ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ (BJP Candidate List) ಅಂತಿಮ ಆಯ್ಕೆ ಕಸರತ್ತು ನಡೆದಿದೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Union Minister Pralhad Joshi), ಏಪ್ರಿಲ್ 6 ಇಲ್ಲವೇ, ಏಪ್ರಿಲ್7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತೀನಿ ಅಂತ ಹೇಳಿದ್ದಾರೆ. ಅಲ್ಲದೇ ಟಿಕೆಟ್ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ (DCM Laxman Savadi) ಬಹಿರಂಗವಾಗಿ ಮಾತಾಡದಂತೆ ಈಗಾಗಲೇ ತಾಕೀತು ಮಾಡಿದ್ದೇವೆ. ಬೆಳಗಾವಿ (Belagavi Politics) ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಅಂತ ಹೇಳಿದ್ದಅರೆ. ಕಾಂಗ್ರೆಸ್ ಈಗಾಗಲೇ 124 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಕಮಲ ಕಲಿಗಳ ಮ್ಯಾರಥಾನ್ ಮೀಟಿಂಗ್
ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಜೋರಾಗಿ ನಡೆಯುತ್ತಿದೆ. ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ವಿನೂತನ ಪ್ರಯೋಗ ಮಾಡಿದ್ದು, ಬೆಂಗಳೂರಿನ ಪ್ಯಾಲೇಸ್ ಮೈದಾನದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ವೋಟಿಂಗ್ ಮಾಡಲಾಯ್ತು. ಇಂದು ಬೆಳಗ್ಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬ್ಯಾಟ್ ಬಾಕ್ಸ್ ಗಳು ಓಪನ್ ಆಗಲಿವೆ.
ಬ್ಯಾಲೆಟ್ ಬಾಕ್ಸ್ ಗಳನ್ನು ಓಪನ್ ಮಾಡಲು ಒಂದು ಪ್ರತ್ಯೇಕ ತಂಡ ನಿಯೋಜನೆಗೊಂಡಿವೆ. ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ, ಬಳಿಕ ರಾಜ್ಯ ನಾಯಕರು ಶಾರ್ಟ್ ಲಿಸ್ಟ್ ಮಾಡಲಿದ್ದಾರೆ. ಬ್ಯಾಲೆಟ್ ಪೇಪರ್ ವೋಟಿಂಗ್ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಜಿಲ್ಲಾ ಕೋರ್ ಕಮಿಟಿ ಸದಸ್ಯರ ಜೊತೆ ರಾಜ್ಯ ನಾಯಕರು ಕೋರ್ ಕಮಿಟಿ ಮೀಟಿಂಗ್ ನಡೆಸಲಿದ್ದಾರೆ.
ಖಾಸಗಿ ರೆಸಾರ್ಟ್ನಲ್ಲಿ ಮೀಟಿಂಗ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ನೇತೃತ್ವದಲ್ಲಿ ನಡೆಯಲಿದ್ದು, ಕೋರ್ ಕಮಿಟಿ ಸದಸ್ಯರು ಆಗಿರುವ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿ ಕೋರ್ ಕಮಿಟಿ ನಾಯಕರು ಭಾಗಿಯಾಲಿದ್ದಾರೆ. ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಮ್ಯಾರಥಾನ್ ಮೀಟಿಂಗ್ ನಡೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ