• Home
  • »
  • News
  • »
  • state
  • »
  • Vandita Sharma: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

Vandita Sharma: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ವಂದಿತಾ ಶರ್ಮಾ

ವಂದಿತಾ ಶರ್ಮಾ

ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

  • Share this:

ಬೆಂಗಳೂರು (ಮೇ 31): ಹಿರಿಯ ಐಎಎಸ್ ಅಧಿಕಾರಿ (Senior IAS Officer) ವಂದಿತಾ ಶರ್ಮಾ (Vandita Sharma) ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ (State Government) ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ. ರವಿಕುಮಾರ್ (Ravi Kumar) ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.


ವಂದಿತಾ ಶರ್ಮಾ 4ನೇ ಮಹಿಳೆ


ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.


ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ 2 ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.


ಇದನ್ನೂ ಓದಿ: DK Shivakumar ED Case: ಡಿಕೆಶಿ ದೆಹಲಿ ಫ್ಲ್ಯಾಟ್​ನಲ್ಲಿ ಸಿಕ್ಕಿರುವ 8.5 ಕೋಟಿ ರೂ, ಇಂದು ವಿಚಾರಣೆ


ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ


ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.


ವಂದಿತಾ ಶರ್ಮಾ ಅಧಿಕಾರ ಸ್ವೀಕಾರ


ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2023 ರವರೆಗೆ ಇದೆ. ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.


ಪಿ.ರವಿಕುಮಾರ್ ಗೆ ಸಿಎಂ ಆತ್ಮೀಯ ಬೀಳ್ಕೋಡುಗೆ


ನಿವೃತ್ತರಾಗುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.‌ರವಿಕುಮಾರ್ ಅವರನ್ನು ಬೀಳ್ಕೊಡಲಾಯಿತು. ಸಚಿವ ಸಂಪುಟ ಸಭೆಗೂ ಮುನ್ನ ಮೇ 31 ರಂದು ನಿವೃತ್ತ ರಾಗಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಸೋಮವಾರದಂದು ಸಂಪುಟ ಸಭೆ ಸೇರುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರ ಸಚಿವರು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರ ಕಾರ್ಯವನ್ನು ಶ್ಲಾಘಿಸಿದರು.


ಸಿಎಂ ಬೊಮ್ಮಾಯಿ ಶ್ಲಾಂಘನೆ


ಕಳೆದ ವರ್ಷ ಜನವರಿಯಲ್ಲಿ ಟಿಎಂ ವಿಜಯ್ ಭಾಸ್ಕರ್ ಅವರಿಂದ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ಅಧಿಕಾರ ವಹಿಸಿಕೊಂಡರು. ಈ ಹಿಂದೆ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಹಲವು ಸಚಿವರು ರವಿ ಕುಮಾರ್‌ಗೆ ಧನ್ಯವಾದ ಅರ್ಪಿಸಿ ಭವಿಷ್ಯಕ್ಕೆ ಶುಭ ಹಾರೈಸಿದರು.


ಇದನ್ನೂ ಓದಿ: ಕಾವೇರಿ ತಾಯಿಗೆ ಪೂಜೆ ಸಲ್ಲಿಸುವ ವೇಳೆ ಆಯತಪ್ಪಿದ DK Shivakumar


ಇದೇ ಸಂದರ್ಭದಲ್ಲಿ ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸಹ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಚಿವ ಸಂಪುಟದ ಸದಸ್ಯರು, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Published by:Pavana HS
First published: