ಸಿಎಎ ಪೌರತ್ವ ಕೊಡುವ ಕಾನೂನು, ಕಿತ್ತುಕೊಳ್ಳುವ ಕಾನೂನು ಅಲ್ಲ; ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಯು ಟಿ ಖಾದರ್ ಬಿಲ್ ಬಂದ ನಂತರ ನಿಮಗೆ ಏನಾದರೂ ತೊಂದರೆಯಾಗಿದೆಯಾ? ನಿಮ್ಮ ಉದ್ದೇಶ ಏನು ಎಂಬುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ನವರು ಸೋಲಿನಿಂದ ಕಂಗೆಟ್ಟಿದ್ದಾರೆ. ಮೋದಿಯವರನ್ನು ವಿರೋಧಿಸುತ್ತಾ, ದೇಶದ ವಿರುದ್ದ ಮಾಡುತ್ತಿದ್ದಾರೆ

news18-kannada
Updated:January 12, 2020, 12:51 PM IST
ಸಿಎಎ ಪೌರತ್ವ ಕೊಡುವ ಕಾನೂನು, ಕಿತ್ತುಕೊಳ್ಳುವ ಕಾನೂನು ಅಲ್ಲ; ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್​ಜೋಶಿ
  • Share this:
ರಾಯಚೂರು(ಜ.12): ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ನೋಟಿಫಿಕೇಷನ್ ಆಗಿದೆ. ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಸಿಎಎ ವಿರೋಧಿಸಿ ದೇಶದಲ್ಲಿ ಹೋರಾಟ ಮಾಡುತ್ತಿವೆ.  ಪಾಕ್​​​ನ ಭಯೋತ್ಪಾದನೆ ಮುಖವನ್ನು ವಿಶ್ವದ ಮುಂದೆ ನಿಲ್ಲಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಾಕ್​​ನಲ್ಲಿನ ಅಸಹಿಷ್ಣುತೆ ಹಾಗೂ ಸರ್ಕಾರ ಅಲ್ಪ ಸಂಖ್ಯಾತರ ಮೇಲಿನ ನಡೆಸಿರುವ ಧಾರ್ಮಿಕ ಅತ್ಯಾಚಾರವನ್ನು ಜಗತ್ತಿಗೆ ತೋರಿಸಲು ಅವಕಾಶ ಸಿಕ್ಕಿದೆ.  ಪಾಕಿಸ್ತಾನದಲ್ಲಿ ಶೇ. 22ರಷ್ಟು ಇದ್ದ ಹಿಂದೂ ಅಲ್ಪಸಂಖ್ಯಾತರ ಜನಸಂಖ್ಯೆ ಶೇ. 2ಕ್ಕೆ ಇಳಿದಿದೆ. ದೇಶಕ್ಕೆ ಲಕ್ಷಾಂತರ ಜನ ಅಕ್ರಮವಾಗಿ ನುಸುಳಿ ಬಂದಿದ್ದಾರೆ, ಅವರ ಬಗ್ಗೆ ಚಕಾರವೆತ್ತುತ್ತಿಲ್ಲ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಚ್ಚಿ ಮಾದರಿಯಲ್ಲಿ ಆದೇಶ ಬಂದರೆ ಬೆಂಗಳೂರಿನಲ್ಲಿ ನೆಲಕ್ಕುರುಳುತ್ತವೆ ಸಾವಿರಾರು ಅಕ್ರಮ ಕಟ್ಟಡಗಳು!

ಮುಂದುವರೆದ ಅವರು, ಕಾಂಗ್ರೆಸ್​ ನಾಯಕ ಯು.ಟಿ.ಖಾದರ್ ವಿರುದ್ಧ ಕಿಡಿಕಾರಿದರು. "ಯು ಟಿ ಖಾದರ್ ಬಿಲ್ ಬಂದ ನಂತರ ನಿಮಗೆ ಏನಾದರೂ ತೊಂದರೆಯಾಗಿದೆಯಾ? ನಿಮ್ಮ ಉದ್ದೇಶ ಏನು ಎಂಬುದನ್ನು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ನವರು ಸೋಲಿನಿಂದ ಕಂಗೆಟ್ಟಿದ್ದಾರೆ. ಮೋದಿಯವರನ್ನು ವಿರೋಧಿಸುತ್ತಾ, ದೇಶದ ವಿರುದ್ದ ಮಾಡುತ್ತಿದ್ದಾರೆ.  ಪಾಕಿಸ್ತಾನದ ಭಾಷೆ ಕಾಂಗ್ರೆಸ್ ಭಾಷೆ ಒಂದೇ ಆಗಿದೆ ಯಾಕೆ?  ಪಾಕಿಸ್ತಾನವನ್ನು ಬೆತ್ತಲೆ ಮಾಡುವ ಅವಕಾಶಕ್ಕೆ ವಿರೋಧಿಸುತ್ತಿದ್ದೀರಿ. ಪಾಕಿಸ್ತಾನ ಯಾವ ಅಲ್ಪಸಂಖ್ಯಾತರನ್ನು ಸುರಕ್ಷಿತವಾಗಿ ನೋಡಿಕೊಂಡಿದೆ. ಇದು ಪೌರತ್ವ ಕೊಡಲು ಇರುವ ಕಾನೂನು, ಕಿತ್ತುಕೊಳ್ಳುವ ಕಾನೂನು ಅಲ್ಲ. ನೀವು ಮಾಡಲು ಆಗದಿರುವುದನ್ನ ಬೇರೆಯವರು ಮಾಡಿದಾಗ ಯಾಕೆ ವಿರೋಧಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಕಿಡಿ

ಮಂಗಳೂರು ಗಲಭೆ ಬಗ್ಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿದ ವಿಚಾರವಾಗಿ, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.  ಕುಮಾರಸ್ವಾಮಿಯವರದ್ದು ಹಿಟ್ ಅಂಡ್ ರನ್ ನಡೆ. ಯಾರ ಮೇಲೆ ದಾಳಿ ಮಾಡಲು ಯಾರಿಗೂ ಹಕ್ಕಿಲ್ಲ. ಪರಸ್ಥಿತಿಗೆ ಅನುಗುಣವಾಗಿ ಪೊಲೀಸರು ಕ್ರಮಕೈಗೊಂಡಿದ್ದಾರೆ.  ಪೊಲೀಸರ ಕ್ರಮದ ವಿರುದ್ಧ ನಿಲ್ಲುವುದು ಸರಿಯಲ್ಲ ಎಂದು ಕಿಡಿಕಾರಿದರು.

ಎತ್ತಿನ ಬಂಡಿ ಹರಿದು ಇಬ್ಬರಿಗೆ ಗಾಯ: ಮೂಗೂರು ಜಾತ್ರೆ ವೇಳೆ ಅವಘಡ: ವಿಡಿಯೋ ವೈರಲ್ಆಂಧ್ರದ ಕರ್ನೂಲ್ ರಾಜ್ಯಕ್ಕೆ ಸೇರಿಸುವ ವಿಚಾರವಾಗಿ, ಗಡಿ ವಿವಾದಗಳು ಬಹಳ ಇವೆ. ಅಭಿವೃದ್ಧಿ ಕಡೆ ಗಮನ ಕೊಡುವುದು ಒಳಿತು. ಜಿಡಿಪಿ ಹೆಚ್ಚಳಕ್ಕೆ ಕ್ರಮಕೈಗೊಂಡಿದ್ದೇವೆ.  ಬಜೆಟ್ ಮೂಲಕ ದೇಶ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ ಎಂದರು.
First published:January 12, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ