Hubballi: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ; ರಾತ್ರಿಯೇ ಸ್ಥಳಕ್ಕೆ ಬಂದು ಜೋಶಿ ಪರಿಶೀಲನೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆಯೇ ಹಿಂದೂಪರ ಸಂಘಟನೆಗಳು ಹರ್ಷ ವ್ಯಕ್ತಪಡಿಸಿವೆ. ಸ್ವತಃ ಪ್ರಹ್ಲಾದ್ ಜೋಶಿ ಅವರೇ ಈದ್ಗಾ ಮೈದಾನಕ್ಕೆ ಬಂದು, ಸ್ಥಳ ಪರಿಶೀಲನೆ ಮಾಡಿ, ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು.

ಈದ್ಗಾ ಮೈದಾನ

ಈದ್ಗಾ ಮೈದಾನ

  • Share this:
ಹುಬ್ಬಳ್ಳಿ - ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ (Hubballi Idgah Maidana) ಗಣೇಶ ಮೂರ್ತಿ (Ganesha Idol_ ಪ್ರತಿಷ್ಠಾಪನೆಗೆ ಹೈಕೋರ್ಟ್ (highcourt) ಹಸಿರು ನಿಶಾನೆ ತೋರಿದೆ. ಹೈಕೋರ್ಟ್ ತೀರ್ಪು ಪ್ರಕಟಗೊಳ್ಳುತ್ತಿದ್ದಂತೆಯೇ ಹಿಂದೂಪರ ಸಂಘಟನೆಗಳ (Hindu Organizations) ಮುಖಂಡರು ಈದ್ಗಾ ಬಳಿ ಜಮಾಯಿಸಿ ವಿಜಯೋತ್ಸವ ಆಚರಿಸಿದರು. ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Union Minister Pralhad Joshi) ರಾತ್ರಿಯೇ ಈದ್ಗಾಕ್ಕೆ ಬಂದು ಸ್ಥಳ ಪರಿಶೀಲನೆ ಮಾಡಿ, ಹಿರಿಯ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು. ಕರ್ನಾಟಕ ಹೈಕೋರ್ಟ್ ನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಸಿರು ನಿಶಾನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು.

ಗಣೇಶ ಪ್ರತಿಷ್ಠಾಪನೆಯ ಸ್ಥಳ ಪರಿಶೀಲನೆ ಮಾಡಿದ ಜೋಶಿ, ಯಾವ ಸ್ಥಳದಲ್ಲಿ ಮೂರ್ತಿ ಪ್ರತಿಷ್ಠಾಪಿಸಿದರೆ ಸೂಕ್ತ ಎನ್ನುವ ಕುರಿತು ಅಧಿಕಾರಿಗಳ ಜೊತೆ ಚರ್ಚೆ ಮಾಡಿದರು. ಡಿಸಿ ಗುರುದತ್ತ ಹೆಗಡೆ ಹಾಗೂ ಪೊಲೀಸ್ ಕಮೀಷನರ್ ಲಾಭೂ ರಾಮ್ ಜೊತೆ ಚರ್ಚೆ ಮಾಡಿದರು. ನಂತರ ಮಾತನಾಡಿದ ಅವರು, ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಎಂದರು.

ನಿರೀಕ್ಷೆಯಂತೆ ತೀರ್ಪು ಬಂದಿದೆ

ಆದರೆ ಕೆಲ ವ್ಯಕ್ತಿಗಳು ನ್ಯಾಯಾಲಯದ ಮೊರೆ ಹೋಗಿದ್ದು ದುರದೃಷ್ಟಕರ. ನ್ಯಾಯಾಲಯದ ಮೇಲೆ ನಮಗೆ ಭರವಸೆ ಇತ್ತು. ನಮ್ಮ ನಿರೀಕ್ಷೆಯಂತೆಯೇ ತೀರ್ಪು ಬಂದಿದೆ. ಮೂರು ದಿನಗಳ ಕಾಲ ಗಣೇಶೋತ್ಸವಕ್ಕೆ ಅವಕಾಶ ಸಿಕ್ಕಿದೆ. ನ್ಯಾಯಾಲಯ ವಿಧಿಸಿದ ನಿಬಂಧನೆಗಳಿಗೆ ಅನುಗುಣವಾಗಿ ಗಣೇಶೋತ್ಸವ ಮಾಡಲಾಗುತ್ತದೆ. ಆದರೆ ಕೊನೆ ಘಳಿಗೆಯಲ್ಲಿ ಇದಕ್ಕೆ ಕಾಂಗ್ರೆಸ್ ವಿರೋಧ ಮಾಡಿದೆ. ಅದು ಓಲೈಕೆಯ ರಾಜಕಾರಣ ಮಾಡುತ್ತಲೇ ಅಧೋಗತಿಗೆ ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:  Murugha Swamiji Case: ಸ್ವಾಮೀಜಿಗೆ ಒಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯನಾ? ಖಾಕಿಗೆ ಕುಟುಕಿದ ಹಳ್ಳಿಹಕ್ಕಿ!

Union minister Pralhad Joshi visit hubballi idgah maidana last night and check ganeshotsava preparation saklb mrq
ಹಿಂದೂ ಸಂಘಟನೆಗಳ ಮುಖಂಡ ವಿಜಯೋತ್ಸವ


ಮೂರು ದಿನ ಗಣೇಶ ಪ್ರತಿಷ್ಠಾಪನೆಗೆ ಅವಕಾಶ

ಇದೇ ವೇಳೆ ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಧಾರವಾಡ ಡಿಸಿ ಗುರುದತ್ತ ಹೆಗಡೆ ಭೇಟಿ ನೀಡಿದರು. ಗಣೇಶ ಪ್ರತಿಷ್ಠಾಪನೆಯ ಸ್ಥಳ ಪರಿಶೀಲನೆ ಮಾಡಿದ ಡಿಸಿ, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಲ್ಲ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ನಿಬಂಧನೆಗಳೇ ಇದಕ್ಕೂ ಅನ್ವಯ ಆಗುತ್ತದೆ. ಡಿಜೆ ಹಚ್ಚಲು ಅವಕಾಶಗಳಿಲ್ಲ, ಧ್ವನಿವರ್ಧಕ ಬಳಸೋಕೆ ಮಾತ್ರ ಅನುಮತಿ ಸಿಗುತ್ತದೆ. ಹೈಕೋರ್ಟ್ ನೀಡಿರೋ ನಿರ್ದೇಶನಗಳನ್ನು ಪಾಲಿಸಲಾಗುತ್ತದೆ ಎಂದು ಗುರುದತ್ ಹೆಗಡೆ ತಿಳಿಸಿದ್ದಾರೆ.ಹೈಕೋರ್ಟ್ ನಿಯಮಗಳನ್ನು ಪಾಲಿಸ್ತೇವೆ ಎಂದ ಮಂಡಳಿ

ಕರ್ನಾಟಕ ಹೈಕೋರ್ಟ್ ನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಸಿರು ನಿಶಾನೆ ಕೊಟ್ಟ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳಿಂದ ವಿಜಯೋತ್ಸವ ನಡೆಯಿತು. ಈದ್ಗಾ ಮೈದಾನದ ಬಳಿ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಂಭ್ರಮಿಸಿದರು.

ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಂಡಳಿಗೆ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮಂಡಳಿ ಅಧ್ಯಕ್ಷ ಸಂಜಯ್ ಬಡಸ್ಕರ್ ನ್ಯೂಸ್ 18 ಗೆ ಪ್ರತಿಕ್ರಿಯೆ ನೀಡಿದ್ದಾರೆ.

Union minister Pralhad Joshi visit hubballi idgah maidana last night and check ganeshotsava preparation saklb mrq
ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ


ಇದೊಂದು ಐತಿಹಾಸಿಕ ಕ್ಷಣ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಕಾಶ ಸಿಕ್ಕಿರಲಿಲ್ಲ. ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟ ಹಿನ್ನೆಲೆಯಲ್ಲಿ ಪಾಲಿಕೆ ಅನುಮತಿ ಕೊಟ್ಟಿದೆ. ಎಲ್ಲ ಸಂಘಟನೆಗಳೂ ಒಟ್ಟುಗೂಡಿ ಗಣೇಶೋತ್ಸವ ಆಚರಿಸ್ತೇವೆ ಎಂದರು.

ಇದನ್ನೂ ಓದಿ:  Karnataka Rains: ರಾಜ್ಯದಲ್ಲಿ ಇನ್ನೆರಡು ದಿನ ರಣ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆ

ಹೈಕೋರ್ಟ್ ಹಾಕಿರೋ ನಿಯಮಗಳಿಗೆ ನಾವು ಬದ್ಧರಾಗಿರುತ್ತೇವೆ. ಅರ್ಥಪೂರ್ಣವಾಗಿ ಗಣೇಶೋತ್ಸವ ಆಚರಿಸುತ್ತೇವೆ. ಮೂರು ಸಾವಿರ ಮಠದ ಆವರಣದಿಂದ ಗಣೇಶ ಮೆರವಣಿಗೆ ಮಾಡ್ತೇವೆ. ಅದೇ ರೀತಿಯಲ್ಲಿ ಅದ್ಧೂರಿಯಾಗಿಯೇ ಮೂರನೆಯ ದಿನ ವಿಸರ್ಜಿಸ್ತೇವೆ. ಅದಕ್ಕಾಗಿ ಎಲ್ಲ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಂಡಳಿ ಅಧ್ಯಕ್ಷ ಸಂಜಯ್ ಬಡಸ್ಕರ್ ತಿಳಿಸಿದ್ದಾರೆ.
Published by:Mahmadrafik K
First published: