• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಉಡುಪಿ-ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ದೆಹಲಿಯಿಂದಲೇ ಸಭೆ ನಡೆಸಿ ಮಾಹಿತಿ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ದೆಹಲಿಯಿಂದಲೇ ಸಭೆ ನಡೆಸಿ ಮಾಹಿತಿ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಶೋಭಾ ಕರಂದ್ಲಾಜೆ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವಿಸಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ.

  • Share this:

ನವದೆಹಲಿ(ಜು. 16): ಶೋಭಾ ಕರಂದ್ಲಾಜೆ ಅವರು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರದ ಕೃಷಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವರಾಗಿ ಮಹತ್ವದ ಹೊಣೆ ಹೊತ್ತಿದ್ದಾರೆ. ಸಚಿವರಾದ ಬಳಿಕ ಊರಿಗೂ ತೆರಳದೆ ನಿರಂತರವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಾ, ಇಲಾಖೆಯ ಬಗ್ಗೆ ಅಧ್ಯಯನ ನಡೆಸುತ್ತಿರುವ ಶೋಭಾ ಕರಂದ್ಲಾಜೆ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವಿಸಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ.


ಬೆಳಿಗ್ಗೆಯೇ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಳೆಯಿಂದ ಆಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.


ಮಳೆಯಿಂದ ಆಗುತ್ತಿರುವ ಅನಾಹುತ, ಅವ್ಯವಸ್ಥೆಗಳ ಬಗ್ಗೆ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶೋಭಾ ಕರಂದ್ಲಾಜೆ ಅವರು ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಮಾಡುವಂತೆ ಕೂಡ ಸೂಚಿಸಿದರು.


ಇದನ್ನೂ ಓದಿ:Karnataka Weather Today: ಇಂದು ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ


ದೆಹಲಿಯಲ್ಲೇ ಠಿಕಾಣಿ


ಜುಲೈ 7ರಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ ಜುಲೈ 8ರಂದು ಅಧಿಕಾರ ಸ್ವೀಕರಿಸಿದರು. ‌ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚನೆ ಮೇರೆಗೆ ಆನಂತರ ಕ್ಷೇತ್ರಕ್ಕೂ ತೆರಳದೆ ತಮ್ಮ ಇಲಾಖೆಯ ಅಧ್ಯಯನದಲ್ಲಿ ತೊಡಗಿದ್ದಾರೆ. ಜುಲೈ ‌19ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಶುರುವಾಗಲಿದೆ. ಆಗ ಕೃಷಿ ಇಲಾಖೆ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ ಮತ್ತು ಚರ್ಚೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಆದುದರಿಂದ ಸಂಸತ್ ಅಧಿವೇಶನದವರೆಗೆ ದೆಹಲಿಯಲ್ಲೇ ಠಾಕಾಣಿ ಹೂಡಿ ಇಲಾಖೆ ಮತ್ತು ವಿಷಯದ ಮೇಲೆ ಹಿಡಿತ ಸಾಧಿಸುವ ಪ್ರಯತ್ನ ಮಾಡುತ್ತಿದ್ದಾರೆ.


ರಾಜ್ಯದಲ್ಲಿ ಭಾರೀ ಮಳೆಯ ನಿರೀಕ್ಷೆ


ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು ಜುಲೈ 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.17ರಂದು ಈ ಪ್ರದೇಶಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ:Karnataka Dams Water Level: ಮಳೆಗೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿ; ಇಂದಿನ ನೀರಿನ ಮಟ್ಟ ಇಲ್ಲಿದೆ


ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.

top videos
    First published: