• Home
  • »
  • News
  • »
  • state
  • »
  • Vikram Kirloskar: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್ ನಿಧನ

Vikram Kirloskar: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್ ನಿಧನ

ವಿಕ್ರಂ ಕಿರ್ಲೋಸ್ಕರ್

ವಿಕ್ರಂ ಕಿರ್ಲೋಸ್ಕರ್

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ ಎಂದು ಕಂಪನಿ ಹೇಳಿದೆ.

  • News18 Kannada
  • 2-MIN READ
  • Last Updated :
  • Bangalore, India
  • Share this:

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯ ​(Toyota Kirloskar Motor Company) ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್ (Vikram Kirloskar) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಬೆಂಗಳೂರಿನ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ (Private Hospital) ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ಬೆಂಗಳೂರಿನ ಹೆಬ್ಬಾಳದ (Hebbal, Bengaluru) ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಟೊಯೋಟಾ ಮೋಟಾರ್ಟ್​ ಕಂಪನಿ ವಿಕ್ರಂ ಕಿರ್ಲೋಸ್ಕರ್ ನಿಧನವನ್ನು ಟ್ವೀಟ್ (Tweet) ಮೂಲಕ ಖಚಿತಪಡಿಸಿದೆ. ವಿಕ್ರಂ ಕಿರ್ಲೋಸ್ಕರ್ ಅವರಿಗೆ 64 ವರ್ಷ ವಯಸ್ಸಾಗಿತ್ತು. ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ ಎಂದು ಕಂಪನಿ ಹೇಳಿದೆ.


ವಿಕ್ರಂ ಕಿರ್ಲೋಸ್ಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ. ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಕಂಪನಿ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.



ವಿಕ್ರಂ ಕಿರ್ಲೋಸ್ಕರ್ ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತ ಉಂಟಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ವಿಕ್ರಂ ಕಿರ್ಲೋಸ್ಕರ್ ತಡರಾತ್ರಿ ನಿಧನರಾಗಿದ್ದಾರೆ. ಕಿರ್ಲೋಸ್ಕರ್ ಗ್ರೂಪ್‌ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು.


ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ


ಭಾರತದ ಆಟೋಮೋಟಿವ್ ಉದ್ಯಮದ ದಿಗ್ಗಜರಲ್ಲಿ ಒಬ್ಬರಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಕಿರ್ಲೋಸ್ಕರ್ ಅವರ ಅಕಾಲಿಕ ನಿಧನಕ್ಕೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ.



ಈ ದುಃಖವನ್ನು ಭರಿಸುವ ಶಕ್ತಿಯನ್ನು ವಿಕ್ರಂ ಕಿರ್ಲೋಸ್ಕರ್ ಕುಟುಂಬ ಮತ್ತು ಸ್ನೇಹಿತರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.


ಕಿರಣ್ ಮಜುಂದಾರ್-ಶಾ ಸಂತಾಪ


ಬೆಂಗಳೂರಿನ ಪ್ರಧಾನ ಕಛೇರಿಯ ಬಯೋಫಾರ್ಮಾಸ್ಯುಟಿಕಲ್ಸ್ ಕಂಪನಿ ಬಯೋಕಾನ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್-ಶಾ ಅವರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ:  TATA-Bisleri: 7000 ಕೋಟಿ ಆಸ್ತಿ ಭಾರ ಹೊರಲು ಒಪ್ಪದ ಮಗಳು! ಇದೇ ಕಾರಣಕ್ಕೆ ಬಿಸ್ಲೆರಿ ಮಾರಿದ್ರಾ ರಮೇಶ್​ ಚೌಹಾಣ್​?


ವಿಕ್ರಂ ನಿಧನದ ಸುದ್ದಿ ಆಘಾತವನ್ನುಂಟು ಮಾಡಿದೆ. ಇಂದು ನಾವು ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ವಿಕ್ರಂ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ ಎಂದು ಬರೆದು ಫೋಟೋ ಹಂಚಿಕೊಂಡಿದ್ದಾರೆ.



ಮೊದಲ ಕಬ್ಬಿಣದ ನೇಗಿಲು 


ಕಿರ್ಲೋಸ್ಕರ್ ಗ್ರೂಪ್ ಒಂದು ಶತಮಾನಕ್ಕೂ ಹೆಚ್ಚು ಕಾಲ ಭಾರತದ ಕೈಗಾರಿಕೀಕರಣಕ್ಕೆ ತನ್ನ ಕೊಡುಗೆ ನೀಡಿದೆ. ಭಾರತದ ಮೊದಲ ಕಬ್ಬಿಣದ ನೇಗಿಲನ್ನು ತಯಾರಿಸಿದ ಹೆಗ್ಗಳಿಗೆ ಕಿರ್ಲೋಸ್ಕರ್ ಕಂಪನಿಗೆ ಸಲ್ಲುತ್ತದೆ. ಕಿರ್ಲೋಸ್ಕರ್ ಗ್ರೂಪ್ ಸ್ಥಳೀಯ ತಂತ್ರಜ್ಞಾನ ಮತ್ತು ಉದ್ಯಮವನ್ನು ಅಭಿವೃದ್ಧಿಪಡಿಸುತ್ತಿದೆ.


ಇದನ್ನೂ ಓದಿ:  Elon Musk: ಟ್ವಿಟರ್ ಕಚೇರಿಯಲ್ಲಿ ಎಲಾನ್ ಮಸ್ಕ್​ ಮಗನ ತುಂಟಾಟ, ಮೀಟಿಂಗ್ ರೂಂನಲ್ಲೂ ಕಲರವ!


ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM), ವಾಹನಗಳ ಶ್ರೇಣಿಯನ್ನು ಮಾರಾಟ ಮಾಡುತ್ತದೆ. ಇದು ಜಪಾನಿನ ಆಟೋ ಮೇಜರ್ ಟೊಯೋಟಾ ಮೋಟಾರ್ ಕಂಪನಿ ಮತ್ತು ಕಿರ್ಲೋಸ್ಕರ್ ಗ್ರೂಪ್ ನಡುವಿನ ಜಂಟಿ ಉದ್ಯಮವಾಗಿದೆ.

Published by:Mahmadrafik K
First published: