ಸಿಎಎ ವಿರೋಧಿ ಪ್ರತಿಭಟನೆ ಹಿಂದೆ ಪಟ್ಟಭದ್ರ ಹಿತಾಸಕ್ತಿಯ ಕೈವಾಡ; ಡಿಸಿಎಂ ಅಶ್ವತ್ಥ ನಾರಾಯಣ ಆರೋಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವರಿಗೆ ಬೆಂಕಿ ಹಚ್ಚುವ, ಹೊತ್ತಿಸುವ ಮನಸ್ಥಿತಿ ಇದೆ. ಇಂತಹ ಮನಸ್ಥಿತಿಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಭಾರತೀಯರೆಲ್ಲರೂ ಸ್ವಾಗತಿಸಬೇಕಾದ ಕಾನೂನು ಜಾರಿಯಲ್ಲಿದೆ. ಹೀಗೆ ಪ್ರತಿಭಟನೆ ಮೂಲಕ ಗೊಂದಲ ಸರಿಯಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.
ಮೈಸೂರು (ಡಿ. 22): ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ವಿರೋಧಪಕ್ಷದ ಪಟ್ಟಭದ್ರ ಹಿತಾಸಕ್ತಿಗಳಿವೆ. ಕೆಲವರಿಗೆ ಬೆಂಕಿ ಹಚ್ಚುವ, ಹೊತ್ತಿಸುವ ಮನಸ್ಥಿತಿ ಇದೆ. ಆ ಪಟ್ಟಭದ್ರ ಹಿತಾಸಕ್ತಿಗಳಿಂದಲೇ ಈ ಕೆಲಸವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಆರೋಪಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಸಿಎಎ ವಿರೋಧಿಸಿ ಕೆಲವರಿಗೆ ಬೆಂಕಿ ಹಚ್ಚುವ, ಹೊತ್ತಿಸುವ ಮನಸ್ಥಿತಿ ಇದೆ. ಇಂತಹ ಮನಸ್ಥಿತಿಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಭಾರತೀಯರೆಲ್ಲರೂ ಸ್ವಾಗತಿಸಬೇಕಾದ ಕಾನೂನು ಜಾರಿಯಲ್ಲಿದೆ. ಹೀಗೆ ಪ್ರತಿಭಟನೆ ಮೂಲಕ ಗೊಂದಲ ಸರಿಯಲ್ಲ ಎಂದು ಮೈಸೂರಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಗಳೂರಿಗೆ ನಿರ್ಬಂಧ ವಿಧಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅಶ್ವತ್ಥನಾರಾಯಣ, ಪ್ರಕ್ಷುಬ್ಧ ಸ್ಥಿತಿಯಲ್ಲಿ ನಿರ್ಬಂಧ ಹೇರಲಾಗಿತ್ತು. ಕಾನೂನು ಸುವ್ಯವಸ್ಥೆ ಕೆಟ್ಟರೆ ಸಿದ್ದರಾಮಯ್ಯನವರನ್ನು ಪ್ರಶ್ನೆ ಮಾಡುತ್ತೀರ? ಅಥವಾ ಸರ್ಕಾರವನ್ನು ಪ್ರಶ್ನೆ ಮಾಡುತ್ತೀರೋ? ಇಲ್ಲಿ ಸರ್ವಾಧಿಕಾರಿತನದ ಪ್ರಶ್ನೆಯಲ್ಲ, ಬಿಜೆಪಿ ಡಿಕ್ಟೇಟರ್ ಆಡಳಿತವನ್ನು ನಡೆಸುತ್ತಿಲ್ಲ. ಇದನ್ನು ವಿಪಕ್ಷ ನಾಯಕರು ಅರ್ಥ ಮಾಡಿಕೊಳ್ಳಲಿ ಎಂದು ಡಿಸಿಎಂ ತಿಳಿಸಿದ್ದಾರೆ.
ಯಾವ ಹುದ್ದೆಯೂ, ಯಾವ ಸ್ಥಾನವೂ ಶಾಶ್ವತವಲ್ಲ. ಡಿಸಿಎಂ ಸ್ಥಾನದ ಬಗ್ಗೆ ಪಕ್ಷದಲ್ಲಿನ ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದರಿಂದ ನಮಗೆ ಮುಜುಗರವಾಗಿಲ್ಲ. ಎಲ್ಲರಿಗೂ ಅವರದ್ದೇ ಆದ ಅಭಿಪ್ರಾಯಗಳು ಇರುತ್ತವೆ. ತಮಗೆ ಆ ಸ್ಥಾನ ಸಿಕ್ಕಿಲ್ಲ ಎಂದು ಮಾತನಾಡಿರಬಹುದು. ಸ್ಥಾನಗಳು ಇರುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ಯೋಚಿಸುತ್ತಾರೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ