ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಬೇರೆ ಬೇರೆ ವರ್ಗಗಳ ನಾಯಕರು ಆಕಾಂಕ್ಷಿಗಳಿದ್ದಾರೆ. ನಾಲ್ವರನ್ನ ಈಗಾಗಲೇ ಆಯ್ಕೆ ಮಾಡಲಾಗಿದೆ. ಇಂದು ಸಂಜೆ ಇನ್ನೊಮ್ಮೆ ಸಭೆ ಮಾಡಿ ಇಬ್ಬರು ಅಭ್ಯರ್ಥಿಗಳನ್ನು ನಿರ್ಧರಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಸಿದ್ದರಾಮಯ್ಯ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ನೀಡಲು ನೋಡುತ್ತಿದ್ದೇವೆ. ಅವರಿಗೆ ಟಿಕೆಟ್ ಕೊಟ್ಟರೆ ಪಕ್ಷ ಸಂಘಟನೆ ಸುಲಭವಾಗಲಿದೆ. ನೋಡೋಣ ಸಂಜೆ ಒಂದು ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಆಡಿಟೋರಿಯಂ ಹೋಮಕ್ಕೆ ಗೈರಾದ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ ಅವರು, ಅಂದು ನಾನು ಬೆಳಗಾವಿಯಲ್ಲಿ ಬ್ಯುಸಿಯಾಗಿದ್ದೆ. ಹೀಗಾಗಿ ಅಂದು ಕಾರ್ಯಕ್ರಮಕ್ಕೆ ಬರಲಿಲ್ಲ. ಇಲ್ಲೇ ಇದ್ದಿದ್ದರೆ ನಾನು ಭಾಗಿಯಾಗುತ್ತಿದ್ದೆ. ಎಷ್ಟು ಗಮನಕೊಡಬೇಕೋ ಕೊಡುತ್ತಿದ್ದೆ. ಅದಕ್ಕೆ ಸಲೀಂ ಅಹ್ಮದ್ ಅವರಿಗೆ ನೀವೇ ಮಾಡಿಕೊಳ್ಳಿ ಎಂದಿದ್ದೆ ಎಂದು ಹೇಳಿದರು.
ಇದನ್ನು ಓದಿ: ‘ಕೋವಿಡ್-19 ಮರಣ ಪ್ರಮಾಣದಲ್ಲೂ ಗುಜರಾತ್ ಮಾಡೆಲ್‘ - ರಾಹುಲ್ ಗಾಂಧಿ ಲೇವಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ