ಬಲವಂತದ ಹಿಂದಿ ಹೇರಿಕೆ ಮಾಡಿದ್ರೆ, ಹಿಂದಿ ವಿರೋಧಿ ಚಳುವಳಿ ಮಾಡುತ್ತೇವೆ; Vatal Nagaraj​ ಎಚ್ಚರಿಕೆ

ಇದು ಸ್ಥಳೀಯ ಭಾಷೆಗಳನ್ನು ಬಲವಂತವಾಗಿ ಮಟ್ಟ ಹಾಕುವ ವಿಧಾನ ಇದಾಗಿದ್ದು, ಇದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಟಾಳ್ ನಾಗರಾಜ್

ವಾಟಾಳ್ ನಾಗರಾಜ್

 • Share this:
  ಬೆಂಗಳೂರು (ಏ. 9):  ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಇಂಗ್ಲಿಷ್ (​English) ಬದಲು ಹಿಂದಿ (Hindi) ಬಳಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಹೇಳಿಕೆಗೆ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಹಿಂದಿ ಹೇರಿಕೆ ವಿರುದ್ಧ ರಾಜಕೀಯ ನಾಯಕರು ಸೇರಿದಂತೆ ಅನೇಕ ಸಂಘಟನೆಗಳು ಕೂಡ ಧ್ವನಿ ಎತ್ತಿವೆ. ಇನ್ನು ಈ ಕುರಿತು ಮಾತನಾಡಿರುವ ಕನ್ನಡ ಚಳುವಳಿ ವಾಟಾಳ್​ ಪಕ್ಷದ ಅಧ್ಯಕ್ಷ ವಾಟಾಳ್​ ನಾಗರಾಜ್ (Vatana Nagaraj)​ ಇಂದು ಮೈಸೂರು ಬ್ಯಾಂಕ್​ ವೃತ್ತದ (Mysore Bank Circle) ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಬೇಕೆಂದು ಕರೆ ನೀಡಿದರು.

  ನಮ್ಮ ರಾಜ್ಯದಲ್ಲಿ ಕನ್ನಡವೇ ಪ್ರಧಾನ. ಈ ರೀತಿ ಬಲವಂತದ ಹಿಂದಿ ಹೇರಿಕೆ ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಇದು ಸ್ಥಳೀಯ ಭಾಷೆಗಳನ್ನು ಬಲವಂತವಾಗಿ ಮಟ್ಟ ಹಾಕುವ ವಿಧಾನ ಇದಾಗಿದ್ದು, ಇದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

  ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ

  ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮವಾಗಿದೆ. ನಮ್ಮ ಮೇಲೆ ಹಿಂದಿಯ ಅಗತ್ಯವಿಲ್ಲ. ಉತ್ತರ ಭಾರತದ ರಾಜ್ಯಗಳಲ್ಲೂ ಕೂಡ ಹಿಂದಿ ಭಾಷೆ ಇಲ್ಲ. ಆದರೆ ಬಲವಂತವಾಗಿ ಹಿಂದಿ ಹೇರಿಕೆ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

  ಇದನ್ನು ಓದಿ: ನಗರದಲ್ಲಿ ಮತ್ತೊಂದು BMTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ

  ಅಷ್ಟೇ ಅಲ್ಲದೇ ಏಕಾ ಏಕಿ ಈ ರೀತಿ ಯಾವುದೇ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಚರ್ಚಿಸದೆ ಏಕಾಏಕಿ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿಕೊಳ್ಳಬೇಕೆಂದು ಆದೇಶ ಮಾಡಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ.

  ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

  ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಬಿಂಬಿಸಿ ರಾಜ್ಯ ಭಾಷೆಯನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ. ಇದರ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ನಮ್ಮ ರಾಜ್ಯದಲ್ಲಿ ನಮ್ಮ ಮಾತೃಭಾಷೆಯಾದ ಕನ್ನಡವೇ ನಮಗೆ ಶ್ರೇಷ್ಠ ಹಿಂದಿ ನಮಗೆ ಯಾವುದೇ ಕಾರಣಕ್ಕೂ ಬೇಡ. ದೇಶದಲ್ಲಿ ಬಹುತೇಕ ರಾಜ್ಯಗಳಿಗೆ ಬೇಡವಾದ ಹಿಂದಿ ಭಾಷೆಯನ್ನು ಬಲವಂತಾಗಿ ಹೇರುವ ಮೂಲಕ ಸ್ಥಳೀಯ ಭಾಷೆಗಳನ್ನು ನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಜನಪ್ರತಿನಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು
  ಕೇಂದ್ರದ ಹಿಂದಿ ಹೇರಿಕೆ ಧೋರಣೆಯನ್ನು ನಾವು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇವೆ. ಅಮಿತ್ ಶಾ ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲವಾದರೆ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು

  ಇದನ್ನು ಓದಿ: ಆಂಬುಲೆನ್ಸ್​ನಲ್ಲಿ ಆಕ್ಸಿಜನ್ ಕೊರತೆ: ನವಜಾತ ಗಂಡು ಶಿಶು ಸಾವು

  ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಶಾಸಕರು, ಸಂಸದರು ಕೂಡ ಹೋರಾಟಕ್ಕೆ ಮುಂದಾಗಬೇಕು. ಅಮಿತ್ ಶಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಡಾ.ಸುಧಾಕರ್ ಅವರ ಕ್ರಮ ಕೂಡ ಖಂಡನೀಯವಾಗಿದೆ. ನಾಡಿನ ಭಾಷೆಯ ಬಗ್ಗೆ ಇವರಿಗೂ ಕೂಡ ಅಭಿಮಾನ ಇಲ್ಲ ಎಂದು ಇದೇ ವೇಳೆ ಸಚಿವರ ವಿರುದ್ಧ ಕಿಡಿಕಾರಿದರು

  ಸಿದ್ದರಾಮಯ್ಯ ಚಾಟಿ

  ಹಿಂದಿ ಹೇರಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್​ ಮೂಲಕ ಅಸಮಾಧಾನ ಹೊರ ಹಾಕಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾವು ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ. ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ ಎಂದು  ತಿರುಗೇಟು ನೀಡಿದ್ದಾರೆ.
  Published by:Seema R
  First published: