ನಾಳೆ ರಾಜ್ಯಕ್ಕೆ ಅಮಿತ್​​ ಶಾ: ಬಿಜೆಪಿ ನಾಯಕರೊಂದಿಗೆ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ

ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

news18
Updated:January 17, 2020, 9:26 AM IST
ನಾಳೆ ರಾಜ್ಯಕ್ಕೆ ಅಮಿತ್​​ ಶಾ: ಬಿಜೆಪಿ ನಾಯಕರೊಂದಿಗೆ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ
ಅಮಿತ್ ಶಾ
  • News18
  • Last Updated: January 17, 2020, 9:26 AM IST
  • Share this:
ಬೆಂಗಳೂರು(ಜ.17): ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇದೆ. ಈಗಾಗಲೇ ಬಿಜೆಪಿ ನೂತನ ಶಾಸಕರು ಬಿ.ಎಸ್​​ ಯಡಿಯೂರಪ್ಪರನ್ನು ಭೇಟಿ ಮಾಡಿ ಈ ಕುರಿತಂತೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಫೆಬ್ರವರಿ 17ನೇ ತಾರೀಕಿನಂದು ವಿಧಾನಸಭಾ ಜಂಟಿ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಬೇಕೆಂದು ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಬಿಜೆಪಿ ನೂತನ ಶಾಸಕರು ಒತ್ತಡ ಹಾಕಿದ್ದಾರೆ. ಇದೀಗ ನಾಳೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್​​​ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ. ಪ್ರಮುಖವಾಗಿ ನಾಳೆ ಅಮಿತ್​​ ಶಾ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿವಾದ ಮತ್ತಲವು ವಿಚಾರಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ ಎನ್ನುತ್ತಿವೆ ಮೂಲಗಳು.

ನಾಳೆ ಮಧ್ಯಾಹ್ನ 12.15ಕ್ಕೆ ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ ನೇರ ತೆರಳಿ ಬೆಂಗಳೂರಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ಪೌರತ್ವ ಕಾಯ್ದೆ ಕುರಿತಾದ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಶನಿವಾರ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ಕೇರಳ ಸರ್ಕಾರದ ‘ಬೀಫ್’ ಟ್ವೀಟ್​​​ ರೀಟ್ವೀಟ್ ಮಾಡಿ ಸಚಿವ ಸಿ.ಟಿ ರವಿ ಎಡವಟ್ಟು: ನೆಟ್ಟಿಗರಿಂದ ತೀವ್ರ ತರಾಟೆ

ಈಗಾಗಲೇ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ದೆಹಲಿಗೆ ಹೋಗುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್​​ ಶಾರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಹೇಗಿದ್ದರೂ ಜನವರಿ 18ನೇ ತಾರೀಕು ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಬಂದಾಗಲೇ ಭೇಟಿ ಮಾಡಿ ಚರ್ಚಿಸಿ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈಗಾಗಲೇ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ದೆಹಲಿಗೆ ಹೋಗುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್​​ ಶಾರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಹೇಗಿದ್ದರೂ ಜನವರಿ 18ನೇ ತಾರೀಕು ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಬಂದಾಗಲೇ ಭೇಟಿ ಮಾಡಿ ಚರ್ಚಿಸಿ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.
First published:January 17, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ