HOME » NEWS » State » UT KHADER SLAMS ON BJP GOVERNMENT IN MATTER OF TRANSFER OF MANGALORE DC SINDHOORI B RUPESH MAK

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌ ವರ್ಗಾವಣೆ ವಿಚಾರ; ಸರ್ಕಾರದ ವಿರುದ್ಧ ಯುಟಿ ಖಾದರ್‌ ಕಿಡಿ

ರಾಜ್ಯ ಸರ್ಕಾರ ಮೊನ್ನೆ ಕೆಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಈ ಪೈಕಿ ಮಂಗಳೂರು ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್‌ ಅವರನ್ನೂ ಸಹ ವರ್ಗಾವಣೆ ಮಾಡಲಾಗಿತ್ತು. ಆದರೆ, ಸರ್ಕಾರದ ಈ ನಡೆಯ ವಿರುದ್ಧ ಯುಟಿ ಖಾದರ್ ಟ್ವಿಟರ್‌ ಮೂಲಕ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

news18-kannada
Updated:July 29, 2020, 9:39 AM IST
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌ ವರ್ಗಾವಣೆ ವಿಚಾರ; ಸರ್ಕಾರದ ವಿರುದ್ಧ ಯುಟಿ ಖಾದರ್‌ ಕಿಡಿ
ಯುಟಿ ಖಾದರ್
  • Share this:
ಮಂಗಳೂರು (ಜುಲೈ 29); ಕಾನೂನು ಕೈಗೆತ್ತಿಕೊಂಡರೆ,ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಮಾಜಿ ಸಚಿವ ಯುಟಿ ಖಾದರ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆ ಕೆಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಈ ಪೈಕಿ ಮಂಗಳೂರು ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್‌ ಅವರನ್ನೂ ಸಹ ವರ್ಗಾವಣೆ ಮಾಡಲಾಗಿತ್ತು. ಆದರೆ, ಸರ್ಕಾರದ ಈ ನಡೆಯ ವಿರುದ್ಧ ಯುಟಿ ಖಾದರ್ ಟ್ವಿಟರ್‌ ಮೂಲಕ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಖಾದರ್‌, "ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ ನ್ಯಾಯ ಎಲ್ಲಿದೆ ?"ಕಾನೂನು ಕೈಗೆತ್ತಿಕೊಂಡರೆ, ನೈತಿಕ‌ ಪೋಲಿಸ್ ಗಿರಿ ಮಾಡಿದರೆ, ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ. ಇದು ಯಾವ ನ್ಯಾಯ?" ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
Published by: MAshok Kumar
First published: July 29, 2020, 9:38 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading