HOME » NEWS » State » UNION HOME MINISTER AMIT SHAH TODAY VISIT BENGALURU RH

ಇಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ; ಸಚಿವ ಸಂಪುಟ ವಿಸ್ತರಣೆಗೆ ತೋರಲಿದ್ದಾರಾ ಹಸಿರು ನಿಶಾನೆ?

ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

HR Ramesh | news18-kannada
Updated:January 18, 2020, 7:31 AM IST
ಇಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ; ಸಚಿವ ಸಂಪುಟ ವಿಸ್ತರಣೆಗೆ ತೋರಲಿದ್ದಾರಾ ಹಸಿರು ನಿಶಾನೆ?
ಅಮಿತ್ ಶಾ
  • Share this:
ಬೆಂಗಳೂರು(ಜ.18): ದೇಶಾದ್ಯಾಂತ ಪ್ರತಿಭಟನೆಗೆ ಕಾರಣವಾಗಿರುವ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. 

ಇಂದು ಮಧ್ಯಾಹ್ನ 12.15ಕ್ಕೆ ಎಚ್ ಎಎಲ್ ವಿಮಾನ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಬಂದಿಳಿಯಲಿದ್ದಾರೆ. ನಂತರ ಬೆಂಗಳೂರಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಪೌರತ್ವ ಕಾಯ್ದೆ ಕುರಿತಾದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ದೆಹಲಿಗೆ ಹೋಗುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್​​ ಶಾರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಹೇಗಿದ್ದರೂ ಜನವರಿ 18ನೇ ತಾರೀಕು ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಬಂದಾಗಲೇ ಭೇಟಿ ಮಾಡಿ ಚರ್ಚಿಸಿ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದೆಹಲಿ ವಿಧಾನಸಭೆ ಚುನಾವಣೆ; 57 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಬಿಜೆಪಿ

ಸಂಪುಟ ವಿಸ್ತರಣೆಗೆ ಸಿಗಲಿದೆಯಾ ಗ್ರೀನ್ ಸಿಗ್ನಲ್?

ಉಪಚುನಾವಣೆ ಫಲಿತಾಂಶ ಪ್ರಕಟಗೊಂಡು ತಿಂಗಳಾಗುತ್ತಾ ಬಂದರೂ ಸಂಪುಟ ವಿಸ್ತರಣೆ ಇನ್ನೂ ಸಾಧ್ಯವಾಗಿಲ್ಲ. ಸಂಪುಟ ವಿಸ್ತರಣೆಗೆ ಸಿಎಂ ಆತುರ ಮಾಡುತ್ತಿದ್ದರೂ ಹೈಕಮಾಂಡ್ ಮಾತ್ರ ತಡ ಮಾಡುತ್ತಿದೆ. ಇದೇ ವಿಚಾರವಾಗಿ ಬಿಎಸ್​ವೈ ಅವರು ದೆಹಲಿಗೆ ತೆರಳಲು ಹಲವು ಬಾರಿ ಮುಂದಾದರೂ ಹೈಕಮಾಂಡ್​ ನಾಯಕರ ಭೇಟಿಗೆ ಅನುಮತಿ ಸಿಗದ ಕಾರಣ, ದೆಹಲಿ ಪ್ರವಾಸ ರದ್ದು ಮಾಡಿದ್ದರು. ಇದೀಗ ಇಂದು ಅಮಿತ್ ಶಾ ಅವರೇ ರಾಜ್ಯಕ್ಕೆ ಬರುತ್ತಿದ್ದು, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ಇದೇ ವೇಳೆ ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀಸ್ ಸಿಗ್ನಲ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
First published: January 18, 2020, 7:31 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories