HOME » NEWS » State » VILLAGE STAY MINISTER R ASHOK VILLAGE STAY ON APRIL 17TH AT YADAGIRI NMPG LG

Village Stay: ಏ.17 ರಂದು  ಯಾದಗಿರಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ

ಏಪ್ರಿಲ್ 17 ರ ರಂದು ದೇವತ್ಕಲ್ ಗ್ರಾಮದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ದೇವತ್ಕಲ್ ಗ್ರಾಮದ  ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

news18-kannada
Updated:March 24, 2021, 2:55 PM IST
Village Stay:  ಏ.17 ರಂದು  ಯಾದಗಿರಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ
ಸಚಿವ ಆರ್. ಅಶೋಕ್
  • Share this:
ಯಾದಗಿರಿ(ಮಾ.24): ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ  ಏಪ್ರಿಲ್ 17 ರಂದು ಯಾದಗಿರಿ ಜಿಲ್ಲೆಯ  ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ  ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಗ್ರಾಮ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಕಂದಾಯ ಸಚಿವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಕುರಿತು  ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 

ಏಪ್ರಿಲ್ 17 ರ ರಂದು ದೇವತ್ಕಲ್ ಗ್ರಾಮದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ದೇವತ್ಕಲ್ ಗ್ರಾಮದ  ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಸ್ಪಂಧಿಸಿ ಪರಿಹಾರ ಕಲ್ಪಿಸಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸುವುದು. ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವುದು. ಆಧಾರ್ ಕಾರ್ಡ್  ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ, ಪ್ರವಾಹದ ಹಾನಿ ತಡೆಗಟ್ಟಲು ಕ್ರಮ, ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗ್ರತೆ ಕ್ರಮವಹಿಸುವುದರ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಕೋಲಾರದ ಮಾಲೂರಿನ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ ಕೊಟ್ಟ ಒಸಾಟ್ ಸಂಸ್ಥೆ

ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂದಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ನೀಡಿರುವ ಮಾರ್ಗಸೂಚಿಗಳನ್ನು ಗ್ರಾಮ ವಾಸ್ತವ್ಯದಲ್ಲಿ ಅನುಸರಿಸಲು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಗ್ರಾಮ ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಮಾಡಿ ನಂತರ ವಿವಿಧ ಕಾಲೋನಿಗಳನ್ನು ವೀಕ್ಷಣೆ ಮಾಡಿದರು.ನಂತರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿವಿಧ ತರಗತಿಗಳು ಹಾಗೂ ಕಂಪ್ಯೂಟರ್ ಕೊಠಡಿ ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು. ಜಿಲ್ಲಾಧಿಕಾರಿ ಅವರು ಆಗಮಿಸಿದ ಹಿನ್ನೆಲೆ ಗ್ರಾಮಸ್ಥರು ಅನೇಕ ಸಮಸ್ಯೆಗಳನ್ನು ಗಮನಕ್ಕೆ ತಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಸುರಪುರ ತಾಲೂಕಿನ ತಹಶಿಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶಿಲ್ದಾರ್ ವಿನಯ್ ಪಾಟೀಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ ಭಜಂತ್ರಿ ಇದ್ದರು.
Published by: Latha CG
First published: March 24, 2021, 2:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories