ವಿಜಯಪುರದ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಕೊಲೆ

ಈ‌ ಮೊದಲು ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದ ರೇಷ್ಮಾ ಪಡೇಕನೂರ, ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್​ನಿಂದ ಸ್ಪರ್ಧಿಸಿ ಸೋತಿದ್ದರು.

HR Ramesh | news18
Updated:May 17, 2019, 7:33 PM IST
ವಿಜಯಪುರದ ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಕೊಲೆ
ಕೊಲೆಯಾದ ರೇಷ್ಮಾ ಪಡೇಕನೂರ
HR Ramesh | news18
Updated: May 17, 2019, 7:33 PM IST
ವಿಜಯಪುರ: ವಿಜಯಪುರದ ಕಾಂಗ್ರೆಸ್ ಮುಖಂಡೆ, ಜೆಡಿಎಸ್​ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು, ಪರಾರಿಯಾಗಿದ್ದಾರೆ.

ವಿಜಯಪುರ ಜಿಲ್ಲೆಯ ಕೋಲ್ಹಾರ ಬಳಿಯ ಕೃಷ್ಣಾ ನದಿಯ ಸೇತುವೆ ಕೆಳಗೆ ಮೃತದೇಹ ಪತ್ತೆಯಾಗಿದೆ. ಕಳೆದ ರಾತ್ರಿ ದುಷ್ಕರ್ಮಿಗಳು ಕೊಲೆ‌ ಮಾಡಿ‌ರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ರಾತ್ರಿ ನೆರೆಯ ಮಹಾರಾಷ್ಟ್ರದ ಎಂಐಎಂ ಮುಖಂಡನೊಬ್ಬನೊಂದಿಗೆ ರೇಷ್ಮಾ ಕಾರಿನಲ್ಲಿ ತೆರಳಿದ್ದರು ಎಂದು  ಹೇಳಲಾಗುತ್ತಿದೆ. ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ರೇಷ್ಮಾ ಪಡೇಕನೂರ ಅವರ ಮೃತದೇಹ ಕೃಷ್ಣಾ ನದಿ ಸಮೀಪ ಪತ್ತೆಯಾಗಿರುವುದು


ಈ‌ ಮೊದಲು ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದ ರೇಷ್ಮಾ ಪಡೇಕನೂರ, ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್​ನಿಂದ ಸ್ಪರ್ಧಿಸಿ ಸೋತಿದ್ದರು. ಕಳೆದ ಚುನಾವಣೆಯಲ್ಲಿ ವಿಜಯಪುರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದ ಕಾರಣ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದರು.

First published:May 17, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ