ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ವಿಡಿಯೋ ಸಂವಾದ; ಪಶ್ಚಿಮಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಸಂಬಂಧ ಚರ್ಚೆ
ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
news18-kannada Updated:May 21, 2020, 5:47 PM IST

ಕಸ್ತೂರಿ ರಂಗನ್ ವರದಿ ಜಾರಿ ಸಂಬಂಧ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಸಿಎಂ ಬಿಎಸ್ ಯಡಿಯೂರಪ್ಪ.
- News18 Kannada
- Last Updated: May 21, 2020, 5:47 PM IST
ಬೆಂಗಳೂರು; ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದರು.
ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇದಕ್ಕೆ ಸಹಮತ ವ್ಯಕ್ತಪಡಿಸಿ, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು.
ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಸಂದೀಪ್ ದವೆ ಭಾಗವಹಿಸಿದ್ದರು.
ಇದನ್ನು ಓದಿ: ರಾಜ್ಯದಲ್ಲಿ ಎಲ್ಲರೂ ಆರೋಗ್ಯ ಸೇತು ಆಪ್ ಡೌನ್ಲೋಡ್ ಕಡ್ಡಾಯ; ಸಚಿವ ಸುಧಾಕರ್ ಮಾಹಿತಿ
ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.