HOME » NEWS » State » VEHICLE ENTRY BANNED ON BANGALORE CHURCH STREET DURING WEEKENDS FROM TODAY CLEAN AIR STREET SCT

ಬೆಂಗಳೂರಿನ ಚರ್ಚ್​ ಸ್ಟ್ರೀಟ್​ನಲ್ಲಿ ಇಂದಿನಿಂದ ವೀಕೆಂಡ್​ನಲ್ಲಿ ವಾಹನ ಸಂಚಾರ ನಿಷೇಧ

ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬೆಂಗಳೂರಿನ ಚರ್ಚ್​ ಸ್ಟ್ರೀಟ್​ನಲ್ಲಿ ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಜಾರಗೊಳಿಸಲಾಗಿದೆ. ಹೀಗಾಗಿ, ವಾರಾಂತ್ಯದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

news18-kannada
Updated:November 7, 2020, 12:42 PM IST
ಬೆಂಗಳೂರಿನ ಚರ್ಚ್​ ಸ್ಟ್ರೀಟ್​ನಲ್ಲಿ ಇಂದಿನಿಂದ ವೀಕೆಂಡ್​ನಲ್ಲಿ ವಾಹನ ಸಂಚಾರ ನಿಷೇಧ
ಬೆಂಗಳೂರು ಚರ್ಚ್​ ಸ್ಟ್ರೀಟ್
  • Share this:
ಬೆಂಗಳೂರು (ನ. 7): ಬೆಂಗಳೂರಿನ ಚರ್ಚ್​​ ಸ್ಟ್ರೀಟ್​ನಲ್ಲಿ ಇಂದಿನಿಂದ 2012ರ ಫೆಬ್ರವರಿ ಅಂತ್ಯದವರೆಗೂ ವಾರಾಂತ್ಯದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಚರ್ಚ್​ ಸ್ಟ್ರೀಟ್​ನಲ್ಲಿ ಇಂದು ಕ್ಲೀನ್ ಏರ್​ ಸ್ಟ್ರೀಟ್ ಯೋಜನೆಯನ್ನು​ ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ನಗರ ಭೂಸಾರಿಗೆ ನಿರ್ದೇಶನಾಲಯ ಹಾಗೂ ಯಕೆ ಸಹಭಾಗಿತ್ವದಲ್ಲಿ ಕ್ಲೀನ್ ಏರ್ ಸ್ಟ್ರೀಟ್ ಉದ್ಘಾಟಿಸಲಾಗಿದೆ. 2021ರ ಫೆಬ್ರವರಿ 21ವರೆಗೂ ಈ ಪೈಲಟ್ ಪ್ರಾಜೆಕ್ಟ್ ಜಾರಿಯಲ್ಲಿರುತ್ತದೆ. ಶುದ್ಧಗಾಳಿ, ನೀರು ಪ್ರತಿಯೊಬ್ಬ ನಾಗರೀಕನ ಹಕ್ಕು. ಬೆಂಗಳೂರಿನಲ್ಲಿ ವೈಯಕ್ತಿಕ ವಾಹನಗಳ ಸಂಖ್ಯೆ 80 ಲಕ್ಷ ದಾಟಿದೆ. ಪ್ರತಿ ವರ್ಷ ಇದು ಶೇ.10ರಷ್ಟು ಏರಿಕೆಯಾಗುತ್ತಿದೆ. ಪರಿಸರ ಸಂರಕ್ಷಣೆಗೆ ಯುವ ಜನತೆ ಕೈ ಜೋಡಿಸುತ್ತಿರುವುದು ಆಶಾವಾದ ಮೂಡಿಸಿದೆ ಎಂದು ಹೇಳಿದ್ದಾರೆ.

ಇಂದಿನಿಂದ 25 ಫೆಬ್ರುವರಿ 2021ರವರೆಗೆ ಶನಿವಾರ ಮತ್ತು ಭಾನುವಾರ ಚರ್ಚ್ ಸ್ಟ್ರೀಟ್​ನಲ್ಲಿ ವಾಹನಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಭಾರತ ಮತ್ತು ಬ್ರಿಟನ್​ನ 11 ಸಂಸ್ಥೆಗಳು ಅಭಿವೃದ್ಧಿ ಪಡಿಸಿರುವ ಮಾಲಿನ್ಯ ನಿಯಂತ್ರಣ ಸಂಸ್ಥೆಗಳು ಈ ಯೋಜನೆಯಲ್ಲಿ ಭಾಗಿಯಾಗಿವೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಚರ್ಚ್​ ಸ್ಟ್ರೀಟ್​ನಲ್ಲಿ ವಿನೂತನ ಪ್ರಯೋಗ ಮಾಡಲಾಗಿದೆ. ವಾರಾಂತ್ಯದಲ್ಲಿ ಇಲ್ಲಿನ ರಸ್ತೆಯಲ್ಲಿ ಈ- ವೆಹಿಕಲ್ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ.

ಈ ವೇಳೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ನಾಲ್ಕು ತಿಂಗಳ ಅವಧಿಯಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಇದನ್ನು ಚರ್ಚ್​ ಸ್ಟ್ರೀಟ್​ನಲ್ಲಿ ಜಾರಿಗೆ ತರಲಾಗಿದೆ. ತುರ್ತು ಸೇವೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸೈಕಲೀಕರಣ, ಪಾದಚಾರಿಗಳ ಸಂಚಾರಕ್ಕೆ ಉತ್ತೇಜನ ನೀಡಲು ಇದನ್ನು ಮಾಡಲಾಗಿದೆ. ಆರೋಗ್ಯ ವೃದ್ಧಿ ಹಾಗೂ ಮಾಲಿನ್ಯ ತಡೆಗೆ ಈ ಪ್ರಯೋಗ ಯಶಸ್ವಿಯಾಗಲಿ ಎಂದಿದ್ದಾರೆ.

ಇದನ್ನೂ ಓದಿ: KAS​ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ; ಡಾ. ಸುಧಾ ಬಂಗಲೆಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣ, 10 ಲಕ್ಷ ರೂ. ಪತ್ತೆ

ವಾರಾಂತ್ಯದ ಶನಿವಾರ ಮತ್ತು ಭಾನುವಾರ ಎರಡು ದಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ಕೇವಲ ಪಾದಚಾರಿಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕ್ಲೀನ್ ಏರ್ ಸ್ಟ್ರೀಟ್ ಯೋಜನೆಗೆ ಚರ್ಚ್ ಸ್ಟ್ರೀಟ್ ರಸ್ತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
Youtube Video

ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಬಗ್ಗೆ ನಗರ ಭೂಸಾರಿಗೆ ನಿರ್ದೇಶನಾಲಯ ಪ್ರಸ್ತಾವನೆ ನೀಡಿತ್ತು. ಆ ಪ್ರಸ್ತಾವನೆಗೆ ಅಂಗೀಕಾರ ನೀಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅನುಮತಿ ನೀಡಿದ್ದರು. ಅದರಂತೆ ಇಂದಿನಿಂದ ಚರ್ಚ್​ ಸ್ಟ್ರೀಟ್​ನಲ್ಲಿ ವಾರಾಂತ್ಯದ ಎರಡು ದಿನಗಳು ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
Published by: Sushma Chakre
First published: November 7, 2020, 12:42 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories