ಬೆಂಗಳೂರು (ಜ. 6): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಹೆಂಡತಿ ಹಾಗೂ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮೀ ಗುಂಡೂರಾವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವರಲಕ್ಷ್ಮಿ ಅವರು ಕೊರೋನಾದಿಂದಲೇ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವರಲಕ್ಷ್ಮೀ ಗುಂಡೂರಾವ್ ಬಳಿಕ ಗುಣಮುಖರಾಗಿದ್ದರು. ಬಳಿಕ ಪುನಃ ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ವರಲಕ್ಷ್ಮೀ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಇಂದು ದೇವನಹಳ್ಳಿಯಲ್ಲಿರುವ ಫಾರ್ಮ್ ಹೌಸ್ನಲ್ಲಿ ವರಲಕ್ಷ್ಮೀ ಗುಂಡೂರಾವ್ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಪತ್ನಿ, ಕಾಂಗ್ರೆಸ್ ಮುಖಂಡ @dineshgrao ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/uDTMuv0q1j
— B Sriramulu (@sriramulubjp) January 6, 2021
Deeply saddened to hear about the demise of Smt. Varalakshmi Gundu Rao, wife of Former CM Shri. Gundu Rao.
My heartfelt condolences to @dineshgrao and his family in this time of grief. pic.twitter.com/3efe9qE8LU
— DK Shivakumar (@DKShivakumar) January 5, 2021
ವರಲಕ್ಷ್ಮೀ ಗುಂಡೂರಾವ್ ಕೂಡ ತಮ್ಮ ಪತಿಯ ನಿಧನದ ನಂತರ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ವಿರುದ್ಧ ಸೋಲನ್ನು ಅನುಭವಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ