ಬೆಳಗಾವಿ: ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಷುಲಕ ಕಾರಣಕ್ಕೆ ನಡೆದ ಜಗಳದಲ್ಲಿ ಇಬ್ಬರು ಯುವಕರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರದ ಹೊರ ವಲಯದಲ್ಲಿ ನಡೆದಿದ್ದು, ಡಬಲ್ ಮರ್ಡರ್ ಕಂಡು ಬೆಳಗಾವಿ ಜನರು ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ನಗರದ ಹೊರವಲಯದ ಶಿಂದೊಳ್ಳಿ ಗ್ರಾಮದ ಬಳಿ ಡಬಲ್ ಮರ್ಡರ್ ನಡೆದಿದ್ದು, ಬಸವರಾಜ್ ಬೆಳಗಾಂವ್ಕರ್ (22), ಗಿರೀಶ ನಾಗಣ್ಣವರ (22) ಹತ್ಯೆ ದುರ್ದೈವಿಗಳಾಗಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ವೇಳೆ ಕೃತ್ಯ
ಭಾನುವಾರ ರಾತ್ರಿ ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯ ವಾಹನ ಎಂಟ್ರಿ ಕೊಟ್ಟಿತಂತೆ. ಇದರಿಂದ ಯುವಕರು ವಾಹನವನ್ನು ಮೈದಾನಕ್ಕೆ ನುಗ್ಗಿಸಿದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯುವಕರು ಆಕ್ಷೇಪ ವ್ಯಕ್ತಪಡಿಸುತ್ತಿದಂತೆ ವಾಹನದಲ್ಲಿ ಬಂದಿದ್ದ ವ್ಯಕ್ತಿ ಸಿಟ್ಟಿನಿಂದ ವಾಹನದಿಂದ ಕೆಳಗಿಳಿದು ಚಾಕುವಿನಿಂದ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದನಂತೆ.
ಇದನ್ನೂ ಓದಿ: Double Murder: ಜೊತೆಯಲ್ಲಿ ಚಿಕನ್ ತಿಂದ, ಜೊತೆಯಲ್ಲೇ ಮಲಗಿದ್ದ; ಮಧ್ಯರಾತ್ರಿ ಅಣ್ಣ-ತಮ್ಮನ ಹೆಣ ಕೆಡವಿದ!
ಸ್ಥಳದಲ್ಲಿ ಬಿಗುವಿನ ವಾತಾವರಣ
ಇನ್ನು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದು, ಆದರೆ ಆ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಸದ್ಯ ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದು, ಯುವಕರ ಕೊಲೆ ಕಾರಣ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಬರಮನಿ ಭೇಟಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಮೃತ ಯುವಕರ ಮೇಲೆ ಅಪರಿಚಿತರು ಹೊಡೆದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರಂತೆ. ಘಟನೆಯಲ್ಲಿ ಬಸವರಾಜ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಿರೀಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದನಂತೆ. ಮೃತರು ಕ್ರಿಕೆಟ್ ಆಡಿದ ಬಳಿಕ ವಾಪಸ್ ಹೊರಡುತ್ತಿದ್ದ ವೇಳೆ ಹಲ್ಲೆಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಪೊಲೀಸ್ ತನಿಖೆಯಲ್ಲಿ ಸತ್ಯಾಂಶ ಬೆಳಕಿಗೆ ಬರಬೇಕಿದೆ.
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸಾವು
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Bike Accident) ಮೂವರು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕುರಿಗಾಹಿಗಳು ಹಾಗೂ ತರಕಾರಿ ವ್ಯಾಪಾರಿ ಸಾವನ್ನಪ್ಪಿದ್ದಾರೆ. ಮೃತ ಕುರಿಗಾಯಿಗಳನ್ನು ಕೋಟೆಗುಡ್ಡದ ಗ್ರಾಮದ ಬಾಲಪ್ಪ ( 55), ಜಟ್ಟೆಪ್ಪ ( 60 ) ಹಾಗೂ ವ್ಯಾಪಾರಿಯನ್ನು ಕೊಡೇಕಲ್ ಗ್ರಾಮದ ಪರಸಪ್ಪ ( 45) ಎಂದು ಗುರುತಿಸಲಾಗಿದೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Bengaluru: 19ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ; ಛಿದ್ರ ಛಿದ್ರ ಆಯ್ತು ದೇಹ
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಗಣಿ ದುರಂತ
ಬಿಳಿಕಲ್ಲು ಗಣಿ ಕುಸಿದು (Stone Quarry) ಇಬ್ಬರು ಕಾರ್ಮಿಕರು (Workers) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಬಿಸಲವಾಡಿಯಲ್ಲಿ ನಡೆದಿದೆ. ಕುಮಾರ್, ಶಿವರಾಜು ಮೃತ ಕಾರ್ಮಿಕರಾಗಿದ್ದಾರೆ. ಘಟನೆಯಲ್ಲಿ ಸಿದ್ದರಾಜು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿಯಲ್ಲಿ ಕುಳಿ ಹೊಡೆಯಬೇಕಾದರೆ ದುರಂತ ಸಂಭವಿಸಿದ್ದು, ಮೇಲಿನಿಂದ ಏಕಾಏಕಿ ಬಂಡೆ ಉರುಳಿ ದುರಂತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ