• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Uttara Kannada: ವರ್ಷಕ್ಕೆ ಒಂದು ಬಾರಿ ಮಾತ್ರ ದೇವಾಲಯ ಓಪನ್! ದೇವಿ ನೋಡಲು ಭಕ್ತರ ದಂಡು

Uttara Kannada: ವರ್ಷಕ್ಕೆ ಒಂದು ಬಾರಿ ಮಾತ್ರ ದೇವಾಲಯ ಓಪನ್! ದೇವಿ ನೋಡಲು ಭಕ್ತರ ದಂಡು

ಸಾತೇರಿ ದೇವಸ್ಥಾನ

ಸಾತೇರಿ ದೇವಸ್ಥಾನ

ದೇವಸ್ಥಾನ ಅಂದ್ರೆ ಅಲ್ಲಿ ಪ್ರತಿನಿತ್ಯ ತ್ರಿಕಾಲ ಪೂಜೆ, ಭಕ್ತರಿಗೆ ದರ್ಶನ, ಇನ್ನೂ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುತ್ತದೆ. ಆದ್ರೆ ವರ್ಷವಿಡೀ ದೇವಸ್ಥಾನದ ಬಾಗಿಲು ಮುಚ್ಚಿ ವರ್ಷದಲ್ಲಿ ಕೇವಲ ಏಳು ದಿನ ಮಾತ್ರ ಭಕ್ತರಿಗೆ ದರ್ಶನ ಕೊಡುವ ದೇವಾಲಯದ ಬಗ್ಗೆ ಎಲ್ಲಾದ್ರೂ ಕೇಳಿದ್ದೀರಾ? ಇಲ್ಲಿದೆ ನೋಡಿ

ಮುಂದೆ ಓದಿ ...
  • Share this:

ದೇವಸ್ಥಾನ (Temple) ಅಂದ್ರೆ ಅಲ್ಲಿ ಪ್ರತಿನಿತ್ಯ ತ್ರಿಕಾಲ ಪೂಜೆ, ಭಕ್ತರಿಗೆ (Devotees) ದರ್ಶನ, ಇನ್ನೂ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುತ್ತದೆ. ಆದ್ರೆ ವರ್ಷವಿಡೀ ದೇವಸ್ಥಾನದ ಬಾಗಿಲು ಮುಚ್ಚಿ ವರ್ಷದಲ್ಲಿ ಕೇವಲ ಏಳು ದಿನ (Seven days) ಮಾತ್ರ ಭಕ್ತರಿಗೆ ದರ್ಶನ ಕೊಡುವ ದೇವಾಲಯದ ಬಗ್ಗೆ ಎಲ್ಲಾದ್ರೂ ಕೇಳಿದ್ದೀರಾ? ಹೌದು ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿರುವ ಸಾತೇರಿ (Satheri) ಅನ್ನೋ ದೇವಸ್ಥಾನದಲ್ಲಿ ದೇವಿಯ ದರ್ಶನಕ್ಕೆ ವರ್ಷದಲ್ಲಿ ಏಳು ದಿನ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ. ವರ್ಷಕ್ಕೆ ಒಂದು ಬಾರಿ ಬಾಗಿಲು ತೆರೆದಾಗಲೆ ದೇವಿಯ ಏಳು ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಈ ದೇವಿಗೆ ಹರಕೆ ಹೊತ್ತುಕೊಂಡರೆ ಒಂದೇ ವರ್ಷದಲ್ಲಿ ಅದು ಈಡೇರುತ್ತದೆ ಎನ್ನುವ ನಂಬಿಕೆ ಸಹ ಜನರಲ್ಲಿದ್ದು ವಿವಿಧೆಡೆಗಳಿಂದ ಭಕ್ತ ಸಾಗರವೇ ಈ ದೇವಾಲಯಕ್ಕೆ ಹರಿದು ಬರುತ್ತಿದೆ.


ಸಾಮಾನ್ಯವಾಗಿ ದೇವಸ್ಥಾನ ಅಂದ್ರೆ ಅಲ್ಲಿ ನಿತ್ಯವೂ ದೇವರಿಗೆ ಪೂಜೆ ನಡೆಯುತ್ತದೆ. ದೇವರ ದರ್ಶನಕ್ಕೆ ವ್ಯವಸ್ಥೆ ಇರುತ್ತೆ ಅನ್ನೋ ಕಲ್ಪನೆ ನಮ್ಮಲ್ಲಿದೆ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣ ಗ್ರಾಮದ ಐತಿಹಾಸಿಕ ಸಾತೇರಿ ದೇವಿ ದೇವಾಲಯ ವರ್ಷದಲ್ಲಿ ಭಕ್ತರಿಗೆ ದೇವರ ದರ್ಶನ ಸಿಗುವುದು ಕೇವಲ ಏಳೇ ದಿನ.


ದೇವಿ ದರ್ಶನಕ್ಕಾಗಿ ಸಾವಿರಾರು ಭಕ್ತರು
ಸಾತೇರಿದೇವಿ ತನ್ನ ಜಾತ್ರಾ ಮಹೋತ್ಸವದಲ್ಲಿ ಮಾತ್ರ ಭಕ್ತರಿಗೆ ದರ್ಶನವನ್ನ ಕೊಡುವ ಪ್ರತೀತಿ ಸಹ ಇದೆ. ಹೀಗಾಗಿ ಕಳೆದೆರಡು ದಿನಗಳಿಂದ ದೇವಿಯ ಜಾತ್ರಾಮಹೋತ್ಸವ ಪ್ರಾರಂಭವಾಗಿದ್ದು ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಹಲವೆಡೆಗಳಿಂದ ಆಗಮಿಸಿದ್ದ ಭಕ್ತರು ಸಾತೇರಿ ದೇವಿಗೆ ವಿವಿಧ ಸೇವೆಗಳನ್ನ ಅರ್ಪಿಸಿ ದರ್ಶನ ಪಡೆದುಕೊಂಡರು.


Uttara Kannada Temple open only once a year A crowd of devotees to see the goddess
ಸಾತೇರಿ ದೇಗುಲ


5 ದಿನ ಮಾತ್ರ ಭಕ್ತರಿಗೆ ದರ್ಶನ
ಇನ್ನು ಜಾತ್ರಾ ಮಹೋತ್ಸವದ ಮೊದಲೆರಡು ದಿನ ದೇವಸ್ಥಾನದ ಅರ್ಚಕ ಕುಟುಂಬದವರಿಗೆ ಹಾಗೂ ಗ್ರಾಮಸ್ಥರಿಗೆ ಮಾತ್ರ ದೇವಿ ದರ್ಶನದ ಅವಕಾಶ ಮಾಡಿಕೊಡಲಾಗುತ್ತದೆ. ಬಳಿಕ ಉಳಿದ ಐದು ದಿನಗಳು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಮುಕ್ತವಾಗಿರುತ್ತದೆ.


ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ಕನ್ನಡದ ಕೋಟ್ಯಾಧಿಪತಿಯಂತೆ ಆಸೀನರಾದ ಅಪ್ಪು! ಭಕ್ತರು ಫುಲ್ ಖುಷ್


ವರ್ಷದ ಉಳಿದ ದಿನಗಳಲ್ಲಿ ದೇವಸ್ಥಾನದಲ್ಲಿ ಪ್ರತಿ ಸೋಮವಾರ ಗರ್ಭಗುಡಿಯ ಬಾಗಿಲಲ್ಲಿಯೇ ನಿಂತು ಪೂಜೆ ಸಲ್ಲಿಸಿ ತೆರಳಲಾಗುತ್ತದೆ. ಇಂದು ಸಾರ್ವಜನಿಕ ದರ್ಶನದ ಮೊದಲ ದಿನವಾಗಿದ್ದು ಸಾವಿರಾರು ಮಂದಿ ಆಗಮಿಸಿ ದರ್ಶನ ಪಡೆದುಕೊಂಡರು.


Uttara Kannada Temple open only once a year A crowd of devotees to see the goddess
ಭಕ್ತರ ದಂಡು


ಏನು ಹೇಳುತ್ತಿದೆ ಇತಿಹಾಸ?
ಇನ್ನು ವರ್ಷದಲ್ಲಿ ಕೇವಲ ಏಳು ದಿನ ಮಾತ್ರ ದರ್ಶನದ ಅವಕಾಶವಿರುವ ಈ ಸಾತೇರಿ ದೇವಿಗೆ ಪೌರಾಣಿಕ ಇತಿಹಾಸವೇ ಇದೆ. ಹಣಕೋಣದಲ್ಲಿರುವ ಸಾತೇರಿ ದೇವಿ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸಿ, ಸಹಾಯ ಸಹಕಾರದ ಅಗತ್ಯವಿದ್ದರೆ ಭಕ್ತರ ಸಮ್ಮುಖದಲ್ಲಿ ಪ್ರತ್ಯಕ್ಷಳಾಗಿ ಕಷ್ಟಗಳನ್ನ ನಿವಾರಿಸುತ್ತಿದ್ದಳಂತೆ.


ಬಾವಿಯಲ್ಲಿ ಅದೃಶ್ಯಳಾಗಿದ್ದಳಂತೆ ದೇವಿ
ಒಮ್ಮೆ ದೇವಿ ಬಾವಿಯ ಪಕ್ಕದಲ್ಲಿ ಸ್ನಾನ ಮಾಡಿ ಕೂದಲನ್ನ ಬಾಚಿಕೊಳ್ಳುವಾಗ ಒಬ್ಬ ದುಷ್ಟನ ಕಣ್ಣು ದೇವಿಯ ಮೇಲೆ ಬಿದ್ದು ದೇವಿಯ ಬಳಿ ಬಂದಾಗ ಆಕೆ ರಕ್ಷಣೆಗಾಗಿ ಬಾವಿಗೆ ಹಾರಿ ಅದೃಶ್ಯಳಾದಳಂತೆ. ಬಳಿಕ ಊರಿನ ಹಿರಿಯನೊಬ್ಬನಿಗೆ ದೇವಿ ಕನಸಿನಲ್ಲಿ ಬಂದು ತಾನು ಬಾವಿಯಲ್ಲಿ ಅದೃಶ್ಯಳಾಗಿದ್ದು ತಾನು ನೆಲೆಸಿರುವ ಸ್ಥಳದಲ್ಲೇ ಸಣ್ಣ ಗುಡಿಯೊಂದನ್ನು ಕಟ್ಟಿಕೊಡುವಂತೆ ಹೇಳಿ ವರ್ಷದಲ್ಲಿ 7 ದಿನಗಳ ಕಾಲ ಮಾತ್ರ ತನ್ನ ದರ್ಶನ ನೀಡುವುದಾಗಿ ತಿಳಿಸಿದ್ದಳಂತೆ.


ಮೊಬೈಲ್, ಕ್ಯಾಮೆರಾಗಳು ನಿಷಿದ್ಧ
ಅದರಂತೆ ನಂತರದ ದಿನಗಳಲ್ಲಿ ಈ ಜಾಗದಲ್ಲಿ ಚಿಕ್ಕ ಗುಡಿ ಕಟ್ಟಲಾಯಿತು. ಈ ದೇವಿಯ ಪೋಟೋ ಮಾರಾಟ ಮಾಡುವುದಾಗಲಿ, ಮೊಬೈಲ್, ಕ್ಯಾಮೆರಾಗಳಲ್ಲಿ ಚಿತ್ರಿಸಿಕೊಳ್ಳುವುದಕ್ಕಾಗಲೀ ದೇವಸ್ಥಾನದಲ್ಲಿ ಅವಕಾಶವಿರುವುದಿಲ್ಲ. ಹಾಗೇನಾದರೂ ಮಾಡಿದಲ್ಲಿ ಅಂತಹವರಿಗೆ ಕೆಟ್ಟದ್ದಾಗುತ್ತದೆ ಅನ್ನೋ ನಂಬಿಕೆ ಭಕ್ತರದ್ದು.


ಇದನ್ನೂ ಓದಿ: ಗಣಪನ ಎದುರು ನಮಾಜ್! ಗಂಡು ಮೆಟ್ಟಿದ ನಾಡಿನಲ್ಲೊಂದು ಸಾಮರಸ್ಯ ಸಂದೇಶ


ಕೊರೋನಾ ಬಳಿಕ ಈ ಬಾರಿಯೇ ದರ್ಶನ
ಹೀಗಾಗಿ ದೇವರನ್ನ ನೋಡಬೇಕಾದರೆ ವರ್ಷದಲ್ಲಿ ಏಳು ದಿನ ಮಾತ್ರ ಅವಕಾಶ ಸಿಗುವುದರಿಂದ ವಿವಿಧೆಡೆಯಿಂದ ಬಂದ ಭಕ್ತರು ದೇವಿಯ ದರ್ಶನವನ್ನ ಪಡೆದುಕೊಳ್ಳುತ್ತಾರೆ. ಕಳೆದೆರಡು ವರ್ಷ ಕೊರೊನಾ ಕಾರಣದಿಂದ ದೇವಿಯ ದರ್ಶನ ಪಡೆಯಲು ಸಾಧ್ಯವಾಗಿಲ್ಲವಾಗಿದ್ದು ಈ ಬಾರಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.


ಈ ಬಾರಿ ಸಹ ಸಾತೇರಿ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಪ್ರಾರಂಭವಾಗಿದ್ದು ದೇವಿಯ ದರ್ಶನವನ್ನ ಪಡೆಯುವುದಕ್ಕೆ ಇನ್ನೂ ನಾಲ್ಕು ದಿನಗಳ ಕಾಲಾವಕಾಶವಿದೆ. ನೀವೂ ಒಮ್ಮೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಳ್ಳಿ.

First published: