್ರಯತ್ನಪಟ್ಟರು. ಹೀಗಿದ್ದರೂ ಸಹ ಹಾವೇರಿ ಜಿಲ್ಲೆಯಲ್ಲಿ ಇಬ್ಬರು ವಿಧ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದು ಬೇಸರದ ಸಂಗತಿ.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಬಂದರೂ ಅಪ್ಪನ ಅಕಾಲಿಕ ಸಾವಿನ ಸಂಕಟ; ವಿಜಯಪುರ ವಿದ್ಯಾರ್ಥಿನಿಯ ತೊಳಲಾಟ

ಪರೀಕ್ಷೆಯಲ್ಲಿ ಫೇಲಾದ ಕಾರಣ ಹಾವೇರಿಯ ದ್ಯಾಮವ್ವನ ಗುಡಿ ಓಣಿಯಲ್ಲಿ ವೈಷ್ಣವಿ ರಿತ್ತಿ (16) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಗಣಿತ ವಿಷಯದಲ್ಲಿ ಫೇಲ್​ ಆಗಿದ್ದಳು. ಇದರಿಂದ ಮನನೊಂದ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಕೂಡಲೇ ಬಾಲಕಿ ಒದ್ದಾಟವನ್ನು ಗಮನಿಸಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ಇನ್ನೊಂದೆಡೆ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿವೆ ಎಂದು ಭಾರತಿ ‌‌ಕೋಟಿ (16) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಶಂಬಿ ಗ್ರಾಮದಲ್ಲಿ ನಡೆದಿದೆ. ಕಾಗಿನೆಲೆಯ ಖಾಸಗಿ ಶಾಲೆಯಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಶೇ.61ರಷ್ಟು ಅಂಕಗಳು ಬಂದಿದ್ದವು. ಆದರೂ ಸಹಾ ಕಡಿಮೆ ಅಂಕಗಳು ಬಂದಿವೆ ಎಂದು ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Published by:Ganesh Nachikethu
First published: