HOME » NEWS » State » UDUPI NEWS SIDDARAMAIAH TWEETS ON UDUPI SWARNA RIVER ILLEGAL SAND MINING MAFIA SCT

ಉಡುಪಿ ಸ್ವರ್ಣಾ ನದಿ ಅಕ್ರಮ ಮರಳುಗಾರಿಕೆಯ ನಿಷ್ಪಕ್ಷಪಾತ ತನಿಖೆಯಾಗಲಿ; ಸಿದ್ದರಾಮಯ್ಯ ಆಗ್ರಹ

ಸ್ವರ್ಣಾ ನದಿಯಲ್ಲಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆಯೊಡ್ಡಲಾಗಿದೆ. ಅವರಿಗೆ ತಕ್ಷಣ ಪೊಲೀಸ್ ಭದ್ರತೆಯನ್ನು ಒದಗಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Sushma Chakre | news18-kannada
Updated:May 18, 2020, 5:24 PM IST
ಉಡುಪಿ ಸ್ವರ್ಣಾ ನದಿ ಅಕ್ರಮ ಮರಳುಗಾರಿಕೆಯ ನಿಷ್ಪಕ್ಷಪಾತ ತನಿಖೆಯಾಗಲಿ; ಸಿದ್ದರಾಮಯ್ಯ ಆಗ್ರಹ
ಮಾಜಿ ಸಿಎಂ ಸಿದ್ದರಾಮಯ್ಯ.
  • Share this:
ಉಡುಪಿ (ಮೇ 18): ಉಡುಪಿ ಜಿಲ್ಲೆಯ ಸ್ವರ್ಣಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಆಡಳಿತ ಪಕ್ಷದ ನಾಯಕರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಉಡುಪಿಯ ಸ್ವರ್ಣಾ ನದಿಯಲ್ಲಿ ಅಕ್ರಮವಾಗಿ ಮರುಳುಗಾರಿಕೆ ನಡೆಸಲು ಉಡುಪಿ ನಗರಸಭೆ ಅನುಮತಿ ನೀಡಿದೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಆರೋಪಿಸಿದ್ದರು. ಅಲ್ಲದೆ, ನಾನು ಸಚಿವನಾಗಿದ್ದಾಗ ಉಡುಪಿಗೆ ಉತ್ತಮ ನೀರು ಸಂಗ್ರಹಿಸಲು ಸ್ವರ್ಣಾ ನದಿಯ ಯಾಂತ್ರಿಕೃತ ಹೂಳೆತ್ತಲು ಅವಕಾಶ ನೀಡು ವಂತೆ ಪರಿಸರ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಕಳುಹಿಸಲು ಅಂದಿನ ಜಿಲ್ಲಾಧಿಕಾರಿ ಪ್ರಿಯಾಂಕಾ ಅವರನ್ನು ಕೇಳಿದ್ದೆ. ಸ್ವರ್ಣಾ ನದಿಯ ನೀರನ್ನು ಇನ್ನೂ ಉತ್ತಮವಾಗಿ ಸಂಗ್ರಹಿಸಿಟ್ಟುಕೊಳ್ಳುವ ಕಾರಣಕ್ಕಾಗಿ ಸರ್ಕಾರ ಹೂಳೆತ್ತಲು ಅವಕಾಶ ಕೊಟ್ಟ ನಂತರ ರಾಜಕೀಯವಾಗಿ ಸಂಪರ್ಕ ಹೊಂದಿದ ವ್ಯಕ್ತಿಗಳಿಗೆ ಉಡುಪಿ ನಗರಸಭೆ ಹೂಳೆತ್ತಲು ಅನುಮತಿ ನೀಡಿತ್ತು. ಈ ಮೂಲಕ ಸಂಗ್ರಹಿಸಿದ ಮರಳನ್ನು ಮಾರಾಟ ಮಾಡುವ ಹಕ್ಕುಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿತ್ತು. ಆದರೆ ಈಗ ಮರಳು ಕಳ್ಳಸಾಗಣೆ ನಡೆಯುತ್ತಿದ್ದು, ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕು. ಅವರ ಕುಮ್ಮಕ್ಕು ಇಲ್ಲದೆ ಈ ಅಕ್ರಮ ನಡೆಯಲು ಸಾಧ್ಯವಿಲ್ಲ ಎಂದು ಪ್ರಮೋದ್‌ ಮಧ್ವರಾಜ್ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: Bangalore Coronavirus: ಸೂಪರ್ ಸ್ಪ್ರೆಡರ್ ಹಾವಳಿಗೆ ಬೆಚ್ಚಿಬಿದ್ದ ಬೆಂಗಳೂರಿನ ಶಿವಾಜಿನಗರಈ ಕುರಿತು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಉಡುಪಿ ಸ್ವರ್ಣಾ ನದಿಯಲ್ಲಿ ಮರಳು ಕಳ್ಳ ಸಾಗಾಣಿಕೆ ನಡೆಯುತ್ತಿದೆ ಮತ್ತು ಇದರಲ್ಲಿ ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನು ನಡೆಸಿ, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಸ್ವರ್ಣಾ ನದಿಯಲ್ಲಿ ಮರಳು ಕಳ್ಳಸಾಗಾಣಿಕೆ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆಯೊಡ್ಡಲಾಗಿದೆ. ಅವರಿಗೆ ತಕ್ಷಣ ಪೊಲೀಸ್ ಭದ್ರತೆಯನ್ನು ಒದಗಿಸಬೇಕು. ಆ ವ್ಯಕ್ತಿಗೆ ಜೀವಭಯವನ್ನು ಒಡ್ಡುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
First published: May 18, 2020, 5:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories