• Home
  • »
  • News
  • »
  • state
  • »
  • Border Dispute: ಬೆಳಗಾವಿ, ಕಾರವಾರ, ನಿಪ್ಪಾಣಿ ಕೇಂದ್ರಾಡಳಿತ ಪ್ರದೇಶವಾಗಲಿ! ಉದ್ಧವ್ ಠಾಕ್ರೆ ಉದ್ಧಟತನದ ಹೇಳಿಕೆ

Border Dispute: ಬೆಳಗಾವಿ, ಕಾರವಾರ, ನಿಪ್ಪಾಣಿ ಕೇಂದ್ರಾಡಳಿತ ಪ್ರದೇಶವಾಗಲಿ! ಉದ್ಧವ್ ಠಾಕ್ರೆ ಉದ್ಧಟತನದ ಹೇಳಿಕೆ

ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ

ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರ ನಗರವನ್ನು ಕೇಂದ್ರಾಡಳಿತ ಪ್ರದೇಶ (Union Territories) ಅಂತ ಘೋಷಿಸುವಂತೆ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮುಂದೆ ಓದಿ ...
  • News18 Kannada
  • 4-MIN READ
  • Last Updated :
  • Mumbai, India
  • Share this:

ಮುಂಬೈ: ಬೆಳಗಾವಿ ಗಡಿ ವಿಚಾರದಲ್ಲಿ (Belagavi border issue) ಕರ್ನಾಟಕದ (Karnataka) ಜೊತೆ ಕಿರಿಕ್ ಮುಂದುವರೆಸಿರುವ ಮಹಾರಾಷ್ಟ್ರ (Maharashtra) ಈಗ ಮತ್ತೊಂದು ಹೊಸ ವರಸೆ ಶುರು ಮಾಡಿದೆ. ಬೆಳಗಾವಿ (Belagavi), ನಿಪ್ಪಾಣಿ (Nippani) ಹಾಗೂ ಕಾರವಾರ ನಗರವನ್ನು (Karwar City) ಕೇಂದ್ರಾಡಳಿತ ಪ್ರದೇಶ (Union Territories) ಅಂತ ಘೋಷಿಸುವಂತೆ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು (Supreme Court Judgment) ಬರುವವರೆಗೂ ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆಕ್ರಮಣಕಾರಿ ಹೇಳಿಕೆ ನೀಡುತ್ತಿದ್ದರೆ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮೌನವಾಗಿದ್ದಾರೆ ಅಂತ ಟೀಕಿಸಿದ್ದಾರೆ.


“ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶವಾಗಲಿ”


ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಸ್ತಾಪಿಸಿದ್ರು. ಗಡಿ ಪ್ರದೇಶದಲ್ಲಿ ಮರಾಠಿ ಮಾತನಾಡುವ ಜನರ ಸಮಸ್ಯೆಯನ್ನು ಪ್ರಸ್ತಾಪಿಸಿದರು. ವಿವಾದ ಬಗೆಹರಿಯುವವರೆಗೆ ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.


“ಬಸವರಾಜ ಬೊಮ್ಮಾಯಿ ಆಕ್ರಮಣಕಾರಿ, ಏಕನಾಥ್ ಶಿಂಧೆ ಮೌನಿ”


ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಡಿ ವಿವಾದದಲ್ಲಿ ಆಕ್ರಮಣಕಾರಿಯಾಗಿದ್ದಾರೆ ಅಂತ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ಅದೇ ಸಮಯದಲ್ಲಿ ಇತ್ತ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮೌನವಾಗಿದ್ದಾರೆ ಎಂದು ಟೀಕಿಸಿದರು.


ಇದನ್ನೂ ಓದಿ: Belagavi: ಮಾರುವೇಷದಲ್ಲಿ ಗಡಿ ಪ್ರವೇಶಕ್ಕೆ ಮುಂದಾದ ಮರಾಠಿ ಪುಂಡ ನಾಯಕ


“ವಿಧಾನಸಭೆಯಲ್ಲಿ ಪ್ರಸ್ತಾವನೆ ಅಂಗೀಕರಿಸಿ”


ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ತೀರ್ಮಾನಿಸುವವರೆಗೆ, ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಅಂತ ಉದ್ಧವ್ ಠಾಕ್ರೆ ಆಗ್ರಹಿಸಿದ್ರು. ಇದನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕರಿಸುವ ಪ್ರಸ್ತಾವನೆಯಲ್ಲಿ ಸೇರಿಸಬೇಕು" ಎಂದು ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


“ನಾಳೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ”


ಇನ್ನು ಉದ್ಧವ್ ಠಾಕ್ರೆ ಮಾತಿಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕ ಗಡಿ ವಿವಾದದ ನಿರ್ಣಯವನ್ನು ಮಂಗಳವಾರ ಅಂದರೆ ನಾಳೆ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಭರವಸೆ ನೀಡಿದ್ರು. "ಯಾವುದೇ ಪರಿಸ್ಥಿತಿಯಲ್ಲಿ, ನಾವು ಗಡಿ ಪ್ರದೇಶಗಳಲ್ಲಿ ವಾಸಿಸುವ ನಮ್ಮ ಜನರನ್ನು ಒಂಟಿಯಾಗಿ ಬಿಡುವುದಿಲ್ಲ. ನಾವು ಪ್ರತಿ ಇಂಚು ಭೂಮಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡುತ್ತೇವೆ ಅಥವಾ  ನಾವೇ ಖುದ್ದಾಗಿ ಹೋರಾಡುತ್ತೇವೆ ಎಂದಿದ್ದಾರೆ. ಗಡಿಯಲ್ಲಿ ವಾಸಿಸುವ ಮರಾಠಿ ಭಾಷಿಕರಿಗೆ ಅನ್ಯಾಯವಾದರೆ ಅದರ ವಿರುದ್ಧ ನಾವು ಹೋರಾಡುತ್ತೇವೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಮಹಾರಾಷ್ಟ್ರವು ತನ್ನ ಪಟ್ಟುಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: Border Issue: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಈ 5 ಅಂಶಗಳು ನಿಮಗೆ ಗೊತ್ತಿರಲಿ


ಮಾರುವೇಷದಲ್ಲಿ ಗಡಿ ಪ್ರವೇಶಕ್ಕೆ ಮುಂದಾದ ಮರಾಠಿ ಪುಂಡ ನಾಯಕ


ಜನ ಸಾಮಾನ್ಯರಂತೆ ಗೂಡ್ಸ್​​ ವಾಹನದಲ್ಲಿ ಪ್ರಯಾಣಿಸುವ ಮೂಲಕ ಬೆಳಗಾವಿ ಗಡಿಗೆ ನುಗ್ಗಲು ಕೊಲ್ಲಾಪುರ ಶಿವಸೇನೆ ಅಧ್ಯಕ್ಷ ವಿಜಯ್ ದೇವನೆ ಪ್ರಯತ್ನ ವಿಫಲ ಯತ್ನ ನಡೆಸಿದ್ದನು. ಉದ್ಧವ್ ಠಾಕ್ರೆ ಬಣದ ಶಿವಸೇನೆ ಪುಂಡ ನಾಯಕನನನ್ನು ಬೆಳಗಾವಿ ಜಿಲ್ಲೆಯ ಗಡಿ ಭಾಗ ನಿಪ್ಪಾಣಿ ಬಳಿಯ ಕೋಗನೋಳಿ ಚೆಕ್ ಪೋಸ್ಟ್ ಬಳಿ ತಡೆಯಲಾಗಿದೆ. ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವಗೆ ಬ್ರೇಕ್ ಹಿನ್ನಲೆ ಇಂದು ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ವಿಜಯ ದೇವನೆ ಪ್ರಯತ್ನಿಸಿದ್ದನು. ನಿಪ್ಪಾಣಿ ಪೊಲೀಸರು ವಿಜಯ ದೇವನೆ ತಡೆದು ವಾಪಸ್ ಕಳಿಸಿದ್ದಾರೆ.

Published by:Annappa Achari
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು